AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress CLP Meeting: ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

Congress CLP Meeting: ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಸಿದ್ದರಾಮಯ್ಯ
Sunil MH
| Edited By: |

Updated on:Jul 27, 2023 | 10:29 PM

Share

ಬೆಂಗಳೂರು: ಸುಳ್ಳುಗಳಿಗೆ ದಾಳವಾಗಬೇಡಿ. ಏನೇ ಅಸಮಾಧಾನಗಳಿದ್ದರೂ ನನ್ನ ಬಳಿ ಚರ್ಚಿಸಿ ಅಥವಾ ಪಕ್ಷದ ವೇದಿಕೆಯಲ್ಲಿ ಹೇಳಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ (Congress CLP Meeting) ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡಿ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ‌ ಸರಮಾಲೆಗಳ ಮೂಲಕ ಅವರು (ಪ್ರತಿಪಕ್ಷಗಳು) ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ ಎಂದು ಹೇಳಿದರು.

ಪ್ರತಿಪಕ್ಷಗಳ ಸುಳ್ಳುಗಳು ಮತ್ತು ಆ ಮೂಲಕ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿರಬೇಕು. ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ, ಎಂದು ಕಿವಿಮಾತು ಹೇಳಿದರು.

ತಿಂಗಳಿಗೊಮ್ಮೆ ಶಾಸಕರ ಸಭೆ ನಡೆಸುತ್ತೇನೆ ಎಂದ ಸಿದ್ದರಾಮಯ್ಯ

ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಶಾಸಕರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಕೆಲವು ಸಚಿವರು ಭೇಟಿಗೆ ಸಿಗುತ್ತಿಲ್ಲ. ಇದರಿಂದ ಅಭಿವೃದ್ಧಿಕಾರ್ಯಗಳಿಗೆ ತೊಡಕಾಗುತ್ತಿದೆ ಎಂದು ದೂರಿ ಕೆಲವು ಮಂದಿ ಶಾಸಕರು ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿತ್ತು. ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದೂ ಶಾಸಕರು ಆಗ್ರಹಿಸಿದ್ದರು. ಪ್ರತಿಪಕ್ಷಗಳಾ ಬಿಜೆಪಿ ಹಾಗೂ ಜೆಡಿಎಸ್ ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದವು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ತಿಂಗಳಲ್ಲಿ ಆಂತರಿಕ ಕಲಹ ಹೆಚ್ಚಾಗಿದೆ. ಸರ್ಕಾರದ ಹಾಗೂ ಸಚಿವರ ವಿರುದ್ಧ ಆಡಳಿತ ಪಕ್ಷದ ಶಾಸಕರೇ ದನಿಯೆತ್ತಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ಟೀಕಿಸಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Thu, 27 July 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ