ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಧರ್ಮಸ್ಥಳಕ್ಕೆ ಭೇಟಿ ನೀಡಿ ವಾಪಸ್​ ಬರುವ ವೇಳೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸಕಲೇಶಪುರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿಲ್ಲ. ವರಿಷ್ಠರು ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿಲ್ಲ: ಸಚಿವ ಚಲುವರಾಯಸ್ವಾಮಿ
ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 15, 2023 | 7:46 PM

ಹಾಸನ, ಅಕ್ಟೋಬರ್​​​​​ 15: ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿಲ್ಲ ಎಂದು ಸಚಿವ ಚಲುವರಾಯಸ್ವಾಮಿ (chaluvaraya swamy) ಹೇಳಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿ ವಾಪಸ್​ ಬರುವ ವೇಳೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸಕಲೇಶಪುರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ಬೆಂಗಳೂರಲ್ಲಿ ಪರಾಜಿತ ಅಭ್ಯರ್ಥಿಗಳ ಸಭೆ ಮಾಡಿದ್ದೇವೆ. ಅ.22ರಂದು ಮತ್ತೊಂದು ಸಭೆ ಮಾಡಿ ವರಿಷ್ಠರಿಗೆ ವರದಿ ಸಲ್ಲಿಸುತ್ತೇವೆ. ಆ ವರದಿ ಆಧರಿಸಿ ವರಿಷ್ಠರು ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕೆಂಬುದು ನಮ್ಮ ಆಸೆ. ಕಾಂಗ್ರೆಸ್​ನ ಎಲ್ಲಾ ನಾಯಕರು, ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ ಎಂದರು.

ಬರದ ಪರಿಸ್ಥಿತಿಯಲ್ಲಿ ನಮ್ಮ ಗ್ಯಾರಂಟಿ ಯೋಜನೆ ಸಾಕಷ್ಟು ಸಹಕಾರಿ ಆಗಿದೆ

ಇಂತಹ ಬರದ ಪರಿಸ್ಥಿತಿಯಲ್ಲಿ ನಮ್ಮ ಗ್ಯಾರಂಟಿ ಯೋಜನೆ ಸಾಕಷ್ಟು ಸಹಕಾರಿ ಆಗಿದೆ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಚೆನ್ನಾಗಿ ಆಗಲಿದೆ ಎನ್ನುವ ಭರವಸೆ ಜನರಿಗಿದೆ. ಮೋದಿಯವರು ಅಧಿಕಾರಕ್ಕೆ ಬಂದು ಹತ್ತು ವರ್ಷ ಆಗಿದೆ. ಅವರು ಬಂದ ಮೇಲೆ ಏನೇನು ಆಗಿದೆ ಎನ್ನುವುದು ಕೂಡ ಜನರಿಗೆ ಗೊತ್ತಿದೆ. ಸಹಜವಾಗಿ ಪ್ರಜಾಪ್ರಭುತ್ವದಲ್ಲಿ ನಾವು ಕೊಡುವ ಕಾರ್ಯಕ್ರಮ ಅಭಿವೃದ್ಧಿ ಆಗಲಿದೆ. ಒಂದೇ ಸರ್ಕಾರ ಹತ್ತು ವರ್ಷ ಆದ ಮೇಲೆ ಕೂಡ ಮುಂದುವರೆದಿರುವುದು ಇಲ್ಲಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಇಷ್ಟು ದೊಡ್ಡಮಟ್ಟದ ಗೆಲುವು ಪಡೆದ ಕಾರಣ ಅವರು ಶೇಕ್ ಆಗಿದಾರೆ. ಹಾಗಾಗಿಯೇ ಮಹಿಳಾ ಬಿಲ್ ಮಾಡುವ ಯತ್ನ ಮಾಡಿದಾರೆ. ಆದರೆ ಏನು ಪ್ರಯೋಜನ ಆಗಲ್ಲ. ಮಹಿಳಾ ಬಿಲ್ ಸೊನಿಯಾ ಗಾಂಧಿ ಅವರು ಮಾಡಬೇಕು ಎಂದಿದ್ದರು. ಇವರು ಹಾಗೆ ಮಾಡುವ ಹಾಗಿದ್ದರೆ ಎರಡು ವರ್ಷಗಳ ಹಿಂದೆಯೇ ಮಾಡಿ, ಈಗ ಅದು ಜಾರಿ ಆಗುವ ಹಾಗೆ ಮಾಡಬಹುದಿತ್ತಲ್ಲ. ಈಗ ತಂದಿರುವ ಮಹಿಳೆಯರ ಗಮನ ಬೇರೆಡೆ ಸೆಳೆಯಲು ಈ ಚುನಾವಣೆಯಲ್ಲಿ ಅದರಿಂದ ಏನು ಲಾಭ ಇಲ್ಲ. ಏನಾದರು ಹೊಸದು ಕೊಡಬೇಕು ಎಂದು ಹೀಗೆ ಮಾಡಿದಾರೆ. ಆದರೆ ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಇದೆ. ಈಗ ನಡೆಯುತ್ತಿರು ಐದು ರಾಜ್ಯದ ಚುನಾವಣೆಯಲ್ಲಿ ತೆಲಂಗಾಣದಲ್ಲೇ ಬದಲಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಎಂದರು.

ಸಂಸದೆ ಸುಮಲತಾ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಹಾಲಿ ಸಂಸದರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಸಂಸದೆ ಸುಮಲತಾ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಕಳೆದ ಲೋಕಸಭಾ ಚುನಾವಣೆಯೇ ಬೇರೆ, ಈ ಚುನಾವಣೆಯೇ ಬೇರೆ. ಸುಮಲತಾ ಬಿಜೆಪಿ ಅಥವಾ ಜೆಡಿಎಸ್​​​ನಿಂದ ಅಭ್ಯರ್ಥಿ ಆಗಬೇಕು. ಈಗ ಯಾವುದೇ ಮೈತ್ರಿ ಇಲ್ಲ, ಹಾಗಾಗಿ ನಮ್ಮ ಅಭ್ಯರ್ಥಿ ಇರ್ತಾರೆ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಕೊಡ್ತಾರಾ, JDSಗೆ ಕೊಡ್ತಾರಾ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಹಣ ಬೇಕಾಗಿರೋದು ಬಿಜೆಪಿಯವರಿಗೆ, ನಮಗಲ್ಲ

‘ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸಲು ಸರ್ಕಾರ ಮುಂದಾಗಿದೆ’ ಎಂಬ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದು, ಬಿಜೆಪಿಯವರ ಕೈಯಲ್ಲೇ ಐಟಿ, ಇಡಿ ಇದೆ. ಐಟಿ ಅಧಿಕಾರಿಗಳು ಪರಿಶೀಲನೆ ಮಾಡ್ತಿದ್ದಾರೆ, ನಾವೇನು ಬೇಡ ಎನ್ನಲ್ಲ. ಯಾರ ಹಣ ಎಂಬುದು ತನಿಖೆಯಿಂದ ಗೊತ್ತಾಗಲಿ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಸಾಕಷ್ಟು ಹಣ ಸಂಗ್ರಹ ಮಾಡಿದ್ದಾರೆ. ಈ ಹಿಂದೆ ಪತ್ತೆಯಾಗಿದ್ದ ಹಣ ನಮ್ಮದು ಎಂದು ಘೋಷಣೆ ಮಾಡಿದ್ರಾ ಎಂದಿದ್ದಾರೆ.

ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಈ ರೀತಿ ಹೇಳಿಕೆ ಕೊಡದೆ ಹೋದರೆ ಬಿಜೆಪಿಯವರಿಗೆ ಬಂಡವಾಳ ಇಲ್ಲ. ನಮಗೆ ಹಣ ಸಂಗ್ರಹಿಸಿ ಕೊಡುವ ಪರಿಸ್ಥಿತಿ ಇಲ್ಲ. ನಾವು ಒಂದೊಂದು ಕ್ಷೇತ್ರಕ್ಕೆ ಹಣ ಹಂಚಿ ಗೆಲ್ಲಬೇಕಾದ ಅವಶ್ಯಕತೆ ಇಲ್ಲ. ಹಣವಿಲ್ಲದೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 136 ಸ್ಥಾನ ಗೆದ್ದಿದೆ. ಹಣ ಬೇಕಾಗಿರೋದು ಬಿಜೆಪಿಯವರಿಗೆ, ನಮಗಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Sun, 15 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ