ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು; ಹಾನಗಲ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಅಸಮಾಧಾನ

Karnataka Byelection 2021: ಹಿಂದೆ ನಾವು ಎರಡು ಉಪಚುನಾವಣೆಗಳಲ್ಲಿ ಗೆದ್ದಿದ್ದೆವು. ಆದರೆ ಸಾರ್ವತ್ರಿಕ ಚುನಾವಣೇಲಿ ನಾವು ಸೋತೆವು. ನನಗೆ ವಿಸ್ವಾಸವಿದೆ. ಹಾನಗಲ್‌ ಮತ್ತು ಸಿಂದಗಿ ಎರಡೂ ಗೆಲ್ತೀವಿ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿಗಳು; ಹಾನಗಲ್ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾರ್ಯಕರ್ತರ ಅಸಮಾಧಾನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Oct 07, 2021 | 3:50 PM

ಹಾವೇರಿ: ಹಾನಗಲ್ ಹಾಗೂ ಸಿಂದಗಿ ಪಟ್ಟಣಗಳಲ್ಲಿ ಅಕ್ಟೋಬರ್ 30 ರಂದು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಇಂದು (ಅಕ್ಟೋಬರ್ 7) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾನಗಲ್ ಪಟ್ಟಣದ ತಹಶೀಲ್ದಾರ್​​ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಚುನಾವಣಾಧಿಕಾರಿ ಅಶೋಕ‌ ತೇಲಿಗೆ 4 ಸೆಟ್​ಗಳಲ್ಲಿ ಶ್ರೀನಿವಾಸ ಮಾನೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ.

ಈ ಉಪಚುನಾವಣೆ ನಾವು ಬಯಸಿರಲಿಲ್ಲ. ಸಿ.ಎಂ. ಉದಾಸಿಯವರು ಅನಾರೋಗ್ಯದಿಂದ ಮೃತಪಟ್ಟ ನಂತರ ಅವರ ಸ್ಥಾನ ಭರ್ತಿ ಮಾಡಲು ಚುನಾವಣೆ ನಡೆಸಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಾನೆ ಗೆಲ್ತಾರೆ ಅನ್ನೋ ವಿಶ್ವಾಸವಿತ್ತು. ನಮಗೆ ಆಗ ಸೋಲಾಯ್ತು. ಈ ಬಾರಿ‌ ಮಾನೆ ನೂರಕ್ಕೆ ನೂರು ಗೆಲ್ತಾರೆ. ಕೇಂದ್ರ ಮತ್ತು ರಾಜ್ಯದ ಡಬಲ್‌ ಇಂಜಿನ್ ಸರಕಾರದ ಬಗ್ಗೆ ಜನರು ಬಹಳ ಭರವಸೆ ಇಟ್ಟುಕೊಂಡಿದ್ರು. ಕರ್ನಾಟಕದಲ್ಲಿ ಸ್ವರ್ಗ ಸೃಷ್ಟಿ ಮಾಡ್ತೇವೆ ಅಂದಿದ್ದರು. ಆದ್ರೆ ಯಾವುದೂ ಆಗ್ಲಿಲ್ಲ. ಜನರು ಬಿಜೆಪಿ ಬಗ್ಗೆ ಭ್ರಮನಿರಸನಗೊಂಡಿದ್ದಾರೆ ಎಂದು ತಹಶೀಲ್ದಾರ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ನಾಮಪತ್ರ ಸಲ್ಲಿಕೆ ನಂತರ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಕೊರೊನಾದಿಂದ ಅನೇಕರು ಮನೆಯಲ್ಲಿದ್ದ ಒಡವೆಗಳನ್ನ ಗಿರವಿ ಇಟ್ಟಿದ್ದಾರೆ. ಯಡಿಯೂರಪ್ಪ ಬದಲಾವಣೆ ಆಗಿದ್ದಾರೆ. ಸರಕಾರ ಅದೆ ಸರಕಾರವಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿ ಹೋಗಿದೆ. ಸಂಬಳ ಕೊಡಲು ಇಲ್ಲದ ಪರಿಸ್ಥಿತಿ ಇದೆ. ಇದರಿಂದ‌ ಸಾಮಾನ್ಯ ಜನ ಬೇಸತ್ತಿದ್ದಾರೆ. ಜನರು ಬದಲಾವಣೆ ಬಯಸ್ತಿದ್ದಾರೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ತೀವಿ. ಈ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ. ಇದೊಂದು ಮಹತ್ವದ ಚುನಾವಣೆ. ಉಪಚುನಾವಣೆಗಳು ಸಾರ್ವತ್ರಿಕ ಚುನಾವಣೆಗೆ ಮಾರ್ಗಸೂಚಿಗಳಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೆ ನಾವು ಎರಡು ಉಪಚುನಾವಣೆಗಳಲ್ಲಿ ಗೆದ್ದಿದ್ದೆವು. ಆದರೆ ಸಾರ್ವತ್ರಿಕ ಚುನಾವಣೇಲಿ ನಾವು ಸೋತೆವು. ನನಗೆ ವಿಸ್ವಾಸವಿದೆ. ಹಾನಗಲ್‌ ಮತ್ತು ಸಿಂದಗಿ ಎರಡೂ ಗೆಲ್ತೀವಿ. ಜೆಡಿಎಸ್ ನವರು ನಮ್ಮನ್ನ ಟಾರ್ಗೆಟ್ ಮಾಡ್ಕೊಂಡು ಚುನಾವಣೆಗೆ ನಿಂತಿದ್ದಾರೆ. ಜೆಡಿಎಸ್ ನವರ ಬಗ್ಗೆ ಮಾತನಾಡೋದಿಲ್ಲ. ನಾವು ಗೆಲ್ತೀವಿ ಎಂದು ಕಾಂಗ್ರೆಸ್ ಗೆಲುವಿನ ಬಗ್ಗೆ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಂದಗಿ ಉಪ‌ಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಗರ್ಥಿ ಅಶೋಕ ಮನಗೂಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಪ್ರತ್ಯೇಕ ಎರಡು ನಾಮಪತ್ರ ಸಲ್ಲಿಸಿದ ಅಶೋಕ ಮನಗೂಳಿ, ಚುನಾವಣಾಧಿಕಾರಿ ರಾಹುಲ್ ಶಿಂಧೆಗೆ ನಾಮಪತ್ರ ನೀಡಿದ್ದಾರೆ. ನಾಳೆ ಕಾಂಗ್ರೆಸ್ ನಾಯಕರೊಂದಿಗೆ ಅಶೋಕ ಮನಗೂಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಹಾನಗಲ್ ಬಿಜೆಪಿ ಟಿಕೆಟ್ ಶಿವರಾಜ ಸಜ್ಜನರಿಗೆ ನೀಡಿದ್ದಕ್ಕೆ ಕಾರ್ಯಕರ್ತರ ಆಕ್ರೋಶ ಮಾಜಿ ಶಾಸಕ ಶಿವರಾಜ ಸಜ್ಜನರಗೆ ಬಿಜೆಪಿ ಟಿಕೆಟ್ ಘೋಷಣೆ ಆಗ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶಿವರಾಜ ಸಜ್ಜನರ ಹೆಸರು ಘೋಷಣೆ ಆಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಆಕ್ಷೇಪ ಕೇಳಿಬಂದಿದೆ. ಬ್ಯಾಡಾ‌ ಬ್ಯಾಡಾ ಸಜ್ಜನ ಬ್ಯಾಡಾ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಉದಾಸಿ ಕಲ್ಯಾಣ ಮಂಟಪದ‌ ಮುಂಭಾಗದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತರು ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇವತಿ ಉದಾಸಿ ಪರವಾಗಿ ಘೋಷಣೆ ಕೂಗಿ ಶಿವರಾಜ ಸಜ್ಜನ ವಿರುದ್ಧ ಘೋಷಣೆ ಕೂಗಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಜೋರಾಗಿದೆ. ಸಂಸದ ಶಿವಕುಮಾರ ಉದಾಸಿ ಅಭಿಮಾನಿ ಕುಮಾರೇಶ್ವರ ಮಠದ ಮುಂದೆ ಅರೆಬೆತ್ತಲಾಗಿ ದೀಡ್ ನಮಸ್ಕಾರ ಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕಚೇರಿ ಮುಂದೆಯೂ ಟೈರ್ ಸುಟ್ಟು ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾರ್ಯಕರ್ತರು, ದಿವಂಗತ ಸಿ.ಎಂ. ಉದಾಸಿ ಸಮಾಧಿ ಮುಂದೆ ಧರಣಿ ಮಾಡಿದ್ದಾರೆ. ಉದಾಸಿ ಸಮಾಧಿ ಮುಂದೆ ಉದಾಸಿ ಕುಟುಂಬದ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: Karnataka Byelection: ಹಾನಗಲ್ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಇದನ್ನೂ ಓದಿ: ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಹೆಸರು ಘೋಷಣೆ

Published On - 2:59 pm, Thu, 7 October 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ