
ಬೆಂಗಳೂರು, ಜನವರಿ 11: ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ (CT Ravi) ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದೆ. ಒಂದು ಕಡೆ ಸಿಐಡಿ ತನಿಖೆ ನಡುತ್ತಿದೆ. ಮತ್ತೊಂದೆಡೆ ಸಿ.ಟಿ.ರವಿ ಹಾಗೂ ಪುತ್ರನಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಹಾಕ್ತಿದ್ದಾರಂತೆ.
ಇದನ್ನೂ ಓದಿ: ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಬೆದರಿಕೆ ಪತ್ರ
ಸದ್ಯ ಈ ವಿಚಾರವಾಗಿ ಟ್ವೀಟ್ ಮೂಲಕ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ… pic.twitter.com/KGfZeVGV8G
— Vijayendra Yediyurappa (@BYVijayendra) January 11, 2025
ಸಿಟಿ ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ” ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸುವರ್ಣಸೌಧದಲ್ಲಿ ಹಲ್ಲೆ ಯತ್ನ ಆರೋಪ: ಸಿಐಡಿ ವಿಚಾರಣೆ ಬಳಿಕ ಸಿಟಿ ರವಿ ಹೇಳಿದ್ದಿಷ್ಟು
ಈ ನಿಟ್ಟಿನಲ್ಲಿ ಸಿಟಿ ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸುವೆ. ಶಾಸಕ ಸಿಟಿ ರವಿ ಅವರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರೆದಲ್ಲಿ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.