AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ನೈತಿಕ ಪೊಲೀಸ್ ಗಿರಿ ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.

ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
Rakesh Nayak Manchi
|

Updated on:May 23, 2023 | 3:48 PM

Share

ಬೆಂಗಳೂರು: ನೈತಿಕ ಪೊಲೀಸ್ ಗಿರಿ (Moral policing) ಮಾಡುವವರ‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಹಿರಿಯ ಪೊಲೀಸರು ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.

ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಅಂತಾ ಗೊತ್ತಿದೆ. ಆ ತಪ್ಪು ಮರುಕಳಿಸಬಾರದು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಇಲ್ಲಿಗಲ್ ಕ್ಲಬ್ ನಡೆಸಲು ಅವಕಾಶ ನೀಡಬಾರದು. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಇದನ್ನೂ ಓದಿ: Siddaramaiah-DK Shivakumar: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ನಡುವಿನ ಅಸಮಾಧಾನಗಳನ್ನು ಕೆಮೆರಾಗಳ ಮುಂದೆ ತೋರ್ಪಡಿಸುತ್ತಿಲ್ಲ!

ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್​​ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.

ಅಕ್ರಮ ನೈಟ್ ಕ್ಲಬ್​​ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್​​, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದರೆ ಸುಮೋಟೋ ಕೇಸ್ ದಾಖಲಿಸಿ ಕ್ರಮ ಪ್ರಕರಣ ಹಾಕಿರುವ ಬಗ್ಗೆ ಹಾಗೂ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸದೇ ಇರುವ ವಿಚಾರವೂ ಸಭೆಯಲ್ಲಿ ಚರ್ಚೆ‌ ನಡೆಯಿತು.

ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ​​ ಪ್ರತಾಪ್ ರೆಡ್ಡಿ, ಸಚಿವರಾದ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್​​, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್​ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Tue, 23 May 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?