ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸೇರಿ ಇತರೆ ಇಲಾಖೆಗಳೊಂದಿಗೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದ್ದಾರೆ. ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಅನುದಾನ ಹಂಚಿಕೆ, ಯುವನಿಧಿ ಯೋಜನೆ, ಕೌಶಲ್ಯ ತರಬೇತಿ ಮತ್ತು ಗ್ರಾಮೀಣ ಮಹಿಳೆಯರ ಸಬಲೀಕರಣದ ಬಗ್ಗೆ ಚರ್ಚಿಸಲಾಗಿದೆ. ಆದಷ್ಟು ಬೇಗನೆ ಯೋಜನೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸೇರಿ ಇತರೆ ಇಲಾಖೆಗಳೊಂದಿಗೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸೇರಿ ಇತರೆ ಇಲಾಖೆಗಳೊಂದಿಗೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 09, 2025 | 4:18 PM

ಬೆಂಗಳೂರು, ಜನವರಿ 09: ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಜೊತೆ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದಾರೆ. ವೈದ್ಯಕೀಯ ಕಾಲೇಜುಗಳ ನಿರ್ಮಾಣ, 2024-25ನೇ ಸಾಲಿನ ವೈದ್ಯಕೀಯ ಶಿಕ್ಷಣ ಇಲಾಖೆಗೆ ಅನುದಾನ ಹಂಚಿಕೆ, ಆಸ್ಪತ್ರೆಗಳ ನಿರ್ಮಾಣ ಹೀಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮತ್ತು ಕೆಲ ಸೂಚನೆಗಳನ್ನು ಅಧಿಕಾರಿಗಳಿಗೆ ಸಿಎಂ ನೀಡಿದ್ದಾರೆ.

ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಭೆ ಮುಖ್ಯಾಂಶಯಗಳು

  • ಪ್ರಸ್ತುತ ಬಜೆಟ್‌ನಲ್ಲಿ ಇಲಾಖೆಗೆ ರೂ.1864 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಇದುವರೆಗೆ ರೂ. 1235 ಕೋಟಿ ವೆಚ್ಚವಾಗಿದೆ.
  • ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಉನ್ನತೀಕರಣಕ್ಕಾಗಿ ರೂ.100 ಕೋಟಿ ಒದಗಿಸಲಾಗಿದೆ, ಈ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.
  • ಕೌಶಲ್ಯಾಭಿವೃದ್ಧಿ ಆದರೆ ಮಾತ್ರ ಉದ್ಯೋಗ ಸಿಗಲು ಸಾಧ್ಯವಿದೆ. ಕೌಶಲ್ಯ ನೀಡಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು.
  • ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಬೇಕು.
  • ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋಂದಾಯಿಸಿದ್ದು, ಇವರ ಪೈಕಿ 1,61,883 ಅರ್ಹ ಫಲಾನುಭವಿಗಳಿಗೆ ರೂ.216.38 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
  • ಈ ವರ್ಷದ ಬಜೆಟ್​​ನಲ್ಲಿ ಘೋಷಿಸಲಾಗಿದ್ದು, ಸುಮಾರು 20ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಮತ್ತು ಕಮ್ಯುನಿಕೇಶನ್‌ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು.
  • ರಾಜ್ಯದಲ್ಲಿ ಆರಂಭಿಸಲಾಗಿರುವ ಅಕ್ಕ ಕಾಫಿ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಸೂಚನೆ.
  • ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿಗೆ ಕ್ರಮ. ಐಟಿಐ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

  • ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ.
  • 2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
  • 2023-24 ಸಾಲಿನಲ್ಲಿ ಅನುಮೋದನೆಗೊಂಡು, ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು.
  • ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
  • ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸುವ ಕುರಿತು ಕ್ರಮ ಕೈಗೊಳ್ಳಬೇಕು.
  • ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು.
  • ಕ್ಯಾನ್ಸರ್‌ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್