ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಿರುವ ತಾರತಮ್ಯವನ್ನು ವಿರೋಧಿಸುವ ಭರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್​ ಈ ಹಿಂದೆ ಪ್ರತ್ಯೇಕ ಭಾರತದ ಮಾತಗಳನ್ನು ಆಡಿದ್ದರು. ಇದೀಗ ಮತ್ತೆ ಡಿಕೆ ಸುರೇಶ್​ ಕುಮಾರ್​ ಮತ್ತೆ ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತುಗಳನ್ನು ಆಡಿದ್ದಾರೆ.

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್​​
ಮಾಜಿ ಸಂಸದ ಡಿಕೆ ಸುರೇಶ್​
Follow us
Sunil MH
| Updated By: ವಿವೇಕ ಬಿರಾದಾರ

Updated on: Oct 11, 2024 | 12:20 PM

ಬೆಂಗಳೂರು, ಅಕ್ಟೋಬರ್​ 11: ಕೇಂದ್ರ ಸರ್ಕಾರ (Union Government) ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ (Karnataka) ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ. ನಾವು ಭಾರತಾಂಬೆಯ ಮಕ್ಕಳು. ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಕುಮಾರ್​ (DK Suresh Kumar)​ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುರುವಾರ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28,152 ಕೋಟಿ ರೂಪಾಯಿ ನೀಡಿದೆ. ಉತ್ತರ ಪ್ರದೇಶಕ್ಕೆ ಮಾತ್ರ 32 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಈ ಮೂಲಕ ಪದೇಪದೆ ಕೆಣಕುವ ಪ್ರಯತ್ನ ನಡೆಯುತ್ತಿದೆ. ದುಃಖದಿಂದ ಈ ಮಾತು ಹೇಳಬೇಕಿದೆ. ರಾಜ್ಯದ ಅಭಿವೃದ್ಧಿಗೆ ಅನ್ಯಾಯವಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದರು.

ಇದನ್ನೂ ಓದಿ: ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ವಿವಾದದ ಕಿಡಿ: ಮುಗಿಬಿದ್ದ ಬಿಜೆಪಿ

ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ, ಆದರೆ ಇಲ್ಲಿನ ನಾಯಕರು ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ. ಕರ್ನಾಟಕದಿಂದ ಬಿಜೆಪಿಯ 19 ಸಂಸದರು ಆಯ್ಕೆಯಾಗಿದ್ದಾರೆ. ಈ ಸಂಸದರು ಧ್ವನಿ ಎತ್ತುತ್ತಿಲ್ಲ. ನಾನು ಒತ್ತಾಯ ಮಾಡಿತ್ತೇನೆ, ನಿಮ್ಮ ನೀತಿ ಬದಲಾವಣೆ ಮಾಡಿ. ರಾಜ್ಯಕ್ಕೆ, ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್