ಸಂಸತ್​​ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುತ್ತೇವೆ: ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್

ಸಂಸತ್ ಕಲಾಪದ ವೇಳೆ ದುಷ್ಕರ್ಮಿಗಳ ತಂಡವೊಂದು ಕಲರ್ ಸ್ಮೋಕ್ ಬಾಂಬ್ ದಾಳಿ ನಡೆಸಿತ್ತು. ಭದ್ರತಾ ಲೋಪವನ್ನೇ ಮುಂದಿಟ್ಟುಕೊಂಡು ವಿಪಕ್ಷ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಆದರೆ, ಇದು ದೇಶದ ಭದ್ರತೆಯ ವಿಷಯವಾಗಿದ್ದು, ಇದರಲ್ಲಿ ರಾಜಕೀಯ ಮಾಡಬಾರದು. ಮುಂದಿನ ದಿನಗಳಲ್ಲಿ ಸಂಸತ್ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದ್ದಾರೆ.

ಸಂಸತ್​​ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುತ್ತೇವೆ: ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್
ಕ್ರಿಶನ್ ಪಾಲ್ ಗುರ್ಜರ್
Follow us
| Updated By: Rakesh Nayak Manchi

Updated on:Dec 19, 2023 | 10:48 AM

ಹಾಸನ, ಡಿ.17: ಸಂಸತ್ ಮೇಲಿನ ಕಲರ್ ಸ್ಮೋಕ್ ಬಾಂಬ್ ದಾಳಿ (Parliament attack) ವಿಚಾರದಲ್ಲಿ ರಾಜಕೀಯ ಮಾಡಬಾರದು. ಇದು ದೇಶದ ಭದ್ರತೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಸಂಸತ್ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಕೇಂದ್ರ ವಿದ್ಯುತ್ ಮತ್ತು ಭಾರೀ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ (Krishan Pal Gurjar) ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈ ರೀತಿಯ ಘಟನೆಗಳು ಇದೇ ಮೊದಲ ಬಾರಿ ಆಗಿಲ್ಲ. ಯಾವ ಉದ್ದೇಶದಿಂದ ಯಾರು ಮಾಡಿದ್ದಾರೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಇದು ರಾಜಕೀಯ ವಿಷಯ ಆಗಬಾರದು. ಈ ಘಟನೆ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಯುತ್ತದೆ ಎಂದು ಲೋಕಸಭಾ ಸ್ಪೀಕರ್ ಜನರಿಗೆ ಒಂದು ಆಶ್ವಾಸನೆ ಕೊಟ್ಟಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಸಂಸತ್ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುತ್ತೇವೆ. ಹೇಗೆ ಭದ್ರತೆ ಹೆಚ್ಚಿಸಬೇಕು ಎಂಬುದರ ಬಗ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕಮಿಟಿ ರಚಿಸಿದ್ದಾರೆ. 15 ರಿಂದ 20 ದಿನಗಳೊಳಗೆ ಕಮಿಟಿ ವರದಿ ನೀಡುತ್ತದೆ. ಇದರಲ್ಲಿ ಯಾರು ರಾಜಕೀಯ ಮಾಡಬಾರದು. ಇನ್ನೂ ಭದ್ರತೆ ಹೆಚ್ಚು ಆಗಬೇಕು ಎನ್ನುವ ಉದ್ದೇಶ ನಮಗಿದೆ ಎಂದರು.

ಇದನ್ನೂ ಓದಿ: ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ

ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಘೋಷಣೆ ಮಾಡಿದ ವಿಚಾರವಾಗಿ ಮಾತನಾಡಿದ ಕ್ರಿಶನ್ ಪಾಲ್, ಯಾವ ಪಕ್ಷದ ಜೊತೆ ಒಪ್ಪಂದ ಮಾಡಿಕೊಳ್ಳಬೇಕು, ಯಾವ ಪಕ್ಷದ ಜೊತೆ ಸೇರಿ ಚುನಾವಣೆ ಮಾಡಬೇಕು ಎಂಬುದನ್ನು ಕೇಂದ್ರದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಕ್ಷಣದಲ್ಲಿ ಆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

ಈ ದೇಶದಲ್ಲಿ ಕೇವಲ ಮೋದಿಯ ಗ್ಯಾರೆಂಟಿ ನಡೆಯುತ್ತಿದೆ. ದೇಶದ ಜನತೆಗೆ ಮೋದಿಯ ಗ್ಯಾರೆಂಟಿ ಬಗ್ಗೆ ವಿಶ್ವಾಸವಿದೆ. ದೇಶದ ಜನತೆಗೆ ಮೋದಿ ಗ್ಯಾರೆಂಟಿ ಬಿಟ್ಟರೆ ಇನ್ಯಾರ ಬಗ್ಗೆಯೂ ಗ್ಯಾರೆಂಟಿ ಇಲ್ಲ. ಕರ್ನಾಟಕದ ಜನತೆಗೂ ಸಹ ಮೋದಿ ಗ್ಯಾರೆಂಟಿ ಬಗ್ಗೆ ಗ್ಯಾರೆಂಟಿ ಇದೆ ಎಂದರು.

ಇದನ್ನೂ ಓದಿ: ಸಂಸತ್ ಭದ್ರತಾ ಲೋಪ, ಸಂಸದರ ಅಮಾನತು: ಸಂಸದರಿಗೆ ಪತ್ರ ಬರೆದ ಸ್ಪೀಕರ್ ಓಂ ಬಿರ್ಲಾ

ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ್ ಆಕ್ರೋಶ ಹೊರಹಾಕುತ್ತಿರುವ ವಿಚಾರವಾಗಿ ಮಾತನಾಡಿದ ಕ್ರಿಶನ್ ಪಾಲ್, ನಮ್ಮಲ್ಲಿ ಯಾವುದೇ ಬಣ ಇಲ್ಲ, ಇರೋದು ಒಂದೇ ಮೋದಿ ಬಣ. ನಮ್ಮದು ಭಾರತೀಯ ಜನತಾ ಪಾರ್ಟಿ. ನಮ್ಮಲ್ಲಿ ನಾಯಕರು ಒಂದೇ, ಕಾರ್ಯಕರ್ತ ಒಂದೇ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮೋದಿಯವರನ್ನು ಮೂರನೇ ಬಾರಿ ಪ್ರಧಾನಮಂತ್ರಿ ಮಾಡಬೇಕೆಂದು ಈ ದೇಶದ ಜನರು, ಕಾರ್ಯಕರ್ತರೆಲ್ಲಾ ತೀರ್ಮಾನ ಮಾಡಿ ಆಗಿದೆ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಕ್ರಿಶನ್ ಪಾಲ್, ಇದುವರೆಗೂ ಮೈತ್ರಿಯಿಂದ ಒಳ್ಳೆಯಾಗಿದೆ ಹೊರತು ಕೆಟ್ಟದಾಗಿಲ್ಲ. ಈ ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಗೊತ್ತಿದೆ. ಕಾಂಗ್ರೆಸ್ ಜೊತೆ ಯಾರು ಸೇರುತ್ತಲ್ಲ, ಅದು ಏಕಾಂಗಿಯಾಗುತ್ತಿದೆ. ಮೋದಿ ಎದುರಿಸಲು ಅವರಿಂದ ಸಾಧ್ಯವಿಲ್ಲ ಎಂದು ಅವರಿಗೆಲ್ಲ ಗೊತ್ತು ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಒಳ್ಳೆಯದಾಗುತ್ತದೆ. ಪರಿಸ್ಥಿತಿ ಒಂದೇ ರೀತಿ ಇರಲ್ಲ, ಬದಲಾಗುತ್ತಿರುತ್ತದೆ. ರಾಜಕೀಯದಲ್ಲೂ ಅಷ್ಟೇ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ. ಸಮಯ ಸಂರ್ಭದ ಹೊಂದಾಣಿಕೆ ಮಾಡಿಕೊಂಡು ಹೋಗುತ್ತಿದ್ದೇವೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ್ದೇವೆ. ರಾಜಸ್ಥಾನ, ಮಧ್ಯಪ್ರದೇಶದ ಫಲಿತಾಂತ ಕರ್ನಾಟಕದಲ್ಲೂ ಮರುಕಳುಹಿಸುತ್ತದೆ. ಹರಿಯಾಣ ರಾಜ್ಯದಲ್ಲಿ 28 ಸೀಟ್‌ಗಳನ್ನು ಗೆದ್ದಂತೆ ಕರ್ನಾಟಕದಲ್ಲೂ 28 ಸೀಟ್ ಗೆಲ್ಲುತ್ತೇವೆ ಆ ವಿಶ್ವಾಸ ನನಗಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Sun, 17 December 23

ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ