ಗುತ್ತಿಗೆದಾರರ ಮನೆಯಲ್ಲಿ ಕಾಂಗ್ರೆಸ್ ಚುನಾವಣಾ ಖರ್ಚಿನ ಹಣ ಪತ್ತೆ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

ಕಾಂಗ್ರೆಸ್ ನಾಯಕರ ಮನೆ ಮೇಲೆ ನಡೆದ ಐಟಿ ದಾಳಿ ವೇಳೆ ಕೋಟ್ಯಂತರ ರೂಪಾಯಿ ಪತ್ತೆಯಾಗಿದ್ದು, ಇದನ್ನೇ ಬಿಜೆಪಿ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳನ್ನು ನಡೆಸುತ್ತಿದೆ. ಈ ಹಣ ಕಾಂಗ್ರೆಸ್​ಗೆ ಸೇರಿದ್ದು ಎಂದು ಆರೋಪಿಸುತ್ತಿದೆ. ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕಳ್ಳ ಯಾವತ್ತೂ ತಾನೇ ಕಳ್ಳ ಎಂದು ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ.

ಗುತ್ತಿಗೆದಾರರ ಮನೆಯಲ್ಲಿ ಕಾಂಗ್ರೆಸ್ ಚುನಾವಣಾ ಖರ್ಚಿನ ಹಣ ಪತ್ತೆ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
TV9 Web
| Updated By: Rakesh Nayak Manchi

Updated on: Oct 17, 2023 | 10:38 PM

ಬೆಂಗಳೂರು, ಅ.17: ಕಾಂಗ್ರೆಸ್ ನಾಯಕರ ಮನೆ ಮೇಲೆ ನಡೆದ ಐಟಿ ದಾಳಿ ವೇಳೆ ಕೋಟ್ಯಂತರ ರೂಪಾಯಿ ಪತ್ತೆಯಾಗಿದ್ದು, ಇದನ್ನೇ ಬಿಜೆಪಿ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳನ್ನು ನಡೆಸುತ್ತಿದೆ. ಈ ಹಣ ಕಾಂಗ್ರೆಸ್​ಗೆ ಸೇರಿದ್ದು ಎಂದು ಆರೋಪಿಸುತ್ತಿದೆ. ಆದರೆ ಇದನ್ನು ಕಾಂಗ್ರೆಸ್ ನಿರಾಕರಿಸುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi), ಮುಖ್ಯಮಂತ್ರಿ ಸಿದ್ದರಾಮಯ್ಯನವರೇ (Siddaramaiah), ಕಳ್ಳ ಯಾವತ್ತೂ ತಾನೇ ಕಳ್ಳ ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ನೇರವಾಗಿ ಟಕ್ಕರ್ ಕೊಟ್ಟಿದ್ದಾರೆ.

ಐಟಿ ದಾಳಿಯ ಹಿನ್ನೆಲೆಯಲ್ಲಿ ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡಿ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಕ್ಕ ಪ್ರತ್ಯುತ್ತರ ನೀಡಿರುವ ಪ್ರಲ್ಹಾದ ಜೋಶಿ, “ಕನ್ನಡಿಗರಿಗೆ ದ್ರೋಹ ಬಗೆದ ನೀವು ಅಭಿವೃದ್ಧಿಗೆ ತಿಲಾಂಜಲಿ ಇಟ್ಟಿದ್ದೀರಿ‌. ನಿಮ್ಮ ಮೈತ್ರಿಕೂಟದ ಪಕ್ಷದ ಚುನಾವಣೆಯ ಖರ್ಚು ವೆಚ್ಚ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಸರಕಾರದ ಮೇಲೆ ಬಿದ್ದಿದೆ. ಅದಕ್ಕೆ ಗುತ್ತಿಗೆದಾರರ ಮನೆಯಲ್ಲಿ ನೋಟಿನ ಕಂತೆ ಪತ್ತೆಯಾಗಿದೆ. ನಾಡಿನ ಅಭಿವೃದ್ಧಿಗೆ ಇಲ್ಲದ ಹಣ ನಿಮ್ಮವರ ಮನೆಯಲ್ಲಿ ಪತ್ತೆಯಾಗುತ್ತಿದೆ ಎಂದರೆ “ಕಲೆಕ್ಷನ್” ಜೋರಾಗಿ ನಡೆಯುತ್ತಿರುವುದು ಸ್ಪಷ್ಟ ಎಂದು ನೇರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ತಮ್ಮ ರಾಜಕೀಯ ಲಾಭಕ್ಕಾಗಿ ಇಡೀ ರಾಜ್ಯ ಕತ್ತಲೆಯಲ್ಲಿ ಕೊಳೆಯುವಂತೆ ಮಾಡಿದೆ ಕಾಂಗ್ರೆಸ್ ಸರ್ಕಾರ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಇದೇ ವೇಳೆ ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು ಟೀಕಿಸಿರುವ ಕೇಂದ್ರ ಸಚಿವರು, ಇಂತಹ ಅಪರಿಮಿತ ಭ್ರಷ್ಟಾಚಾರದ ಕಾರಣಕ್ಕೇ ನಿಮ್ಮ ಸರಕಾರಕ್ಕೆ #ATMSarkara ಎಂಬ ಹಣೆಪಟ್ಟಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ‌.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ