AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮೈಸೂರು ಆಮಿಸಲಿದ್ದಾರೆ. ಇದನ್ನೇ ಅಸ್ತವನ್ನಾಗಿ ಮಾಡಿಕೊಂಡು ಕಾಂಗ್ರೆಸ್​ ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ ಎಂಬ ಅಭಿಯಾನವನ್ನು ಆರಂಭಿಸಿದೆ. ಕರ್ನಾಟಕಕ್ಕೆ ಕಾಲಿಡುವ ಮೊದಲು ಕಾಂಗ್ರೆಸ್​ ಕೇಳಿದ ಈ ಸಾಲು ಸಾಲು ಪ್ರಶ್ನೆಗೆ ಉತ್ತರಿಸಿರುವಿರಾ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಪೋಸ್ಟ್
Anil Kalkere
| Edited By: |

Updated on: Feb 10, 2024 | 9:38 PM

Share

ಬೆಂಗಳೂರು, ಫೆಬ್ರವರಿ 10: ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಈ ಕುರಿಯಾಗಿ ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ ಎಂದು ಟ್ವೀಟ್ ಮಾಡಿದ್ದು, ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ ಎಂದು ವಾಗ್ದಾಳಿ ಮಾಡಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಳೆದ 10 ವರ್ಷಗಳ ಪ್ರಧಾನಿ ಮೋದಿ ಆಡಳಿತವನ್ನು ‘ವಿನಾಶ ಕಾಲ‘ ಎಂದ ಸಿಎಂ ಸಿದ್ದರಾಮಯ್ಯ

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ರೂ. ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ?

ಇದನ್ನೂ ಓದಿ: ರಾಜ್ಯ ಬಿಜೆಪಿ ನಾಯಕರೊಂದಿಗೆ ನಾಳೆ ಅಮಿತ್ ಶಾ ಮಹತ್ವದ ಸಭೆ; ಮಂಡ್ಯ ಕ್ಷೇತ್ರದ ಚರ್ಚೆ ಸಾಧ್ಯತೆ ಇದೆ ಎಂದ ವಿಜಯೇಂದ್ರ

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ ಎಂದು ಸಾಲು ಸಾಲು ಪ್ರಶ್ನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.