AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಕಾಂಗ್ರೆಸ್​ನಲ್ಲಿ ಕೋಲಾಹಲ: ಟಿಕೆಟ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಸಿಎಂ, ಡಿಸಿಎಂ!

ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ಕೋಲಾಹಲ ಸೃಷ್ಟಿಸಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ನಾಯಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಕೋಲಾರ ಭಾಗದ ಕಾಂಗ್ರೆಸ್ ಶಾಸಕರು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ರಾಜೀನಾಮೆಯ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಹೈಡ್ರಾಮಾ ನಡೆದಿದೆ. ಇದರಿಂದ ಎಚ್ಚೆತ್ತ ಸಿಎಂ , ಡಿಸಿಎಂ ಟಿಕೆಟ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದಿದ್ದಾರೆ.

ಕೋಲಾರ ಕಾಂಗ್ರೆಸ್​ನಲ್ಲಿ ಕೋಲಾಹಲ: ಟಿಕೆಟ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಸಿಎಂ, ಡಿಸಿಎಂ!
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
TV9 Web
| Edited By: |

Updated on:Mar 27, 2024 | 4:09 PM

Share

ಬೆಂಗಳೂರು/ಕೋಲಾರ, (ಮಾರ್ಚ್ 27): ಕೋಲಾರ ಲೋಕಸಭೆ ಕ್ಷೇತ್ರದಲ್ಲಿ (Kolar constituency) ಕಾಂಗ್ರೆಸ್‌ ಪಕ್ಷದಿಂದ (Congress) ಸ್ಪರ್ಧಿಸುವ (Lok Sabha Election) ಅಭ್ಯರ್ಥಿಯ ಹೆಸರು ಫೈನಲ್‌ ಆಗಿದ್ದು, ವರಿಷ್ಠರು ಅಳೆದು ತೂಗಿ ಕೆ.ಎಚ್.‌ ಮುನಿಯಪ್ಪ (K.H. Muniyappa) ಅವರ ಅಳಿಯ ಚಿಕ್ಕಪೆದ್ದಣ್ಣಗೆ ಕೋಲಾರ ಟಿಕೆಟ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದ್ದು, ರಮೇಶ್ ಕುಮಾರ್ (Ramesh Kumar) ಟೀಮ್ ಕೆರಳಿದೆ. ಅಲ್ಲದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದೆ. ಈ ಹಿನ್ನೆಲೆಯಲ್ಲಿ ಕ್ಷಣ ಕ್ಷಣಕ್ಕೂ ಕಾಂಗ್ರೆಸ್​ಕೋಲಾರ ಟಿಕೆಟ್ ಕೋಲಾಹಲ ಸೃಷ್ಟಿಸುತ್ತಿದೆ. ಹೀಗಾಗಿ ಕೋಲಾರ ಟಿಕೆಟ್‌ ಕಗ್ಗಂಟು ಬಿಡಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದು, ಇಂದು (ಮಾರ್ಚ್ 27) ರಾತ್ರಿ ಸಭೆ ಕರೆದಿದ್ದಾರೆ.

ಹೈಕಮಾಂಡ್​ ವಿರುದ್ಧವೇ ಸಿಡಿದೆದ್ದ ರಮೇಶ್ ಕುಮಾರ್ ಬಣ

ಕೋಲಾರ ಟಿಕೆಟ್​ಗಾಗಿ ಸಚಿವ ಕೆಎಚ್​ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ನಡುವೆ ಪೈಪೋಟಿ ನಡೆದಿದೆ. ಮುನಿಯಪ್ಪ ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರೆ, ಇದಕ್ಕೆ ರಮೇಶ್ ಕುಮಾರ್ ಬಣ ವಿರೋಧ ವ್ಯಕ್ತಪಡಿಸುತ್ತಿದೆ. ನಿನ್ನೆ(ಮಾರ್ಚ್ 26) ಮುನಿಯಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬೆನ್ನಲ್ಲೇ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಲು ಖರ್ಗೆ ಸಮ್ಮತಿಸಿದ್ದಾರೆ. ಇದರಿಂದ ರಮೇಶ್ ಕುಮಾರ್ ಬಣ ರೊಚ್ಚಿಗೆದ್ದಿದೆ.

ಇದನ್ನೂ ಓದಿ: ವಿಧಾನಪರಿಷತ್​​ ಸಭಾಪತಿ ಕಚೇರಿಯಲ್ಲಿ ಹೈಡ್ರಾಮಾ: ಕಾಂಗ್ರೆಸ್ ಸದಸ್ಯರ ರಾಜೀನಾಮೆ ಪ್ರಹಸನ

ಮುನಿಯಪ್ಪ ಅಳಿಯಗೆ ಟಿಕೆಟ್​ ಖಚಿತವಾಗಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ಕೆರಳಿರುವ ರಮೇಶ್ ಕುಮಾರ್ ಟೀಮ್ ರಾಜೀನಾಮೆ ಬೆದರಿಕೆ ಅಸ್ತ್ರ ಪ್ರಯೋಗ ಮಾಡಿದೆ. ಹಾಲಿ ಎಂಎಲ್‌ಸಿ, ಹಾಲಿ ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಬೇಡಿಕೆಗೆ ಹೈಕಮಾಂಡ್ ಮಣಿಯದಿದ್ದರೆ ರಾಜೀನಾಮೆ ಕೊಡುತ್ತೇವೆ ಎಂದು ಕೋಲಾರ ಶಾಸಕರು ಬಹಿರಂಗವಾಗಿ ಹೇಳಿದ್ದಾರೆ.

ಎಂಎಲ್‌ಸಿಗಳಾದ ಅನಿಲ್ ಕುಮಾರ್, ನಜೀರ್ ಅಹ್ಮದ್, ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಸೇರಿ ಪ್ರಮುಖ ಶಾಸಕರು, ಮುನಿಯಪ್ಪ ಅಳಿಯನಿಗೆ ಟಿಕೇಟ್ ನೀಡಿದರೆ ರಾಜೀನಾಮೆ ಕೊಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ರಾತ್ರಿ ಹೈವೋಲ್ಟೇಜ್ ಮೀಟಿಂಗ್

ಕೋಲಾರ ಟಿಕೆಟ್​ಗಾಗಿ ನಾಯಕ ನಡುವೆ ಅಸಮಾಧಾನ ತಾರಕ್ಕೇರಿದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಇದಕ್ಕೆ ಒಂದು ಅಂತ್ಯ ಹಾಡಬೇಕೆಂದು ಇಂದು (ಮಾರ್ಚ್ 27) ರಾತ್ರಿ ಹೈ ವೋಲ್ಟೇಜ್ ಮೀಟಿಂಗ್ ಕರೆದಿದ್ದಾರೆ. ರಾತ್ರಿ 10 ಗಂಟೆಗೆ ಸಿಎಂ ನಿವಾಸದಲ್ಲಿ ಕೋಲಾರ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಮೂಲಕ ಸಿಎಂ ಡಿಸಿಎಂ ಮತ್ತೊಂದು ಸುತ್ತಿನ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಆದ್ರೆ, ಸಿಎಂ, ಡಿಸಿಎಂ ಸಂಧಾನಕ್ಕೆ ರಮೇಶ್ ಕುಮಾರ್​ ಬಣ ಬಗ್ಗುತ್ತಾ? ಅಂತಿಮವಾಗಿ ಮುನಿಯಪ್ಪ ಅಳಿಯನಿಗೆ ಟಿಕೆಟ್ ಸಿಗುತ್ತಾ? ಅಥವಾ ಅಭ್ಯರ್ಥಿ ಬದಲಾಗ್ತಾರಾ? ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Wed, 27 March 24

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು