ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ: ಬಿಜೆಪಿ ಶಾಸಕ ಸುರೇಶ್ ಗೌಡ

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ: ಬಿಜೆಪಿ ಶಾಸಕ ಸುರೇಶ್ ಗೌಡ
Follow us
ರಮೇಶ್ ಬಿ. ಜವಳಗೇರಾ
|

Updated on:May 29, 2023 | 4:04 PM

ತುಮಕೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ದಿನದಲ್ಲಿ ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳ ಅನುದಾನ ಬಿಡುಗಡೆ ತಡೆಹಿಡಿದಿದೆ. ಜತೆಗೆ ಆರಂಭವಾಗಬೇಕಿರುವ ಕಾಮಗಾರಿಗಳನ್ನೂ ತಡೆಹಿಡಿಯುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದರು. ಇದು ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಬಿಜೆಪಿ ನಾಯಕರು ಸಹ ಖಂಡಿಸಿದ್ದಾರೆ. ಇನ್ನು ಈ ಬಗ್ಗೆ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಸಿದ್ದಗಂಗಾ ಮಠದ 10 ಕೋಟಿ ರೂ ಅನುದಾನ ತಡೆಹಿಡಿದಿದೆ. ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ

ನನ್ನ ಕ್ಷೇತ್ರದ 20 ಕೋಟಿ ರೂ ಅನುದಾನ ತಡೆಹಿಡಿಯಲಾಗಿದೆ. ಅದರಲ್ಲಿ ಸಿದ್ದಗಂಗಾ ಮಠದ 10 ಕೋಟಿ ರೂ. ಸಹ ಸೇರಿದೆ. ಸಿದ್ದಗಂಗಾ ಮಠದ ಅನುದಾನವನ್ನು ಶಾಶ್ವತವಾಗಿ ತಡೆ ಹಿಡಿಯುವ ಧಮ್ಮು ಸರ್ಕಾರಕ್ಕೆ ಇಲ್ಲ. ಒಟ್ಟು 20 ಸಾವಿರ ಕೋಟಿ ರೂ, ತಡೆಹಿಡಿದಿದ್ದಾರೆ,ಇದರಲ್ಲಿ ಮಠದ್ದು ಸೇರಿದೆ. ಅದನ್ನ ಮತ್ತೆ ಮಠಕ್ಕೆ ಕೊಡುವ ವಿಶ್ವಾಸ ಇದೆ. ಒಂದು ವೇಳೆ ಅನುದಾನ ಬಿಡುಗಡೆ ಮಾಡದೇ ಇದ್ದರೆ ಬೀದಿಗಿಳಿದು ಹೊರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಯಾವ ಸರ್ಕಾರ ರೀ…ಜನಗಳಿಂದ ಬಂದ ಸರ್ಕಾರ ರೀ. ಯಾಕೆ ಅನುದಾನ ಕೊಡಲ್ಲ. ಭ್ರಷ್ಟಾಚಾರ ಆಗಿದ್ದರೆ ತಡೆಹಿಡಿಯಲಿ. ಅದನ್ನು ಬಿಟ್ಟು ಅನಾವಶ್ಯಕವಾಗಿ ತಡೆಹಿಡಿಯಬಾರದು. ಆದರೂ ಮಠದ ಅನುದಾನ ತಡೆ ತೆರವು ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದೇ ಜನರಿಗೆ ಮೋಸ ಮಾಡುತಿದ್ದಾರೆ. ಕರ್ನಾಟಕದ ಜನತೆ ಮೋಸ ಹೋಗಿದ್ದಾರೆ. ಕಾಂಗ್ರೆಸ್ ನವರು ಹೇಳಿದಂತೆ ನಾನೂ ಕೂಡ ಕರೆಂಟ್ ಬಿಲ್ ಕಟ್ಟಲ್ಲ. 200 ಯೂನಿಟ್ ವರೆಗೆ ಬಿಲ್ ಕಟ್ಟಲ್ಲ. ನಮ್ಮ ಯಾವ ಕಾರ್ಯಕರ್ತರು ಕರೆಂಟ್ ಬಿಲ್ ಕಟ್ಟಲ್ಲ. ಡಿಕೆ ಶಿವಕುಮಾರ್ ಅವರು ಮನೆ ಯಜಮಾನಿಗೆ 2 ಸಾವಿರ ಹಣ ಕೊಡುತ್ತೇನೆ ಎಂದು ಹೇಳಿದರು. ಈಗ ಅವರಿಗೆ ಸೊಸೆಗೆ ಹಣ ಹಾಕಬೇಕೋ ಅತ್ತೆಗೆ ಹಣ ಹಾಕಬೇಕೋ ಅನ್ನುವ‌ ಗೊಂದಲ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

Published On - 4:02 pm, Mon, 29 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ