ಆರ್​ ಅಶೋಕ್, ವಿ.ಸೋಮಣ್ಣ ಮಧ್ಯೆ ಗೊಂದಲ: ನಾಗರಬಾವಿ ಬಳಿ ವಿಜಯಸಂಕಲ್ಪ ರಥಯಾತ್ರೆ ಮೊಟಕುಗೊಳಿಸಿ ತೆರಳಿದ ಸಚಿವರು

ಸಚಿವರಾದ ಅಶೋಕ್ ಮತ್ತು ವಿ.ಸೋಮಣ್ಣ ಮಧ್ಯೆ ಗೊಂದಲ ಸೃಷ್ಟಿಯಾದ ಹಿನ್ನೆಲೆ ನಗರದ ನಾಗರಬಾವಿ ಬಳಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆ (Vijaya Sankalp Yatra) ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

ಆರ್​ ಅಶೋಕ್, ವಿ.ಸೋಮಣ್ಣ ಮಧ್ಯೆ ಗೊಂದಲ: ನಾಗರಬಾವಿ ಬಳಿ ವಿಜಯಸಂಕಲ್ಪ ರಥಯಾತ್ರೆ ಮೊಟಕುಗೊಳಿಸಿ ತೆರಳಿದ ಸಚಿವರು
ಆರ್​. ಅಶೋಕ್, ವಿ.ಸೋಮಣ್ಣ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 06, 2023 | 3:05 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಸಾಕಷ್ಟು ಕಸರತ್ತು ಮಾಡುತ್ತಿದೆ. ಈ ನಡುವೆ ಸಚಿವರಾದ ಅಶೋಕ್ ಮತ್ತು ವಿ.ಸೋಮಣ್ಣ ಮಧ್ಯೆ ಗೊಂದಲ ಸೃಷ್ಟಿಯಾದ ಹಿನ್ನೆಲೆ ನಗರದ ನಾಗರಬಾವಿ ಬಳಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆ (Vijaya Sankalp Yatra) ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ನಾಗರಬಾವಿಯಿಂದ ನಾಯಂಡಹಳ್ಳಿವರೆಗೆ ರಥಯಾತ್ರೆ ನಿಗದಿಯಾಗಿತ್ತು. ಆದರೆ ನಾಯಂಡಹಳ್ಳಿವರೆಗೆ ರಥಯಾತ್ರೆಯಲ್ಲಿ ತೆರಳಲು ಅಶೋಕ್ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಸೋಮಣ್ಣ ಅರ್ಧಕ್ಕೆ ಯಾತ್ರೆ ಮೊಟಕುಗೊಳಿಸಿದ್ದಾರೆ.

ರಥಯಾತ್ರೆಗೆ ಗೈರಾದ ವಿ.ಸೋಮಣ್ಣ 

ಇನ್ನು ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದರು. ಆದರೆ ಜಿಲ್ಲೆಯ ಉಸ್ತುವಾರಿ ಸಚಿವ ಆಗಿರುವ ವಿ.ಸೋಮಣ್ಣ ಮಾತ್ರ ಯಾತ್ರೆಗೆ ಗೈರಾಗಿದ್ದು ಎಲ್ಲರಲ್ಲಿ ಕುತೂಹಲ ಕೆರಳಿಸಿತ್ತು. ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಂದರೂ, ಯಾತ್ರೆಗೆ ಆಗಮಿಸದ ಸಚಿವ ವಿ.ಸೋಮಣ್ಣ ನಡೆ ಸದ್ಯ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು. ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆ ಮಾ. 1ರಂದು ಆರಂಭವಾಗಿದ್ದು, 20ರವರೆಗೆ ನಡೆಯಲಿದೆ.

ಇದನ್ನೂ ಓದಿ: ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸಿದ್ಧಗೊಂಡ ವಿಶೇಷ ರಥ ಹೀಗಿದೆ ನೋಡಿ

ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಕೂಡ ಗೈರು

ಸಚಿವ ಸೋಮಣ್ಣ ನಂತರ ಕೊಳ್ಳೇಗಾಲ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಕೂಡ ಯಾತ್ರೆಗೆ ಗೈರಾಗಿದ್ದರು. ಈಗಾಗ್ಲೇ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕ್ಷೇತ್ರದಲ್ಲಿ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಭಾಗಿಯಾದ್ರು ಸಮಾವೇಶದಿಂದ ದೂರವುಳಿದ್ದಾರೆ. ಪ್ರಜಾಧ್ವನಿ ಯಾತ್ರೆ ವೇಳೆ ಜಿಎನ್ ನಂಜುಂಡಸ್ವಾಮಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಡಿ.ಕೆ. ಶಿವಕುಮಾರ ಹೇಳಿದ್ದರು.

ಇದನ್ನೂ ಓದಿ: ಕೋಲಾರ: ಕೆಂಪೇಗೌಡ ರಥಯಾತ್ರೆ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಗಲಾಟೆ

ಯಾತ್ರೆಗೆ ಸಿದ್ಧವಾದ ವಿಶೇಷ ಮಾದರಿಯ ರಥಗಳು

ಇನ್ನು ವಿಜಯಸಂಕಲ್ಪ ಯಾತ್ರೆ ಹಿನ್ನೆಲೆ ಅಶೋಕ್ ಲೈಲ್ಯಾಂಡ್​ ಬಸ್​ಗಳನ್ನು ವಿಶೇಷ ಮಾದರಿಯಲ್ಲಿ ವಿನ್ಯಾಸಗೊಳಿಸಿದ್ದು, ಸುಸಜ್ಜಿತವಾದ 30 ಅಡಿ ಉದ್ದ, 8 ಅಡಿ ಅಗಲದ ರಥಗಳನ್ನು ಸಿದ್ಧಪಡಿಸಲಾಗಿದೆ. ಬಸ್ ಒಳ ಆವರಣದಿಂದ ನಾಯಕರು ಭಾಷಣ ಮಾಡಲು ಅವಕಾಶವಿದ್ದು, ಬಸ್​​​ ಟಾಪ್​​ನಲ್ಲಿ ಒಮ್ಮೆಲೆ 12 ಜನ ನಿಂತುಕೊಳ್ಳಬಹುದಾದ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Mon, 6 March 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ