ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಅಗೌರವದ ಪೋಸ್ಟ್ ಆರೋಪ: ಕಾಂಗ್ರೆಸ್ ವಿರುದ್ಧ ದೂರು
ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಕಾಂಗ್ರೆಸ್ ಫೇಸ್ಬುಕ್ ಪೇಜ್ನಲ್ಲಿ ಅಗೌರವದ ಪೋಸ್ಟ್ ಆರೋಪ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ನಾಯಕರ ಕುರಿತು ಕಾಂಗ್ರೆಸ್ (Congress) ಫೇಸ್ಬುಕ್ ಪೇಜ್ನಲ್ಲಿ ಅಗೌರವದ ಪೋಸ್ಟ್ ಆರೋಪ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಬಿ.ಎಲ್.ಸಂತೋಷ್ ಮೌತ್ಪೀಸ್ ಪ್ರತಾಪಸಿಂಹ ಎಂದು ಅಗೌರವದ ಫೋಟೋ ಹರಿಬಿಡಲಾಗಿತ್ತು. ಸೂಕ್ತಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ತೇಜಸ್ವಿನಿ, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ಮುಖಂಡರಿಂದ ದೂರು ನೀಡಲಾಗಿದೆ.
ಬಿಎಲ್ ಸಂತೋಷನ ಮೌತ್ ಪೀಸ್ ಪ್ರತಾಪ್ ಸಿಂಹ ಅವರೇ, ನಮ್ಮ ಸರ್ಕಾರದ, ನಮ್ಮ ಸಿಎಂ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ನಿಮ್ಮ ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಮೈಸೂರಿನ ಸಂಸದನಾಗಿ ಜಿಲ್ಲೆಯಲ್ಲಿ ಎಷ್ಟು ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದೀರಿ? ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣರಾದ ಬಿ.ಎಲ್ ಸಂತೋಷ್ ಅವರನ್ನು ಟೀಕಿಸುವ ಮಿನಿಮಮ್ ದಮ್ಮು ತಾಕತ್ತು ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.
ಇದನ್ನೂ ಓದಿ: ಪ್ರತಾಪ್ ಸಿಂಹಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು: ಎಂಬಿ ಪಾಟೀಲ್ ವಾಗ್ದಾಳಿ
ಪ್ರತಾಪ್ ಸಿಂಹ ವಿರುದ್ಧ ಎಂಬಿ ಪಾಟೀಲ್ ಕಿಡಿ
ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು ಎಂದು ಇತ್ತೀಚೆಗೆ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದರು.
ಇದನ್ನೂ ಓದಿ: ಜು 03ರಿಂದ ಅಧಿವೇಶನ ಆರಂಭ, ಜೂ 26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯುಟಿ ಖಾದರ್
ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡುತ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ಧಿ ಕೊಡಲಿ. ಪ್ರತಾಪ್ ಸಿಂಹ ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ. ಪ್ರತಾಪ್ ಸಿಂಹ ಇನಿಷಿಯೇಟಿವ್ ತೆಗೆದುಕೊಂಡು ಅಕ್ಕಿ ಕೊಡಿಸುವ ಪ್ರಯತ್ನ ಮಾಡಲಿ ಎಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:04 pm, Wed, 21 June 23