‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣ ನೀಡುವ ವಿಚಾರದಲ್ಲಿ ಗೊಂದಲ: ಸಿಎಂ ಒಂದು ಹೇಳಿದರೆ, ಆಹಾರ ಸಚಿವರಿಂದ ಮತ್ತೊಂದು ಹೇಳಿಕೆ

ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಬದಲು ಕಾರ್ಡ್‌ದಾರರ ಅಕೌಂಟ್‌ಗೆ ಹಣ ಹಾಕಲು ನಿರ್ಧರಿಸಿದೆ. ಆದರೆ ಸಿಎಂ ಸಿದ್ಧರಾಮಯ್ಯ ಒಂದು ರೀತಿ ಹೇಳಿದರೆ, ಆಹಾರ ಸಚಿವ ಮುನಿಯಪ್ಪ ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಹಾಗಾಗಿ ಫಲಾನುಭವಿಗಳಿಗೆ ಹಣ ನೀಡುವ ವಿಚಾರದಲ್ಲಿ ಗೊಂದಲಗಳು ಶುರುವಾಗಿವೆ.

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣ ನೀಡುವ ವಿಚಾರದಲ್ಲಿ ಗೊಂದಲ: ಸಿಎಂ ಒಂದು ಹೇಳಿದರೆ, ಆಹಾರ ಸಚಿವರಿಂದ ಮತ್ತೊಂದು ಹೇಳಿಕೆ
ಸಿಎಂ ಸಿದ್ದರಾಮಯ್ಯ, ಆಹಾರ ಸಚಿವ ಮುನಿಯಪ್ಪ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jul 01, 2023 | 3:15 PM

ಬೆಂಗಳೂರು: ಕೊಟ್ಟ ಮಾತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯ (Siddaramaiah) ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಬದಲು ಕಾರ್ಡ್‌ದಾರರ ಅಕೌಂಟ್‌ಗೆ ಹಣ ಹಾಕಲು ನಿರ್ಧರಿಸಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಹತ್ತಾರು ಸವಾಲುಗಳು ಎದುರಾಗಿವೆ. ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣ ನೀಡುವ ವಿಚಾರದಲ್ಲಿ ಗೊಂದಲಗಳು ಶುರುವಾಗಿದ್ದು, ಸಿಎಂ ಸಿದ್ಧರಾಮಯ್ಯ ಒಂದು ರೀತಿ ಹೇಳಿದರೆ ಆಹಾರ ಸಚಿವ ಮುನಿಯಪ್ಪ ಅವರು ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ.

ಸ್ವತಃ ಆಹಾರ ಸಚಿವರಿಗೂ ಹಣ ವರ್ಗಾವಣೆ ಬಗ್ಗೆ ಮಾಹಿತಿ ಕೊರತೆ ಇದೆ. 5 ಕೆಜಿ ಅಕ್ಕಿ ಬದಲು ಹಣ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಜುಲೈ 1ರಿಂದಲೇ ಫಲಾನುಭವಿಗಳಿಗೆ ಹಣ ಹಾಕುತ್ತೇವೆ ಅಂತಾ ಹೇಳಿಲ್ಲ. ಆದರೆ ಜುಲೈ 1ರಿಂದಲೇ ಹಣ ಹಾಕುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಸದ್ಯ ಸಿಎಂ ಮತ್ತು ಸಚಿವರ ಹೇಳಿಕೆಗಳು ಅನ್ನಭಾಗ್ಯ ಫಲಾನುಭವಿಗಳಲ್ಲಿ ಸಾಕಷ್ಟು ಗೊಂದಲ ಮೂಡಿಸುತ್ತಿವೆ.

ಇದನ್ನೂ ಓದಿ: ಅಕ್ಕಿ ಸಿಗದಿದ್ದರೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದರು; ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಆಧಾರ್‌ ಜತೆ ಬ್ಯಾಂಕ್‌ ಖಾತೆ ಲಿಂಕ್‌ ಮಾಡಿದರೆ ಮಾತ್ರ ಹಣ

ಕಾಂಗ್ರೆಸ್​ ಸರ್ಕಾರ ಹೆಚ್ಚುವರಿ ಅಕ್ಕಿ ಸಿಗದ ಕಾರಣಕ್ಕೆ ಹಣ ನೀಡಲು ನಿರ್ಧರಿಸಿದೆ. ಕೆಜಿಗೆ 34 ರೂಪಾಯಿಯಂತೆ ಒಬ್ಬರಿಗೆ ತಿಂಗಳಿಗೆ 170 ರೂಪಾಯಿ ಹಣ ಸಿಗಲಿದ್ದು ನೇರ ಅವರ ಅಕೌಂಟ್‌ಗೆ ಜಮೆ ಆಗಲಿದೆ. ರಾಜ್ಯದಲ್ಲಿ 1 ಕೋಟಿ 28 ಲಕ್ಷ ಬಿಪಿಎಲ್‌ ಕಾರ್ಡ್‌ಗಳಿದ್ದು, ಈ ಪೈಕಿ 6 ಲಕ್ಷ ಜನ ಖಾತೆ ಹೊಂದಿಲ್ಲ. ಇವರೆಲ್ಲಾ ಆಧಾರ್‌ ಜತೆ ಬ್ಯಾಂಕ್‌ ಖಾತೆ ಲಿಂಕ್‌ ಮಾಡಿದರೆ ಮಾತ್ರ ಅನ್ನಭಾಗ್ಯದ ಹಣ ಸಿಗಲಿದೆ.

ಅಕ್ಕಿ ಬದಲಾಗಿ ಹಣ ನೀಡುವ ವಿಚಾರವಾಗಿ ಫಲಾನುಭವಿಗಳು ಪ್ರತಿಕ್ರಿಯಿಸಿದ್ದು, ದುಡ್ಡು ಉಳಿಯೋದಿಲ್ಲ ಅಕ್ಕಿಯನ್ನೇ ಕೊಡಿ ಅಂತಾ ಕೆಲವರು ಹೇಳಿದರೆ, ದುಡ್ಡು ಕೊಡಿ ಬೇರೆ ದವಸಧಾನ್ಯ ಖರೀದಿ ಮಾಡುತ್ತೇವೆ ಅಂತಾ ಮತ್ತೆ ಕೆಲವರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಈ ವರ್ಷ ತಮಿಳುನಾಡಿಗೆ ನೀರು ಬಿಡಲು ಆಗಲ್ಲ, ಬೆಂಗಳೂರಿಗೆ ಕುಡಿಯೋ ನೀರು ಸಮಸ್ಯೆ ಆಗದಂತೆ ಆದ್ಯತೆವಹಿಸಲಾಗುತ್ತೆ -ಡಿಕೆ ಶಿವಕುಮಾರ್

ಅಷ್ಟಕ್ಕೂ ಅಕ್ಕಿ ಬದಲು ಹಣ ಭಾಗ್ಯ ನೀಡಲು ಸರ್ಕಾರ ಮುಂದಾಗುತ್ತಿದ್ದಂತೆ, ರಾಜ್ಯದ ಜನ ಅಕ್ಕಿಯನ್ನೇ ಕೊಡಿ ಅಂತಿದ್ದಾರೆ. ಮತ್ತೊಂದೆಡೆ ಕಾರ್ಡ್‌ದಾರರ ಅಕೌಂಟ್‌ಗೆ ಹಣ ಹಾಕಲು ಸರ್ಕಾರಕ್ಕೆ ಚಿಂತನೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Sat, 1 July 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ