ಸಿಟಿ ರವಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದೆಂಬುದು ಸರ್ಕಾರಕ್ಕೆ ಗೊತ್ತಿದೆ: ವಿಜಯೇಂದ್ರ ಆರೋಪ

ಸಿಟಿ ರವಿಗೆ ಕೊಲೆ ಬೆದರಿಕೆ ಹಾಕಿ ಪತ್ರ ಬರೆದಿದ್ದಾರಂತೆ. 15 ದಿನದೊಳಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಳಿ ಕ್ಷಮೆ ಕೇಳಬೇಕು. ಇಲ್ಲದಿದ್ರೆ ಹತ್ಯೆ ಮಾಡೋದಾಗಿ ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ಜೀವ ಬೆದರಿಕೆಯ ಪತ್ರ ಬರೆದಿದ್ದಾರಂತೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್​ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿಟಿ ರವಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದೆಂಬುದು ಸರ್ಕಾರಕ್ಕೆ ಗೊತ್ತಿದೆ: ವಿಜಯೇಂದ್ರ ಆರೋಪ
ಸಿಟಿ ರವಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದೆಂಬುದು ಸರ್ಕಾರಕ್ಕೆ ಗೊತ್ತಿದೆ: ವಿಜಯೇಂದ್ರ ಆರೋಪ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 11, 2025 | 9:11 PM

ಬೆಂಗಳೂರು, ಜನವರಿ 11: ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ (CT Ravi) ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದೆ. ಒಂದು ಕಡೆ ಸಿಐಡಿ ತನಿಖೆ ನಡುತ್ತಿದೆ. ಮತ್ತೊಂದೆಡೆ ಸಿ.ಟಿ.ರವಿ ಹಾಗೂ ಪುತ್ರನಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಹಾಕ್ತಿದ್ದಾರಂತೆ.

ಇದನ್ನೂ ಓದಿ: ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್​: ಸಿಟಿ ರವಿಗೆ ಬೆದರಿಕೆ ಪತ್ರ

ಸದ್ಯ ಈ ವಿಚಾರವಾಗಿ ಟ್ವೀಟ್ ಮೂಲಕ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ  ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.

ಬಿ.ವೈ ವಿಜಯೇಂದ್ರ ಟ್ವೀಟ್

ಸಿಟಿ ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸುವರ್ಣಸೌಧದಲ್ಲಿ ಹಲ್ಲೆ ಯತ್ನ ಆರೋಪ: ಸಿಐಡಿ ವಿಚಾರಣೆ ಬಳಿಕ ಸಿಟಿ ರವಿ ಹೇಳಿದ್ದಿಷ್ಟು

ಈ ನಿಟ್ಟಿನಲ್ಲಿ ಸಿಟಿ ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸುವೆ. ಶಾಸಕ ಸಿಟಿ ರವಿ ಅವರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರೆದಲ್ಲಿ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ