ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಅನ್ನಭಾಗ್ಯಕ್ಕೆ ಇದೀಗ ಅಕ್ಕಿ ಕೊರತೆ ಎದುರಾಗಿದ್ದು, ಕೇಂದ್ರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ದೊಡ್ಡ ಹೋರಾಟ ಮಾಡುವುದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
Follow us
|

Updated on:Jun 15, 2023 | 11:22 PM

ಮೈಸೂರು: ಹೆಚ್ಚುವರಿ ಅಕ್ಕಿ ಕೊಡಲ್ಲವೆಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ. ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತೆ. ನಾವು ಪುಕ್ಸಟ್ಟೆ ಕೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಮಗೆ ಕೊಡಬೇಕಾಗುತ್ತೆಂದು ಎಲ್ಲಾ ರಾಜ್ಯಕ್ಕೂ ಕೊಡಲ್ಲ ಅಂದಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ, ರೂಪುರೇಷೆ ಬಗ್ಗೆ ನಾಳೆ ಹೇಳುತ್ತೇನೆ ಎಂದರು.

ಕರ್ನಾಟಕ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಓಪನ್ ಮಾರ್ಕೆಟ್‌ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೆಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಹೈಕಮಾಂಡ್​ ಭೇಟಿಗೆ ಮುಂದಾದ ಸಿಎಂ ಸಿದ್ಧರಾಮಯ್ಯ

ಈ ವಿಚಾರವಾಗಿ ಹೈಕಮಾಂಡ್‌ ಜೊತೆ ಮಾತನಾಡಲು ಸಿಎಂ ಸಿದ್ಧರಾಮಯ್ಯ ಅವರು ಜೂ.21 ರಂದು ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಭೇಟಿಗೆ ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅದರಲ್ಲೂ ಮುಖ್ಯವಾಗಿ ಅನ್ನಭಾಗ್ಯಕ್ಕೆ ನೀಡುವ ಅಕ್ಕಿ ಬಗ್ಗೆ ಚರ್ಚೆ ನಡೆಸಲಿದ್ದು, ರಾಜ್ಯ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

ಆದರೆ ಇನ್ನು ಈವರೆಗೂ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳ ಕಚೇರಿಯಿಂದ ಅಧಿಕೃತ ಭೇಟಿ ಬಗ್ಗೆ ಸಮಯವಕಾಶದ ಬಗ್ಗೆ ಮಾಹಿತಿ ಬಂದಿಲ್ಲ. ಅವಕಾಶ ದೊರೆತ ತಕ್ಷಣ ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:17 pm, Thu, 15 June 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!