ಬೆಂಗಳೂರು: ವಿಧಾನಸೌಧದಲ್ಲಿ (vidhana soudha) ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ಎಂಜಿನಿಯರ್ ಓರ್ವರನ್ನು ವಶಕ್ಕೆ ಪಡೆದಿರು ಪೊಲೀಸರು ಆತನಿಂದ ರೂ.10.5 ಲಕ್ಷ ರೂಪಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, PWD ಇಂಜಿನಿಯರ್ 10.5 ಲಕ್ಷ ರೂ. ವಿಧಾನಸೌಧಕ್ಕೆ ತಂದಿದ್ದೇಕೆ? ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? ಸಿಎಂ ಬೊಮ್ಮಾಯಿ (Basavaraj Bommai) ಉತ್ತರಿಸಬೇಕೆಂದು ಆಗ್ರಹಿಸಿದೆ.
ಇದನ್ನೂ ಓದಿ: ವಿಧಾನಸೌಧಕ್ಕೆ 10 ಲಕ್ಷ ಹಣ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ. ವಿಧಾನಸೌಧ ಈಗ ಅಕ್ರಮ ಡೀಲಿಂಗ್‌ಗಳ ಅಡ್ಡೆಯಾಗಿದೆ. ವಿಧಾನಸೌಧಕ್ಕೆ 10.5 ಲಕ್ಷ ಹಣವನ್ನು PWD ಇಂಜಿನಿಯರ್ ತಂದಿದ್ದೇಕೆ? ಆ ಹಣ ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? 40% ಕಮಿಷನ್ ಲೂಟಿಯ ಹಣವೋ?
ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ಗುಡ್ ಆಫ್ಟರ್‌ನೂನ್ @BJP4Karnataka,
ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ, @JPNadda ಬಂದಿರುವುದಕ್ಕೂ ಸಂಬಂಧವಿದೆಯೇ?
40% ಕಮಿಷನ್‌ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ?
ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ?ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? https://t.co/jXA3DZF27l
— Karnataka Congress (@INCKarnataka) January 5, 2023
ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು.ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ. ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು.
ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು.
ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ.
ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ.
— Karnataka Congress (@INCKarnataka) January 5, 2023
ಬಿಜೆಪಿ ಸರ್ಕಾರದ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ. ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ, 40% ಕಮಿಷನ್ ಕಡ್ಡಾಯ’ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ. ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ. ಸಿಕ್ಕಿಬಿದ್ದ 10 ಲಕ್ಷ ಇದೆಲ್ಲದಕ್ಕೂ ಸಾಕ್ಷಿಯಾಗಿದೆ ನಿಂತಿದೆ.
‘@BJP4Karnataka ಆಡಳಿತದಲ್ಲಿ
ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ.
ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ,
‘40% ಕಮಿಷನ್ ಕಡ್ಡಾಯ’ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ.ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ.
ಸಿಕ್ಕಿಬಿದ್ದ 10 ಲಕ್ಷ ಇದೆಲ್ಲದಕ್ಕೂ ಸಾಕ್ಷಿಯಾಗಿದೆ ನಿಂತಿದೆ.
— Karnataka Congress (@INCKarnataka) January 5, 2023
ಗುಡ್ ಆಫ್ಟರ್‌ನೂನ್ @BJP4Karnataka ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ ಜೆಪಿ ನಡ್ಡಾ ಬಂದಿರುವುದಕ್ಕೂ ಸಂಬಂಧವಿದೆಯೇ? 40% ಕಮಿಷನ್‌ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ? ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ? ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? ಎಂದು ಗುಡ್ ಮಾರ್ನಿಂಗ್ ಹೇಳಿದ್ದ ಬಿಜೆಪಿಗೆ ತಿರುಗೇಟು ನೀಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ