ಆಪರೇಷನ್ ಹಸ್ತ ಅಲ್ಲ, ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

| Updated By: Ganapathi Sharma

Updated on: Nov 06, 2023 | 3:58 PM

ಆದರೆ, ಆಪರೇಷನ್ ಹಸ್ತದ ಬಗ್ಗೆ ಚರ್ಚಿಸಿಲ್ಲ ಎಂದ ಮರುಕ್ಷಣವೇ ಅವರು, ಯಾರೆಲ್ಲಾ ಬರುತ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದಿದ್ದಾರೆ. ನಾವು ಯಾವುದೇ ಆಪರೇಷನ್‌ ಮಾಡುತ್ತಿಲ್ಲ. ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ. ಅದು ಬಿಜೆಪಿಯವರಾಗಿರಲಿ, ಜೆಡಿಎಸ್‌ನವರಾಗಿರಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆಪರೇಷನ್ ಹಸ್ತ ಅಲ್ಲ, ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us on

ಬೆಂಗಳೂರು, ನವೆಂಬರ್ 6: ಆಪರೇಷನ್ ಹಸ್ತದ (Operation Hasta) ಬಗ್ಗೆ ಉಪಾಹಾರ ಸಭೆಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ ಅವರು, ಬ್ರೇಕ್‌ಫಾಸ್ಟ್ ಸಭೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ, ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದೆವು ಎಂದು ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್, ಅನೇಕ ಸಚಿವರು ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ, ಆಪರೇಷನ್ ಹಸ್ತದ ಬಗ್ಗೆ ಚರ್ಚಿಸಿಲ್ಲ ಎಂದ ಮರುಕ್ಷಣವೇ ಅವರು, ಯಾರೆಲ್ಲಾ ಬರುತ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದಿದ್ದಾರೆ. ನಾವು ಯಾವುದೇ ಆಪರೇಷನ್‌ ಮಾಡುತ್ತಿಲ್ಲ. ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ. ಅದು ಬಿಜೆಪಿಯವರಾಗಿರಲಿ, ಜೆಡಿಎಸ್‌ನವರಾಗಿರಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಬಹಳಷ್ಟು ಜನ‌ ಕಾಂಗ್ರೆಸ್‌ಗೆ ಬರುತ್ತಾರೆ. ಕಾಂಗ್ರೆಸ್‌ಗೆ ಹಾಲಿ ಶಾಸಕರು, ಮಾಜಿ ಶಾಸಕರು ಬರಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ಆಪರೇಷನ್ ಹಸ್ತ ಮತ್ತು ಆಪರೇಷನ್ ಕಮಲದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಒಂದೆಡೆ, ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂಬ ವದಂತಿಗಳಿವೆ. ಈ ಮಧ್ಯೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎಷ್ಟು ದಿನ ಇರಲಿದೆಯೋ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರೇ ಕುತೂಹಲ ಸೃಷ್ಟಿಸಿದ್ದಾರೆ. ಈ ವಿಚಾರವಾಗಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ತಿರುಗೇಟು ನೀಡಿಯೂ ಆಗಿದೆ.

ಇದನ್ನೂ ಓದಿ: ತಮ್ಮ ಸಿಎಂ ಕುರ್ಚಿ ಬಗ್ಗೆ ಅನುಮಾನ ವ್ತಕ್ತಪಡಿಸಿದ ಮೋದಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ಮತ್ತೊಂದೆಡೆ, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಶಾಸಕರನ್ನು ಸೆಳೆಯಲು ಹಾಗೂ ಆ ಮೂಲಕ ಜೆಡಿಎಸ್, ಬಿಜೆಪಿ ಮೈತ್ರಿ ದುರ್ಬಲಗೊಳಿಸಲು ಡಿಕೆ ಸಹೋದರು (ಡಿಕೆ ಶಿವಕುಮಾರ್ & ಡಿಕೆ ಸುರೇಶ್) ಯೋಜನೆ ರೂಪಿಸಿದ್ದಾರೆ ಎಂದು ಇತ್ತೀಚೆಗೆ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ