AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರ ಬೆಂಗಳೂರಿಗೆ ಸೇರಿಸುವ ವಿಚಾರ: ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ, ಯಾವಾಗಲೂ ಹಾಗೆ ಆಗಲ್ಲ, ವಿಫಲ ಪ್ರಯತ್ನ ಎಂದರು.

ಕನಕಪುರ ಬೆಂಗಳೂರಿಗೆ ಸೇರಿಸುವ ವಿಚಾರ: ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 28, 2023 | 4:32 PM

Share

ಉಡುಪಿ, ಅ.28: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿಕೆ ವಿಚಾರ ‘ ಈ ಬಗ್ಗೆ ನನ್ನ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಉಡುಪಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಂಟ ಸಮಾವೇಶದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕನಕಪುರ ಸೇರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ ಎಂದರು. ಈ ಹೇಳಿಕೆ ಸಿಎಂ ಹಾಗೂ ಡಿಸಿಎಂ ನಡುವೆ ವೈಮನಸ್ಸು ಇರುವುದು ತೋರುತ್ತಿದೆ.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರವಾಗಿ ಮಾತನಾಡಿದ ಸಿಎಂ ‘ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ, ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ. ಅವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ, ಯಾವಾಗಲೂ ಹಾಗೆ ಆಗಲ್ಲ, ವಿಫಲ ಪ್ರಯತ್ನ ಎಂದರು. ಬಿಜೆಪಿಯವರು ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದರು ಹೇಳಿದರು.

ಇದನ್ನೂ ಓದಿ:ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ, ಅಸೆಂಬ್ಲಿ ಸ್ಪೀಕರ್ ಯುಟಿ ಖಾದರ್ ಉಪಸ್ಥಿತಿ

ಇನ್ನು ವಿಶ್ವ ಬಂಟ ಸಮಾವೇಶದಲ್ಲಿ ಮಾತನಾಡಿದ ಅವರು ‘ ಜಗತ್ತಿನ ಅನೇಕ ಪ್ರದೇಶಗಳಿಗೆ ಬಂಟರು ವಿಸ್ತರಿಸಿದ್ದು, ಉದ್ಯೋಗ ಹಾಗೂ ಉದ್ದಿಮೆ ಅರಸುತ್ತಾ ಸರ್ವವ್ಯಾಪಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಇಂದು (ಅ.28) ಉಡುಪಿಯಲ್ಲಿ ಹಮ್ಮಿಕೊಂಡಿದ್ದ ವಿಶಿಷ್ಟ ಸಂಸ್ಕೃತಿ ಪರಂಪರೆ ಇರುವ ಸಮುದಾಯ ಬಂಟರದ್ದು, ರಾಜಕೀಯ ಕ್ರೀಡೆ, ಸಿನೆಮಾ ಉದ್ಯಮದಲ್ಲಿ ಬಂಟರ ಛಾಪು ಇದೆ ಎಂದರು.

ತುಳುವರು ಭಾಷೆ ಸಂಸ್ಕೃತಿ ಯನ್ನು ಎಂದಿಗೂ ಬಿಟ್ಟುಕೊಡಲ್ಲ

‘ಎಲ್ಲೇ ಇದ್ದರೂ ತಮ್ಮ ತನವನ್ನು ಮರೆತಿಲ್ಲ. ಗುಂಪಿನಲ್ಲಿ ಇಬ್ಬರು ತುಳುವರು ಸಿಕ್ಕರೆ ತುಳು ಮಾತು ಆರಂಭಿಸುತ್ತೀರಿ. ಭಾಷೆ ಸಂಸ್ಕೃತಿಯನ್ನು ಎಂದಿಗೂ ಬಿಟ್ಟುಕೊಡಲ್ಲ. ಬಂಟರು ಜಾತ್ಯಾತೀತ ಸಮುದಾಯದವರು. ಮನುಷ್ಯ ಮನುಷ್ಯರನ್ನು ದ್ವೇಷ ಮಾಡುವ ಪ್ರವೃತ್ತಿ ಬಿಡಬೇಕು. ಮನುಷ್ಯತ್ವ ಮೊದಲು, ಬದುಕು ಆಮೇಲೆ. ವಿಶ್ವಮಾನವರಾಗುವ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಹೇಳಿದರು.

ಮುಂದಿನ ಬಜೆಟ್ ಮಂಡಿಸುವಾಗ ಬಂಟ ನಿಗಮ ಘೋಷಣೆ ಮಾಡುತ್ತೇನೆ

ಸಮಾವೇಶದಲ್ಲಿ ಬಂಟರ ಅಭಿವೃದ್ಧಿ , ಸಂಘಟನೆ ಬಗ್ಗೆ ಚರ್ಚೆ ಮಾಡಿ. ನಿಮ್ಮ ಸಂಸ್ಕೃತಿ ಬೇರೆಯವರು ಕೂಡ ಅಳವಡಿಸುವಂತಾಗಲಿ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಟರ ಅಭಿವೃದ್ಧಿ ನಿಗಮ  ಇತ್ತು. ಮುಂದಿನ ಬಜೆಟ್ ಮಂಡಿಸುವಾಗ ಬಂಟ ನಿಗಮ ಘೋಷಣೆ ಮಾಡುತ್ತೇನೆ. ಬಂಟರ ಸಮ್ಮೇಳನ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Sat, 28 October 23

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ