Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಅಸ್ತು ಎಂದ ಕಾಂಗ್ರೆಸ್​

ಕೊವಿಡ್ ಸೇರಿದಂತೆ ಬಿಜೆಪಿ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಆಡಳಿತಾರೂಢ ಕಾಂಗ್ರೆಸ್​ ಸರ್ಕಾರ ಶನಿವಾರ ಅಸ್ತು ಎಂದಿದೆ.  

ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಅಸ್ತು ಎಂದ ಕಾಂಗ್ರೆಸ್​
ಪ್ರಾತಿನಿಧಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Aug 26, 2023 | 10:03 PM

ಬೆಂಗಳೂರು, ಆಗಸ್ಟ್​ 26: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಆಡಳಿತಾರೂಢ ಕಾಂಗ್ರೆಸ್ (Congress)​ ಸರ್ಕಾರ ಅಸ್ತು ಎಂದಿದೆ. ಕೊವಿಡ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹಗರಣಗಳ ಬಗ್ಗೆ ತನಿಖೆಗೆ ನೀಡಲಾಗಿದೆ. ಕೊವಿಡ್ ನಿರ್ವಹಣೆ ಸಂಬಂಧ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದೆ. 40% ಭ್ರಷ್ಟಾಚಾರ ಆರೋಪ ಸಂಬಂಧ ನಿವೃತ್ತ ನ್ಯಾ.ನಾಗಮೋಹನ ದಾಸ್​ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಲಾಗಿದೆ.

ಕೋವಿಡ್ 19 ಸಾಂಕ್ರಾಮಿಕ ರೋಗದ ನಿರ್ವಹಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಔಷಧಿ ಹಾಗೂ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ವಿವರಿಸಲಾಗಿದೆ. ಈ ಪ್ರಕರಣವನ್ನು ತನಿಖೆ ನಡೆಸುವುದು ಸೂಕ್ತವೆಂದು ವಿಚಾರಣಾ ಆಯೋಗ ರಚಿಸಲಾಗಿದೆ.

ಇದನ್ನೂ ಓದಿ: ಧಾರ್ಮಿಕ ಪ್ರಾರ್ಥನೆಗೆ ವಸತಿ ಗೃಹ ಬಳಕೆಗೆ ಯಾವುದೇ ನಿರ್ಬಂಧವಿಲ್ಲ: ಹೈಕೋರ್ಟ್

2021 ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಕುರಿತು ವಿಚಾರಣಾ ಆಯೋಗವು ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿದ್ದು, ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ  ಸೂಚಿಸಿದೆ. ಈ ನಿಟ್ಟಿನಲ್ಲಿ ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಹಾಗೂ ವೈದ್ಯರು ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಲಾಗಿದೆ.

ಇದನ್ನೂ ಓದಿ: ಹಾಸನ: ದೇಶದ ಯಾವುದೇ ರಾಜ್ಯದಲ್ಲೂ ರಸಗೊಬ್ಬರ ಕೊರತೆಯಿಲ್ಲ; ಕೇಂದ್ರ ಸಚಿವ ಭಗವಂತ್ ಖೂಬಾ

ವಿಚಾರಣಾ ಆಯೋಗಕ್ಕೆ ಅಗತ್ಯವಿರುವ ಸಿಬ್ಬಂದಿ, ಸಾಮಗ್ರಿಗಳು, ವಾಹನಗಳ ವ್ಯವಸ್ಥೆ ಹಾಗೂ ಕಛೇರಿ ಮತ್ತು ಅಗತ್ಯ ಸಲಕರಣೆಗಳನ್ನು ಒದಗಿಸುವಂತೆ ಸೂಚಿಸಲಾಗಿದ್ದು, ಆಯೋಗಕ್ಕೆ ಭತ್ತೆ, ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವುದು ಎಂದು ಹೇಳಿದೆ.

ಇನ್ನು ಆಯೋಗವು ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕಛೇರಿಗೆ ಸ್ಮಳಾವಕಾಶವನ್ನು ಆಯೋಗದ ಮಾನ್ಯ ನ್ಯಾಯಾಧೀಶರಿಗೆ, ಕಾರ್ಯದರ್ಶಿಯವರಿಗೆ ಹಾಗೂ ಅಧಿಕಾರಿ, ಸಿಬ್ಬಂದಿಗಳಿಗೆ ವಾಹನಗಳು, ಪೀಠೋಪಕರಣಗಳು, ದೂರವಾಣಿ ವ್ಯವಸ್ಥೆ, ಇತ್ಯಾದಿ ಸೌಲಭ್ಯಗಳನ್ನು ಒದಗಿಸವಂತೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sat, 26 August 23