ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ: ಸಚಿವ ಮಧು ಬಂಗಾರಪ್ಪ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಪಠ್ಯ ಪರಿಷ್ಕರಣೆ ಚರ್ಚೆ ಇನ್ನೂ ಮುಗಿದಿಲ್ಲ. ಈ ಬಗ್ಗೆ ಹೇಳಿಕೆ ನೀಡಿದ ಸಚಿವ ಮಧು ಬಂಗಾರಪ್ಪ, ಈ ಬಾರಿ ತುರ್ತಾಗಿ ಕೆಲವು ಪರಿಷ್ಕರಣೆ ನಡೆಸಿದ್ದೇವೆ. ಮುಂದೆ ಸಂಪೂರ್ಣವಾಗಿ ಮಾಡಲಾಗುವುದು ಎಂದಿದ್ದಾರೆ.

ಪಠ್ಯ ಪುಸ್ತಕದ ಪೂರ್ಣ ಪರಿಷ್ಕರಣೆ ಆಗಲಿದೆ: ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Jul 22, 2023 | 4:06 PM

ಮಂಗಳೂರು, ಜುಲೈ 22: ಪೂರ್ಣವಾಗಿ ಪಠ್ಯ ಪುಸ್ತಕ ಪರಿಷ್ಕರಣೆ (Text Book Revision) ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಠ್ಯವನ್ನು ಬದಲಿಸಿದ್ದರು. ನಾವು ತುರ್ತಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆ ನಾನು ಅಧಿಕಾರಕ್ಕೆ ಬಂದ ಕೂಡಲೇ ಮಾಡಿದೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆದಾಗಲಿ ಅಂತ ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು ಎಂದರು.

ಕಟೀಲ್ ಭಾವನಾತ್ಮಕ ನಾಟಕಕ್ಕೆ ಬುದ್ಧಿ ಕಲಿಸಿದ ಜನ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಇದೇ ನೀಚ ಬುದ್ದಿ ಮಾಡಿಕೊಂಡು ಹೋಗಲಿ ಎಂದು ಹೇಳಿದ ಮಧು ಬಂಗಾರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಅವರನ್ನು ಸೋಲಿಸಿ ಜನರು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿಯವರ ಜೀವನ ನಡೆಯುವುದು ಕೂಡ ನಮ್ಮ ಗ್ಯಾರಂಟಿ ಮೇಲೆ ಎಂದರು.

ಇದನ್ನೂ ಓದಿ: Bengaluru; ಶಿಕ್ಷಣ ಸಚಿವ ಮಧು ಬಂಗಾರಪ್ಪ ದಾರ್ಷ್ಟ್ಯತೆ ಮತ್ತು ದುರಹಂಕಾರ ಪ್ರದರ್ಶಿಸುತ್ತಿದ್ದಾರೆ: ಸಿಟಿ ರವಿ

ಸದ್ಯ ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ಇದನ್ನ ಮಾಡಿದೆ. ಶಿಕ್ಷಕರ ಕೊರತೆ ರಾಜ್ಯದಲ್ಲಿ ಇದೆ, ಅದನ್ನ ನಾವು ಸರಿ ಮಾಡುತ್ತೇವೆ. ಇದರ ಮಧ್ಯೆ ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ ಎಂದರು.

ಈ ಬಿಜೆಪಿಯವರು ಸಭಾಧ್ಯಕ್ಷರ ಪೀಠವನ್ನೇ ಅವಮಾನಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ. ಕರಾವಳಿ ಭಾಗ ಕಲ್ಮಶ ಆಗಿದ್ದು ನಿಜ, ಆದರೆ ಮತ್ತೆ ಶಾಂತಿ ಸೌಹಾರ್ದತೆ ಬರಲಿದೆ. ನಮ್ಮ ಸರ್ಕಾರ ಅವೆಲ್ಲವನ್ನೂ ಮತ್ತೆ ಮೂಡಿಸಲಿದೆ ಎಂದರು.

ಸಿದ್ದರಾಮಯ್ಯ ವಿರುದ್ಧವೇ ಸ್ವಪಕ್ಷದ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ ಅಸಮಾಧಾನ ಹೊರಹಾಕಿದ ವಿಚಾರವಾಗಿ ಮಾತನಾಡಿದ ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್ ಅವರು ಹೇಳಿದ ಮಾತಿನ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಹಿರಿಯರು ಅವರ ಮಾತುಗಳಲ್ಲಿ ಏನಾದರು ಇದ್ದರೆ ಗಮನಿಸಬೇಕು. ಅವರ ಮಾತಿಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿ ಇರಲ್ಲ. ಅದು ಪಕ್ಷದ ವೇದಿಕೆಗಳಲ್ಲಿ ಚರ್ಚೆಯಾಗಬೇಕಾದ ವಿಚಾರ. ಅವರ ಮಾತಲ್ಲಿ ಸರಿ ಇದ್ದರೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ