ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಏರ್‌ಪೋರ್ಟ್‌ನಲ್ಲಿ ಆಪ್ತ ಸಚಿವರ ಜೊತೆ ಸಿದ್ದರಾಮಯ್ಯ ರಹಸ್ಯ ಸಭೆ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ ಕೊಪ್ಪಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರ ಜೊತೆ ಸೀಕ್ರೆಟ್ ಮೀಟಿಂಗ್ ಮಾಡಿರುವುದು ಹತ್ತಾರು ಚರ್ಚೆ ಹುಟ್ಟುಹಾಕಿದೆ. ಹಾಗಾದ್ರೆ, ಸಿದ್ದರಾಮಯ್ಯ ಯಾರು ಜೊತೆ? ಎಲ್ಲಿ ಗುಪ್ತ್​ ಗುಪ್ತ್​ ಸಭೆ ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಏರ್‌ಪೋರ್ಟ್‌ನಲ್ಲಿ ಆಪ್ತ ಸಚಿವರ ಜೊತೆ ಸಿದ್ದರಾಮಯ್ಯ ರಹಸ್ಯ ಸಭೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 21, 2023 | 9:22 AM

ಕೊಪ್ಪಳ, (ನವೆಂಬರ್ 21): ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿವೆ. ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ವಿಚಾರ ಚರ್ಚೆಯಲ್ಲಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar)ನಡುವೆ ಒಳಗೊಳಗೆ ಮೇಲಾಟ ನಡೆಯುತ್ತಲೇ ಇದೆ. ನಿಗಮ ಮಂಡಳಿ ನೇಮಕಾತಿಗಾಗಿ ಇಂದು(ನವೆಂಬರ್ 21) ಸುರ್ಜೇವಾಲ, ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನವೇ ಸಿದ್ದರಾಮಯ್ಯ ಕೊಪ್ಪಳದಲ್ಲಿ ನಿನ್ನೆ(ನವೆಂಬರ್ 20) ಆಪ್ತ ಸಚಿವರ ಜತೆಗೌಪ್ಯ ಮೀಟಿಂಗ್ ಮಾಡಿರುವುದು ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ.

ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ವಿಜಯಪುರಕ್ಕೆ ಹೋಗಲು ಸಚಿವ ಎಂ.ಬಿ. ಪಾಟೀಲ್, ಕೆ.ಎನ್. ರಾಜಣ್ಣ ಜೊತೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಸ್ಸಾಪುರ್ ಏರಸ್ಟ್ರಿಪ್‌ಗೆ ಆಗಮಿಸಿದ್ದರು. ನಂತರ ಕೊಪ್ಪಳದಿಂದ ವಿಜಯಪುರಕ್ಕೆ ಹೋಗಿ, ಅಲ್ಲಿ‌ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮತ್ತೆ ಸಂಜೆ 5 ಗಂಟೆಗೆ ವಿಜಯಪುರದ ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದ ಬಸ್ಸಾಪುರ ಏರಸ್ಟ್ರಿಪ್‌ಗೆ ವಾಪಸ್ ಆಗಿದ್ದು, ಈ ಸಮಯದಲ್ಲಿ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಸಿದ್ದರಾಮಯ್ಯ, ಸಚಿವರಾದ ಎಂ‌.ಬಿ.ಪಾಟೀಲ್, ಕೆ.ಎನ್.ರಾಜಣ್ಣ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗಂಭೀರ ಚರ್ಚೆ ನಡೆಸಿದ್ದಾರೆ. ಅಲ್ಲದೇ ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪೋನ್ ಕರೆಯೊಂದು ಬಂದಿದ್ದು. ಈ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ: ಮಂಗಳವಾರ ಬೆಂಗಳೂರಿಗೆ ರಣದೀಪ್ ಸುರ್ಜೇವಾಲ, ಅಂತಿಮಗೊಳ್ಳುತ್ತಾ ಪಟ್ಟಿ?

ಈ ಕುರಿತು ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ, ಎಂ.ಬಿ. ಪಾಟೀಲರನ್ನು ಪ್ರಶ್ನಿಸಿದಾಗ ಯಾವುದೇ ಸಭೆ, ಚರ್ಚೆ ಆಗಿಲ್ಲ. ಸುಮ್ಮನೆ ಕೂತಿದ್ದೆವು ಎಂದು ಉತ್ತರಿಸಿದರು.

ದೆಹಲಿಯಿಂದ ಕಾಲ್ ಬಂದಿತ್ತು ಎಂಬ ವಿಚಾರವೂ ತೇಲಿ ಬಂತು, ಈ ಬಗ್ಗೆ ಪಾಟೀಲರ ಬಳಿ ಪ್ರಶ್ನೆ ಎತ್ತಿದಾಗ, ನಿಮಗೇನಾದರೂ ಹೇಳಿದ್ರಾ? ಯಾವುದೇ ಕಾಲ್ ಇಲ್ಲ, ಏ‌ನಿಲ್ಲ ಎನ್ನುತ್ತ ತೆರಳಿದರು.

ಒಟ್ಟಿನಲ್ಲಿ ನಿಗಮ ಮಂಡಳಿ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಸಚಿವರೊಂದಿಗೆ ಗುಪ್ತ್ ಗುಪ್ತ್​ ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಜೊತೆ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Tue, 21 November 23

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್