AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election 2024: ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

Karnataka Rajya Sabha Election 2024: ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಲಿರುವ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಬ್ಬರಿಗೆ ಮತ್ತೆ ಅವಕಾಶ ನೀಡಿದ್ದು, ಇನ್ನೊಂದು ಸ್ಥಾನಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದೆ. ಇದೇ ಪಟ್ಟಿಯಲ್ಲಿ ತೆಲಂಗಾಣ ಹಾಗೂ ಮಧ್ಯಪ್ರದೇಶ ರಾಜ್ಯಸಭಾ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಹಾಗಾದ್ರೆ, ಕರ್ನಾಟಕದಿಂದ ಮೂವರ ಯಾರ್ಯಾರು ಎನ್ನುವ ವಿವರ ಇಲ್ಲಿದೆ.

Rajya Sabha Election 2024: ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಕಾಂಗ್ರೆಸ್ ಚಿಹ್ನೆ
TV9 Web
| Edited By: |

Updated on:Feb 14, 2024 | 4:42 PM

Share

ಬೆಂಗಳೂರು, (ಫೆಬ್ರವರಿ 14): ಕರ್ನಾಟಕ  ರಾಜ್ಯಸಭಾ ಚುನಾವಣೆಗೆ(Karnataka Rajya Sabha Election 2024) ಕಾಂಗ್ರೆಸ್​ (Congress) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು ಮೂರು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಒಂದು ದಿನ (ಫೆಬ್ರವರಿ 15) ಬಾಕಿ ಇರುವಾಗಲೇ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಬ್ಬರಿಗೆ ಮತ್ತೆ ಅವಕಾಶ ನೀಡಿದೆ. ಇನ್ನೊಂದು ಸ್ಥಾನಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದೆ. ಜಿ.ಸಿ.ಚಂದ್ರಶೇಖರ್‌ ಮತ್ತು ನಾಸೀರ್ ಹುಸೇನ್‌ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್‌ ನೀಡಿದೆ.  ಇನ್ನು  ಎಐಸಿಸಿ  ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್‌ ಮಕೇನ್‌ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿರುವುದು ಅಚ್ಚರಿ ಮೂಡಿಸಿದೆ.

ಇನ್ನು ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್‌ಕುಮಾರ್‌ ಯಾದವ್‌ಗೆ ಟಿಕೆಟ್‌ ಸಿಕ್ಕರೆ, ಮಧ್ಯಪ್ರದೇಶದಲ್ಲಿ ಅಶೋಕ್‌ ಸಿಂಗ್‌ಗೆ ಟಿಕೆಟ್‌ ಘೋಷಿಸಲಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಬಾಗಲಕೋಟೆ ಮೂಲದ ಸಂಘ ಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ಘೋಷಿಸಿದೆ.

ಇದನ್ನೂ ಓದಿ: Rajya Sabha polls: ಬಿಜೆಪಿಗೆ ಸೇರುತ್ತಿದ್ದಂತೆ ಅಶೋಕ್ ಚವಾಣ್​​​ಗೆ ರಾಜ್ಯಸಭೆ ಟಿಕೆಟ್​​​

ನಾಮಪತ್ರ ಸಲ್ಲಿಸಲು ನಾಳೆ(ಫೆ.15) ಕೊನೆ ದಿನವಾಗಿದ್ದರಿಂದ ಕಾಂಗ್ರೆಸ್​ನಿಂದ ಈ ಮೂವರು ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ದೆಹಲಿ ಮೂಲದ ಅಜಯ್ ಮಾಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್​​ ನೀಡಿರುವುದರಿಂದ ಅವರು ಇಂದು(ಫೆ.14) ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು. ನಾಳೆ ಬೆಳಗ್ಗೆಅಜಯ್ ಮಾಕೆನ್, ಜಿಸಿ ಚಂದ್ರಶೇಖರ ಹಾಗೂ ನಾಸಿರ್ ಹುಸೇನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಅವಿರೋಧವಾಗಿ ಆಯ್ಕೆ ಸಾಧ್ಯತೆ

ಕಾಂಗ್ರೆಸ್ಸಿನಿಂದ ಮೂವರು, ಬಿಜೆಪಿಯಿಂದ ಒಬ್ಬರು ನಿರಾಯಾಸವಾಗಿ ಈಗಿನ ಸಂಖ್ಯಾಬಲದ ಆಧಾರದ ಮೇಲೆ ಗೆಲ್ಲಬಹುದಾಗಿದೆ. ಅದರಂತೆ ಕಾಂಗ್ರೆಸ್​ ಮೂವರು ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ, ಬಿಜೆಪಿ ತನ್ನ ಪಾಲಿನ ಒಂದು ಸ್ಥಾನಕ್ಕೆ ಓರ್ವ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.  ಹೀಗಾಗಿ ಕಾಂಗ್ರೆಸ್​ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಒಂದು ವೇಳೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಚುನಾವಣೆ ನಡೆಯುತ್ತಿತ್ತು. ರಾಜ್ಯಸಭಾ ಚುನಾವಣೆಯಲ್ಲೂ ಅಡ್ಡ ಮತದಾನ ನಡೆದು ಹೈಡ್ರಾಮಾ ನಡೆದ ಬೇಕಾದಷ್ಟು ಉದಾಹರಣೆಗಳಿವೆ. ಆದ್ರೆ, ಈ ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚುವರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಕೇವಲ ಹತ್ತೊಂಬತ್ತು ಶಾಸಕರನ್ನು ಹೊಂದಿರುವುದರಿಂದ ಜೆಡಿಎಸ್ ಈ ಸಂಖ್ಯಾಬಲದ ಆಟದಲ್ಲಿಲ್ಲ. ಆದ್ರೆ, ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವುದರಿಂದ ಎರಡನೇ ಅಭ್ಯರ್ಥಿಯನ್ನು ಇಳಿಸುವ ಬಗ್ಗೆ ಎರಡೂ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದರು ಎನ್ನಲಾಗಿದೆ. ಕುಪೇಂದ್ರ ರೆಡ್ಡಿ, ಫಾರೂಕ್, ಉದ್ಯಮಿ ಪ್ರಕಾಶ್ ಶೆಟ್ಟಿಯವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು. ಆದ್ರೆ, ಅಂತಿಮವಾಗಿ ಬಿಜೆಪಿ ಓರ್ವ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Wed, 14 February 24

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ