AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜಿನಿಯರ್ 10.5 ಲಕ್ಷ ರೂ. ವಿಧಾನಸೌಧಕ್ಕೆ ತಂದಿದ್ದೇಕೆ? ಲಂಚ ಪಡೆದ ಹಣವೋ, ಮಂತ್ರಿಗೆ ಕೊಡಲು ತಂದ ಹಣವೋ? ಕೈ ಪ್ರಶ್ನೆ

ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ವಾರ್​ ನಡೆಸಿದೆ.

ಇಂಜಿನಿಯರ್ 10.5 ಲಕ್ಷ ರೂ. ವಿಧಾನಸೌಧಕ್ಕೆ ತಂದಿದ್ದೇಕೆ? ಲಂಚ ಪಡೆದ ಹಣವೋ, ಮಂತ್ರಿಗೆ ಕೊಡಲು ತಂದ ಹಣವೋ? ಕೈ ಪ್ರಶ್ನೆ
ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ವಾರ್
TV9 Web
| Edited By: |

Updated on: Jan 05, 2023 | 3:57 PM

Share

ಬೆಂಗಳೂರು: ವಿಧಾನಸೌಧದಲ್ಲಿ (vidhana soudha) ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ಎಂಜಿನಿಯರ್ ಓರ್ವರನ್ನು ವಶಕ್ಕೆ ಪಡೆದಿರು ಪೊಲೀಸರು ಆತನಿಂದ ರೂ.10.5 ಲಕ್ಷ ರೂಪಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, PWD ಇಂಜಿನಿಯರ್ 10.5 ಲಕ್ಷ ರೂ. ವಿಧಾನಸೌಧಕ್ಕೆ ತಂದಿದ್ದೇಕೆ? ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? ಸಿಎಂ ಬೊಮ್ಮಾಯಿ (Basavaraj Bommai) ಉತ್ತರಿಸಬೇಕೆಂದು ಆಗ್ರಹಿಸಿದೆ.

ಇದನ್ನೂ ಓದಿ: ವಿಧಾನಸೌಧಕ್ಕೆ 10 ಲಕ್ಷ ಹಣ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ. ವಿಧಾನಸೌಧ ಈಗ ಅಕ್ರಮ ಡೀಲಿಂಗ್‌ಗಳ ಅಡ್ಡೆಯಾಗಿದೆ. ವಿಧಾನಸೌಧಕ್ಕೆ 10.5 ಲಕ್ಷ ಹಣವನ್ನು PWD ಇಂಜಿನಿಯರ್ ತಂದಿದ್ದೇಕೆ? ಆ ಹಣ ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? 40% ಕಮಿಷನ್ ಲೂಟಿಯ ಹಣವೋ? ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಒತ್ತಾಯಿಸಿದೆ.

ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು.ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ. ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ. ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ, 40% ಕಮಿಷನ್ ಕಡ್ಡಾಯ’ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ. ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ. ಸಿಕ್ಕಿಬಿದ್ದ 10 ಲಕ್ಷ ಇದೆಲ್ಲದಕ್ಕೂ ಸಾಕ್ಷಿಯಾಗಿದೆ ನಿಂತಿದೆ.

ಗುಡ್ ಆಫ್ಟರ್‌ನೂನ್ @BJP4Karnataka ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ ಜೆಪಿ ನಡ್ಡಾ ಬಂದಿರುವುದಕ್ಕೂ ಸಂಬಂಧವಿದೆಯೇ? 40% ಕಮಿಷನ್‌ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ? ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ? ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? ಎಂದು ಗುಡ್​ ಮಾರ್ನಿಂಗ್ ಹೇಳಿದ್ದ ಬಿಜೆಪಿಗೆ ತಿರುಗೇಟು ನೀಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?