ಜೆಡಿಎಸ್​​-ಬಿಜೆಪಿ ಮೈತ್ರಿಗೆ ಪೆಟ್ಟು ಕೊಡಲು ಕಾಂಗ್ರೆಸ್​ ಸನ್ನದ್ಧ, ಅಸ್ತ್ರ ಪ್ರಯೋಗಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ ಸಿದ್ಧತೆಗಳು ಆರಂಭಿಸಿವೆ. ಅದರಲ್ಲೂ ಬಿಜೆಪಿ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್​ ವಿರುದ್ಧ ವಿಧಾನಸಭಾ ಸೋಲಿನ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​-ಬಿಜೆಪಿ ಮೈತ್ರಿಗೆ ಪೆಟ್ಟು ನೀಡಲು ಪ್ರಮುಖ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಇದಕ್ಕೆ ಹೈಕಮಾಂಡ್​ ಸಹ ಗ್ರೀನ್ ಸಿಗ್ನಲ್ ನೀಡಿದೆ. ಏನದು? ಇಲ್ಲಿದೆ ವಿವರ

ಜೆಡಿಎಸ್​​-ಬಿಜೆಪಿ ಮೈತ್ರಿಗೆ ಪೆಟ್ಟು ಕೊಡಲು ಕಾಂಗ್ರೆಸ್​ ಸನ್ನದ್ಧ, ಅಸ್ತ್ರ ಪ್ರಯೋಗಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್
ಕಾಂಗ್ರೆಸ್, ಬಿಜೆಪಿ, ಜೆಡಿಎಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 21, 2023 | 12:47 PM

ಬೆಂಗಳೂರು, (ಸೆಪ್ಟೆಂಬರ್ 21): ಬಿಜೆಪಿ ಹಾಗೂ ಜೆಡಿಎಸ್​ ನಡುವಿನ ಮೈತ್ರಿ (BJP JDS Alliance)ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇಂದು (ಸೆ.21) ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದು, ಬಿಜೆಪಿ ಹೈಕಮಾಂಡ್​ ನಾಯಕರ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ರಾತ್ರಿ ವೇಳೆ ಮೈತ್ರಿ ಮಾತುಕತೆ ಮುಗಿಯಲಿದ್ದು, ನಾಳೆ(ಸೆ.22) ದೆಹಲಿಯಲ್ಲಿ ಉಭಯ ಪಕ್ಷಗಳ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಸಹ ಮೈತ್ರಿಗೆ ಪೆಟ್ಟು ನೀಡಲು ಆಪರೇಷನ್ ಹಸ್ತ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದ್ದು, ಇದಕ್ಕೆ ಹೈಕಮಾಂಡ್​, ರಾಜ್ಯ ಕಾಂಗ್ರೆಸ್​ ನಾಯಕರಿಗೆ ಗ್ರೀನ್​ ಸಿಗ್ನಲ್ ನೀಡಿದೆ.

ಹೌದು.. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಿನ್ನೆ(ಸೆ 20) ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಮಹತ್ವ ಚರ್ಚೆ ನಡೆಸಿದರು. ಅಲ್ಲದೇ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್​ ಸೇರಲು ಇಚ್ಛಿಸಿರುವ 15 ನಾಯಕರ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಇನ್ನು ಇದೇ ವೇಳೆ ಮೈತ್ರಿಗೆ ಪೆಟ್ಟು ನೀಡಲು ಆಪರೇಶನ್ ಹಸ್ತಕ್ಕೆ ಹೈಕಮಾಂಡ್​ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ; ಪ್ರಧಾನಿ ಮೋದಿ ಭೇಟಿ ವೇಳೆ 5 ಸ್ಥಾನಗಳಿಗೆ ಬೇಡಿಕೆ ಇಡಲಿದ್ದಾರಾ ಹೆಚ್​ಡಿ ದೇವೇಗೌಡರು?

ಜೆಡಿಎಸ್​ ಹಾಗೂ ಬಿಜೆಪಿಯ ನಾಯಕರು ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರುವವರಿದ್ದರೆ ಸೇರಿಸಿಕೊಳ್ಳಿ. ಲೋಕಸಭಾ ಚುನಾವಣೆಗೆ ಲಾಭ ಆಗುವ ರೀತಿ ಆಪರೇಷನ್ ಹಸ್ತ ಮಾಡಬೇಕು ಎಂದು ಹೈಕಮಾಂಡ್​, ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಇನ್ನು ಸಭೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ತಂತ್ರಗಾರಿಕೆ ಕುರಿತು ಸುದೀರ್ಘ ಮಾತುಕತೆ ನಡೆದಿದೆ. ಸಚಿವ ಚಲುವರಾಯಸ್ವಾಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮತ್ತು ಕೆಲ ಪ್ರಮುಖ ನಾಯಕರು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಒಕ್ಕಲಿಗರು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಾಯಿತು. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಬಹುದು ಎಂಬ ಮಾಹಿತಿ ಸಂಗ್ರಹ ಮಾಡಲಾಯಿತು. ಅಲ್ಲದೆ, JDS, ಬಿಜೆಪಿ ಮೈತ್ರಿ ಮಣಿಸಲು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ಕೂಡ ನಡೆದಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲು ಮಹತ್ವದ ಬೆಳವಣಗೆಗಳು ನಡೆಯುತ್ತಿದ್ದು, ಮುಂದೆ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ