ಲೋಕಸಭೆಯಲ್ಲಿ ಕಾಂಗ್ರೆಸ್ ಬಿಜೆಪಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಬೇಕು: ಶಾಮನೂರು ಶಿವಶಂಕರಪ್ಪ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರು ತಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಲು ಆರಂಭಿಸಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದವರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಬಿಜೆಪಿಗೆ ಪತ್ರ ಬರೆದಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಬಿಜೆಪಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಬೇಕು: ಶಾಮನೂರು ಶಿವಶಂಕರಪ್ಪ
ಲೋಕಸಭೆಯಲ್ಲಿ ಕಾಂಗ್ರೆಸ್ ಬಿಜೆಪಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದ ಶಾಮನೂರು ಶಿವಶಂಕರಪ್ಪ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on: Feb 13, 2024 | 4:21 PM

ದಾವಣಗೆರೆ, ಫೆ.13: ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಾತಿ ನಾಯಕರು ಮುನ್ನೆಲೆಗೆ ಬರುತ್ತಿದ್ದಾರೆ. ತಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಲು ಆರಂಭಿಸಿದ್ದಾರೆ. ಈ ಸಾಲಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕರೂ ಆಗಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಕೂಡ ಒಬ್ಬರು. ರಾಜ್ಯಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದವರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್​ ಮಾತ್ರವಲ್ಲ, ಬಿಜೆಪಿ ಹೈಕಮಾಂಡ್​ಗೂ ಪತ್ರ ಬರೆದಿದ್ದಾರೆ.

ರಾಜ್ಯಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್​ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಬೇಕು. ಈ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳ‌ ಅಧ್ಯಕ್ಷರಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಪತ್ರಕ್ಕೆ ಎರಡೂ ಪಕ್ಷಗಳಿಂದ ಯಾವುದೇ ಉತ್ತರ ಬಂದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‌ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ವೀರಶೈವ ಲಿಂಗಾಯತರಿಗೆ ಟಿಕೆಟ್ ಕೊಡಬೇಕು ಎಂಬುದು ನಮ್ಮ ಆಗ್ರಹ ಎಂದರು.

ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ರಾಘವೇಂದ್ರ ಪರ ಶಾಮನೂರು ಹೇಳಿಕೆಗೆ ಡಿಕೆ ಶಿವಕುಮಾರ್ ಸಿಡಿಮಿಡಿ: ಶಿವಮೊಗ್ಗದಲ್ಲಿ ಕಾಂಗ್ರೆಸ್​ ಗೆಲ್ಲಲಿದೆ ಎಂದ ಡಿಸಿಎಂ

ವೀರಶೈವ-ಲಿಂಗಾಯತರು 1999 ರ ವರೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಎಸ್.ನಿಜಲಿಂಗಪ್ಪ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ವಿರೇಂದ್ರ ಪಾಟೀಲ್ ಸೇರಿದಂತೆ ಅನೇಕ ನಾಯಕರು ಇದ್ದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ- ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬರಲಾಗಿದೆ. ಅದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆ ಎಂದಿದ್ದಾರೆ.

ನಮ್ಮ ರಾಜ್ಯದವರೇ ಆದ ನಿಮಗೆ ಸಮುದಾಯದ ಬಗ್ಗೆ ಪ್ರತ್ಯೇಕವಾಗಿ ಹೇಳುವುದು ಏನಿಲ್ಲ. ಏಳು ದಶಕಗಳಿಂದ ಹತ್ತಿರದಿಂದ ಸಮುದಾಯ ಬಲ್ಲವರಾಗಿದ್ದೀರಿ. ಇದನ್ನು ಸರಿಪಡಿಸುವ ಶಕ್ತಿ ನಿಮಗಿದೆ. ಹಾಗಾಗಿ‌ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ