2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸಲು ಆ್ಯಕ್ಷನ್ ಗ್ರೂಪ್ ರಚನೆ

2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸಲು ಆ್ಯಕ್ಷನ್ ಗ್ರೂಪ್ ರಚನೆ
ರಣದೀಪ್ ಸುರ್ಜೇವಾಲ

ಕಳೆದ ವಾರ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿ ಮತ್ತು ಇಂದು ಚರ್ಚೆಯ ನಂತರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು 2024ರ ಕಾರ್ಯಪಡೆಯನ್ನು ರಚಿಸಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.

S Chandramohan

| Edited By: Sushma Chakre

Apr 25, 2022 | 6:12 PM

ನವದೆಹಲಿ: ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕೆ ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ (Prashant Kishor) ಸಲಹೆ ನೀಡಿದ್ದರೂ ಭಾನುವಾರ ತೆಲಂಗಾಣ ಸಿಎಂ ಕೆಸಿಆರ್ (Telangana CM KCR) ಅವರನ್ನು ಭೇಟಿಯಾಗಿದ್ದಾರೆ. ಇದು ಕಾಂಗ್ರೆಸ್ ನಾಯಕರ ಆಕ್ಷೇಪಕ್ಕೆ ಕಾರಣವಾಗಿದೆ. ಹೀಗಾಗಿ ಪ್ರಶಾಂತ್ ಕಿಶೋರ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದ ಕಾಂಗ್ರೆಸ್ ಹೈಕಮಾಂಡ್, ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಿದ್ಧಪಡಿಸಲು ಆ್ಯಕ್ಷನ್ ಗ್ರೂಪ್ ರಚಿಸಿದೆ. ಕಾಂಗ್ರೆಸ್ ಚುನಾವಣಾ ರಾಜಕೀಯ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಸ್ಪೆನ್ಸ್ ಬಿಟ್ಟುಕೊಟ್ಟಿಲ್ಲ. 2024ರ ಲೋಕಸಭಾ ಚುನಾವಣೆಗಳಿಗೆ ಮುಂಚಿತವಾಗಿ ರಾಜಕೀಯ ಸವಾಲುಗಳನ್ನು ಎದುರಿಸಲು ಕಾಂಗ್ರೆಸ್ ಸಶಕ್ತ ಕ್ರಿಯಾ ಗುಂಪು (ಆ್ಯಕ್ಷನ್ ಗ್ರೂಪ್‌) ಅನ್ನು ರಚಿಸಿದೆ. ಮುಂದಿನ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಕಾಲ ಚಿಂತನಾ ಶಿಬಿರ ಸಮಾವೇಶ ನಡೆಸುವುದಾಗಿ ಘೋಷಿಸಿದೆ.

ಕಳೆದ ವಾರ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿ ಮತ್ತು ಇಂದು ಚರ್ಚೆಯ ನಂತರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು 2024ರ ಕಾರ್ಯಪಡೆಯನ್ನು ರಚಿಸಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೇ 13, 14 ಮತ್ತು ಮೇ 15ರಂದು ಉದಯಪುರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನವ ಸಂಕಲ್ಪ್‌ನ ಚಿಂತನ್ ಶಿಬಿರವನ್ನು ಕರೆಯಲು ನಿರ್ಧರಿಸಿದ್ದಾರೆ. ಪ್ರತಿ ರಾಜ್ಯದಿಂದ ಸುಮಾರು 400 ಕಾಂಗ್ರೆಸ್ಸಿಗರು ಮತ್ತು ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಪ್ರಸ್ತುತ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿ ಮತ್ತು ನಮ್ಮ ಸಮಾಜಕ್ಕೆ ಒಡ್ಡುವ ಸವಾಲುಗಳ ಮೇಲೆ ಚರ್ಚೆಗಳ ಗಮನವನ್ನು ಕೇಂದ್ರೀಕರಿಸಲಾಗುತ್ತದೆ. ರೈತರು ಮತ್ತು ಕೃಷಿ ಕಾರ್ಮಿಕರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಜಾತಿಗಳ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಬುಡಕಟ್ಟುಗಳು, ಒಬಿಸಿಗಳು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರು ಮತ್ತು ಮಹಿಳೆಯರು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮತ್ತು ಯುವಕರ ಬಗ್ಗೆಯೂ ವಿವರವಾಗಿ ಚರ್ಚಿಸಲಾಗುವುದು. ಜೊತೆಗೆ, ಸಾಂಸ್ಥಿಕ ಪುನರ್​ರಚನೆ ಮತ್ತು ಬಲವರ್ಧನೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸಲಾಗುವುದು ಎಂದು ರಣದೀಪ್‌ ಸುರ್ಜೆವಾಲಾ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ಜೊತೆಗೆ 3-4 ದಿನ ಸಭೆ ನಡೆಸಿದ ಬಳಿಕ ಪ್ರಶಾಂತ್ ಕಿಶೋರ್ ಭಾನುವಾರ ತೆಲಂಗಾಣ ಸಿಎಂ ಕೆಸಿಆರ್ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿದ್ದಾರೆ. ಇದು ಕಾಂಗ್ರೆಸ್ ನಾಯಕರ ಆಕ್ಷೇಪಕ್ಕೆ ಕಾರಣವಾಗಿದೆ. ತೆಲಂಗಾಣದಲ್ಲಿ ನಮ್ಮ ಪಕ್ಷದ ವೈರಿ ನಾಯಕರ ಜೊತೆಗೆ ಪ್ರಶಾಂತ್ ಕಿಶೋರ್ ಕೈ ಜೋಡಿಸಿದ್ದಾರೆ. ಪ್ರಶಾಂತ್ ಕಿಶೋರ್ ಚಂಚಲ ಮನಸ್ಥಿತಿಯವರು ಎಂದು ಕಾಂಗ್ರೆಸ್ಸಿಗರು ಟೀಕಿಸುತ್ತಿದ್ದಾರೆ. ಪ್ರಶಾಂತ್ ಕಿಶೋರ್ ನಂಬಿಕೊಂಡು ಚುನಾವಣಾ ರಣತಂತ್ರ ರೂಪಿಸುವುದು ಸರಿಯಲ್ಲ. ಪ್ರಶಾಂತ್ ಕಾಂಗ್ರೆಸ್ ಸೇರ್ಪಡೆಯಾಗಿ ಕಾಂಗ್ರೆಸ್ ಗೆ ಮಾತ್ರ ದುಡಿಯಬೇಕು. ಬೇರೆ ಪಕ್ಷಗಳಿಗೆ ರಣತಂತ್ರ ರೂಪಿಸಬಾರದು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನಾಯಕತ್ವದೊಂದಿಗೆ ಕನಿಷ್ಠ ಮೂರು ಸಭೆಗಳನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅವರು ಕಳೆದ ಕೆಲವು ವರ್ಷಗಳಿಂದ ಚುನಾವಣಾ ಸೋಲುಗಳ ಸರಣಿಯಲ್ಲಿ ತತ್ತರಿಸಿರುವ ಪಕ್ಷವನ್ನು ಪುನಶ್ಚೇತನಗೊಳಿಸುವ ತಮ್ಮ ಯೋಜನೆಯ ಕುರಿತು ವಿವರವಾದ ಪ್ರಸ್ತುತಿಗಳನ್ನು ನೀಡಿದ್ದಾರೆ.

ಪಕ್ಷದ ಉನ್ನತ ನಾಯಕರು ಪ್ರಶಾಂತ್‌ ಕಿಶೋರ್ ಅವರ ಸಲಹೆಗಳಿಗೆ ಮನ್ನಣೆ ನೀಡುವುದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದರು. ಪ್ರಶಾಂತ್ ಕಿಶೋರ್‌ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಸೇರಿಸಿಕೊಂಡರೇ, ಅವರಿಗೆ ಯಾವ ಪಾತ್ರವನ್ನು ನೀಡಬಹುದು ಎಂಬ ಬಗ್ಗೆ ಕುತೂಹಲ ಇದೆ. ಆದರೆ, ಪ್ರಶಾಂತ್ ಕಿಶೋರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡುವ ಬಗ್ಗೆ ಕಾಂಗ್ರೆಸ್ ಒಡೆದ ಮನೆಯಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅಂಬಿಕಾ ಸೋನಿ ಪ್ರಶಾಂತ್ ಕಿಶೋರ್ ಅವರ ಸೇರ್ಪಡೆಯ ಪರವಾಗಿದ್ದರೆ, ದಿಗ್ವಿಜಯ ಸಿಂಗ್, ಮುಕುಲ್ ವಾಸ್ನಿಕ್, ರಣದೀಪ್ ಸುರ್ಜೆವಾಲಾ ಮತ್ತು ಜೈರಾಮ್ ರಮೇಶ್ ಅವರು ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದರ ವಿರುದ್ಧವಾದ ಅಭಿಪ್ರಾಯ ಹೊಂದಿದ್ದಾರೆ. ಆದರೆ, ಪ್ರಶಾಂತ್ ಕಿಶೋರ್ ಸಲಹೆಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಲು ನೇಮಕವಾಗಿರುವ ಸಮಿತಿಯ ಅಭಿಪ್ರಾಯ ಏನೇ ಇದ್ದರೂ, ಅಂತಿಮವಾಗಿ ನಿರ್ಧಾರ ಕೈಗೊಳ್ಳುವುದು ಸೋನಿಯಾಗಾಂಧಿ ಅವರಿಗೆ ಬಿಟ್ಟದ್ದು. ಸೋನಿಯಾಗಾಂಧಿ ಸಮಿತಿಯ ತೀರ್ಮಾನವನ್ನು ತಿರಸ್ಕರಿಸಿ ಪ್ರಶಾಂತ್ ಕಿಶೋರ್ ರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡು ಮಹತ್ವದ ಜವಾಬ್ದಾರಿ ನೀಡಬಹುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ:ಮೇ 13ರಿಂದ ಉದಯಪುರದಲ್ಲಿ ಕಾಂಗ್ರೆಸ್​ನಿಂದ ಚಿಂತನ ಶಿಬಿರ; ಪ್ರಶಾಂತ್ ಕಿಶೋರ್ ಪ್ಲಾನ್ ಬಗ್ಗೆ ಚರ್ಚೆ

ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆಯೇನು?

Follow us on

Related Stories

Most Read Stories

Click on your DTH Provider to Add TV9 Kannada