ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿ "ಎಕ್ಸ್'" ಜಾಲತಾಣದಲ್ಲಿ ಪೋಸ್ಟ್ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 26, 2024 | 6:50 PM

ಬೆಂಗಳೂರು, ಜ.26: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಟೀಕಿಸಿದ್ದಾರೆ. ಜೊತೆಗೆ ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನಿಸಿ  “ಎಕ್ಸ್'” ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ‘ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್: ಜನವರಿ ಕೊನೆಯಲ್ಲಿ ಅಮಿತ್ ಶಾ ಜತೆ ಕುಮಾರಸ್ವಾಮಿ ಸಭೆ

ಬೆಂಗಳೂರು ವ್ಯಾಪ್ತಿಯಲ್ಲಿ ತನ್ನ ಅನುಮೋದನೆ ಇಲ್ಲದೆ ಉದ್ಯಮ ಪಾರ್ಕ್ ರಚನೆ, ಅಭಿವೃದ್ಧಿ, ಕೈಗಾರಿಕಾ ಸಮುಚ್ಚಯಗಳ ನಿರ್ಮಾಣ ಮಾಡಬಾರದು ಎಂದು BDA ಫರ್ಮಾನು ಹೊರಡಿಸಿರುವುದು ಬೆಂಗಳೂರು ‘ನಗದಾಭಿವೃದ್ಧಿ’ ಇಲಾಖೆ ಕೈಚಳಕ, ಅನುಮಾನವೇ ಇಲ್ಲ. ತೆಲಂಗಾಣ ಎಲೆಕ್ಷನ್ ಗೆ ಕಲೆಕ್ಷನ್ ಮಾಡಿದಂತೆ ಈಗ ಲೋಕಸಭೆ ಚುನಾವಣೆಗೆ ವಸೂಲಿ ಶುರುವಾಗಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್