AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಬಂದಿದೆ-ಬರಗಾಲ ತಂದಿದೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ, ವ್ಯಂಗ್ಯ

Karnataka Politics; ವಿಧಾನಸಭೆ ಚುನಾವಣೆಗೂ ಮುನ್ನ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿತ್ತು. ಬಿಜೆಪಿ ಆಡಳಿತದ ಬಗ್ಗೆ ವ್ಯಂಗ್ಯವಾಡಿತ್ತು. ಇದೀಗ ಬಿಜೆಪಿ ಸರದಿ. ‘ಕಾಂಗ್ರೆಸ್‌ ಬಂದಿದೆ-ಬರಗಾಲ ತಂದಿದೆ. ರಾಜ್ಯದಲ್ಲಿ ಬರ ಆವರಿಸಿದೆ- ಹನಿ ನೀರಿಗೂ ಹಾಹಾಕಾರ ಶುರುವಾಗಿದೆ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಬಿಜೆಪಿ ಪೋಸ್ಟ್ ಮಾಡಿದೆ.

ಕಾಂಗ್ರೆಸ್‌ ಬಂದಿದೆ-ಬರಗಾಲ ತಂದಿದೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ, ವ್ಯಂಗ್ಯ
ಬಿಜೆಪಿ ಟ್ವೀಟ್ ಮಾಡಿರುವ ಫೋಟೊImage Credit source: Twitter
ಗಣಪತಿ ಶರ್ಮಾ
|

Updated on:Sep 13, 2023 | 6:15 PM

Share

ಬೆಂಗಳೂರು, ಸೆಪ್ಟೆಂಬರ್ 13: ಬರ ಪೀಡಿತ ಜಿಲ್ಲೆಗಳ ಘೋಷಣೆ ಹಾಗೂ ಪರಿಹಾರ ನೀಡಿಕೆ ವಿಳಂಬ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಬಿಜೆಪಿ (BJP) ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ವಾಗ್ದಾಳಿ ನಡೆಸಿದೆ. ಜತೆಗೆ, ಬರ ಪೀಡಿತ ಭೂಮಿಯ ಚಿತ್ರದ ಮಾದರಿಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಭಾವಚಿತ್ರ ಪ್ರಕಟಿಸಿ, ‘ಬರ ಗ್ಯಾರಂಟಿ ಸಿಎಂ’ ಎಂಬ ಅಡಿಬರಹ ನೀಡಿ ವ್ಯಂಗ್ಯವಾಡಿದೆ. ‘ಕಾಂಗ್ರೆಸ್‌ ಬಂದಿದೆ-ಬರಗಾಲ ತಂದಿದೆ. ರಾಜ್ಯದಲ್ಲಿ ಬರ ಆವರಿಸಿದೆ- ಹನಿ ನೀರಿಗೂ ಹಾಹಾಕಾರ ಶುರುವಾಗಿದೆ’ ಎಂದು ಬಿಜೆಪಿ ಉಲ್ಲೇಖಿಸಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿತ್ತು. ಬಿಜೆಪಿ ಆಡಳಿತದ ಬಗ್ಗೆ ವ್ಯಂಗ್ಯವಾಡಿತ್ತು. ಇದೀಗ ಬಿಜೆಪಿ ಸರದಿ. ಬಿಜೆಪಿ ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಸಿಎಂ ಫೋಟೊವನ್ನೇ ಎಡಿಟ್ ಮಾಡಿ ಪ್ರಕಟಿಸಿದೆ.

ಬರ ಪೀಡಿತ ತಾಲೂಕುಗಳ ಘೋಷಣೆ ಮಾಡದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಷ್ಟೊತ್ತಿಗಾಗಲೇ ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳ ಘೋಷಣೆ ಆಗಬೇಕಿತ್ತು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ನೆಪ ಹೇಳುತ್ತಾ ಮುಂದೂಡಿಕೆ ಮಾಡುತ್ತಿದೆ. ಕಾಂಗ್ರೆಸ್​​ ಸರ್ಕಾರದ ಬಣ್ಣ ಬಯಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಈ ಮಧ್ಯೆ, ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚಿಸಿರುವುದು ಕರ್ನಾಟಕಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಒಂದೆಡೆ ರೈತರ, ಚಳವಳಿಗಾರರ ಪ್ರತಿಭಟನೆಯ ಕಾವು ಏರತೊಡಗಿದೆ. ಅತ್ತ ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ಸುಪ್ರೀಂ ಕೋರ್ಟ್​ ಎದುರು ಸಮರ್ಥ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಬರ ವಿಚಾರವಾಗಿ ಬಿಜೆಪಿ ವಾಗ್ದಾಳಿ ಮುಂದುವರಿದಿದೆ.

ತಮಿಳುನಾಡಿಗೆ ನೀರು ಬಿಡಬಾರದು; ಗದಗದಲ್ಲಿ ಬೊಮ್ಮಾಯಿ ಆಗ್ರಹ

ರಾಜ್ಯದಲ್ಲಿ ಕುಡಿಯಲು ನೀರು ಇಲ್ಲದಂತಹ ಸ್ಥಿತಿಯಿದೆ. ನೀರು ಬಿಡಬಾರದು ಎಂದು ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮಿಳುನಾಡಿಗೆ ಈಗಾಗಲೇ 15 ದಿನ 10 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ನೀರು ಹರಿಸಲಾಗಲ್ಲವೆಂದು ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಹಾಕಿದ್ದಾರೆ. ರಾಜ್ಯ ಸರ್ಕಾರ ಇದಕ್ಕೆ ಬದ್ಧವಾಗಿರಬೇಕೆಂದು ಹೇಳಿದ್ದೇವೆ. ಸರ್ವಪಕ್ಷಸಭೆಯಲ್ಲಿ ಈ ರೀತಿ ನಿರ್ಧರಿದ್ದರೆ ಸರ್ಕಾರದ ಜೊತೆ ನಿಲ್ಲುತ್ತೇವೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Wed, 13 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?