ಹುಬ್ಬಳ್ಳಿ: ಮಾರ್ಚ್ 9ರಂದು 2 ಗಂಟೆಗಳ ಕಾಲ ಬಂದ್ಗೆ ಕಾಂಗ್ರೆಸ್ (Congress) ಬಂದ್ ಕರೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇವರ ಕೈ ಸಂಪೂರ್ಣ ಬ್ರಷ್ಟಾಚಾರದಿಂದ ಕೂಡಿದೆ. ಜನ ಇವರ ಆಟ ನೋಡಿದ್ದಾರೆ. ಯಾರೂ ಸತ್ಯ ಹರಿಶ್ಚಂದ್ರ ಅನ್ನೋದು ಜನರಿಗೆ ಗೊತ್ತಿದೆ ಎಂದು ಹೇಳಿದರು.
ಹುಬ್ಬಳ್ಳಿಯ (Hubli) ಆದರ್ಶನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಜನ ಈ ಬಂದ್ ಕರೆಗೆ ಬೆಂಬಲ ನೀಡುವುದಿಲ್ಲ. ಆಪಾದನೆ ಮಾಡುವವರು ಮೊದಲು ಶುದ್ಧಹಸ್ತರಿರಬೇಕು. ಆವಾಗ ಅದಕ್ಕೆ ಬೆಲೆ ಬರುತ್ತದೆ. ಕಾಂಗ್ರೆಸ್ನವರು ದಿಂಬು, ಹಾಸಿಗೆ, ಬಿಸ್ಕೇಟ್ ಮತ್ತು ಕಾಫಿಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ, ಕಾಂಗ್ರೆಸ್ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದೆ ಎಂದು ಆರೋಪ ಮಾಡಿದರು.
ಮಾಜಿ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವ ಕೆ ಜೆ ಜಾರ್ಜ್, ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪಗೆ ಕೇಳಬೇಕು ವಿಪಕ್ಷ ನಾಯಕ ಸಿದ್ಧರಾಮಯ್ಯ ಎಷ್ಟೆಲ್ಲ ಟಾರ್ಗೇಟ್ ಕೊಟ್ಟಿದ್ದರು ಎಂದು. ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದರೆ ನಡೆಯಲ್ಲ. ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ ? ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆದುಕೊಳ್ಳಬಹುದು ಅನ್ನೋದು ಮೂರ್ಖತನ. ಚುನಾವಣಾ ಅಖಾಡವಿದೆ ಜನರು ತೀರ್ಮಾನ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.
ಬೆಳಗಾವಿ ರಾಜಹಂಸಗಡದಲ್ಲಿ ಕಾಂಗ್ರೆಸ್ನಿಂದ ಶಿವಾಜಿ ಪ್ರತಿಮೆ ಮರು ಉದ್ಘಾಟನೆ ವಿಚಾರವಾಗಿ ಮಾತನಾಡಿದ ಅವರು ಇದೊಂದು ಹಾಸ್ಯಾಸ್ಪದ ಸಂಗತಿ. ಸರ್ಕಾರವೇ ಬಂದು ಮೂರ್ತಿ ಉದ್ಘಾಟನೆ ಮಾಡಿದ ಮೇಲೆ ಈ ರೀತಿ ಮಾಡೋದು ಸರಿಯಲ್ಲ. ಸರ್ಕಾರದಿಂದ ಉದ್ಘಾಟನೆ ಮಾಡಿದ ನಂತರ ವಣ ಪ್ರತಿಷ್ಠೆಗಾಗಿ ಈ ರೀತಿ ಮಾಡಲಾಗಿದೆ. ರಾಷ್ಟ್ರನಾಯಕರ ಹೆಸರಲ್ಲಿ ಈ ರೀತಿ ರಾಜಕೀಯ ಮಾಡೋದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಐಎಸ್ಕೆಪಿ ಹೊಣೆಹೊತ್ತ ವಿಚಾರವಾಗಿ ಮಾತನಾಡಿದ ಅವರು ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಕೇಳಬೇಕು. ಬರೀ ಸಾದಾ ಕುಕ್ಕರ್ ಅಂತಾ ಡಿಕೆ ಶಿಕುಮಾರ್ ಹೇಳಿದರು. ಬಿಜೆಪಿಯವರು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತಾ ಹೇಳಿದರು. ಈಗ ಈ ವಿಚಾರಕ್ಕೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:55 am, Mon, 6 March 23