ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರು: ಬಿಜೆಪಿಗಿಂತ ಕಾಂಗ್ರೆಸ್ ಒಂದೆಜ್ಜೆ ಮುಂದೆ
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಕಸರತ್ತು ನಡೆಸಿವೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ 20 ಸ್ಥಾನದಲ್ಲಿ ಗೆಲ್ಲಲು ತಂತ್ರಗಳನ್ನು ರೂಪಿಸಿದೆ. ಇದಕ್ಕೆ ಪೂರಕವೆಂಬಂತೆ ಈಗಾಗಲೇ ಸೂಕ್ತ ಅಭ್ಯರ್ಥಿಗಳ ಆಯ್ಕೆ ಸಂಬಂಧ ವೀಕ್ಷಕರನ್ನು ನೇಮಿಸಿದ್ದು, ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದೆ.
ಹುಬ್ಬಳ್ಳಿ, (ನವೆಂಬರ್ 03): ಕರ್ನಾಟಕದಲ್ಲಿ (Karnataka) ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಕಾಂಗ್ರೆಸ್ (C0ngress) ಈಗಾಗಲೇ ಸಿದ್ಧತೆಗಳನ್ನು ನಡೆಸಿದ್ದು, ಇದೀಗ ಬಿಜೆಪಿಗಿಂತ(BJP) ಒಂದು ಹೆಜ್ಜೆ ಮುಂದೆ ಹೋಗಿ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ಶುರು ಮಾಡಿಕೊಂಡಿದ್ದು, ಇನ್ನೇನು ಮೂರ್ನಾಲ್ಕು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆಂತೆ ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರುಗಳನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ದ ಮಾಡಿಕೊಂಡಿದ್ದಾರೆ. ಅವರು ಇನ್ನೂ ವರದಿಯನ್ನ ಕೊಟ್ಟಿಲ್ಲ. ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: ಜೆಡಿಎಸ್ ಶಾಸಕರಿಗೆ ಡಿಕೆ ಸಹೋದರರ ಗಾಳ: ಹಳೇ ಮೈಸೂರು ಭಾಗದಲ್ಲಿ ಹಿಡಿತಕ್ಕಾಗಿ ಆಪರೇಷನ್ ಹಸ್ತ!
ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ..? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಮಾಡುಲು ಆಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ವರದಿ ಕೊಡಲಿ. ಚಲುವರಾಯಸ್ವಾಮಿ, ಕೃಷ್ಣ ಭೈರೆಗೌಡ್ರು ತಂಡ ಬರ ಅಧ್ಯಯನ ಮಾಡಿದೆ. ಎಲ್ಲಾ ಜಿಲ್ಲೆಗಳಿಗೆ ಹೋಗಿ ಅಧ್ಯಯನ ಮಾಡಿ, 175 ತಾಲೂಕಗಳನ್ನ ಬರ ಎಂದು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿ ಖಾತೆಯಲ್ಲಿ ಒಂದು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಮೀಸಲಿಡಲಾಗಿದೆ ಎಂದು ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.
ಕರ್ನಾಟಕಕ್ಕೆ 50 ವರ್ಷ ಎಲ್ಲರಿಗೂ ಇದೊಂದು ಸುವರ್ಣಾವಕಾಶ. ಇಡೀ ವರ್ಷ ಹಬ್ಬದ ಆಚರಣೆಗೆ ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇವತ್ತು ಗದಗನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ. ಇವತ್ತು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದರು.
ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ