AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ತಪ್ಪೇ ಮಾಡಿಲ್ಲ, ಡಿಕೆ ಶಿವಕುಮಾರ್ ನಾನು ಸ್ನೇಹಿತರು: ಕಾಂಗ್ರೆಸ್​ನಿಂದ ನೋಟಿಸ್ ನೀಡಿರುವ ಬಗ್ಗೆ ಅಶೋಕ್ ಪಟ್ಟಣ್ ಹೇಳಿಕೆ

ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಮಾಡುವ ಕೆಲಸ ಮಾಡಿಲ್ಲ. ನಾನು ಈ ಪಾರ್ಟಿಯಲ್ಲಿ 40 ವರ್ಷ ಇದ್ದೀನಿ. ನೋಟೀಸ್ ಕೊಡುವ ಮುನ್ನ ನನ್ನನ್ನು ಕೇಳಿ ಕೊಡಬಹುದಿತ್ತು. ಎರಡ್ಮೂರು ದಿನದಲ್ಲೇ ಉತ್ತರ ನೀಡ್ತೀನಿ. ನೋಟೀಸ್ ನನ್ನ ಕೈಗೆ ಬಂದ ತಕ್ಷಣ ಈ ಬಗ್ಗೆ ಉತ್ತರ ಕೊಡ್ತೀನಿ ಎಂದು ಹೇಳಿದ್ದಾರೆ.

ನಾನು ತಪ್ಪೇ ಮಾಡಿಲ್ಲ, ಡಿಕೆ ಶಿವಕುಮಾರ್ ನಾನು ಸ್ನೇಹಿತರು: ಕಾಂಗ್ರೆಸ್​ನಿಂದ ನೋಟಿಸ್ ನೀಡಿರುವ ಬಗ್ಗೆ ಅಶೋಕ್ ಪಟ್ಟಣ್ ಹೇಳಿಕೆ
Follow us
TV9 Web
| Updated By: ganapathi bhat

Updated on:Feb 01, 2022 | 5:20 PM

ಬೆಂಗಳೂರು: ನೋಟಿಸ್ ನೀಡಿದ ವಿಚಾರ ನನಗೆ ಮಾಧ್ಯಮಗಳ ಮೂಲಕವೇ ಗೊತ್ತಾಗಿದೆ. ನೊಟೀಸ್ ನೀಡಿದ್ದಾರೆ ಎನ್ನೋದು ಮಾಧ್ಯಮಗಳಿಂದ ಗೊತ್ತಾಯ್ತು. ನಾನು ತಪ್ಪೇ ಮಾಡಿಲ್ಲ. ಡಿ.ಕೆ. ಶಿವಕುಮಾರ್, ನಾನು ಸ್ನೇಹಿತರೇ. ಯುವ ಕಾಂಗ್ರೆಸ್ ಕಾಲದಿಂದಲೂ ನಾವು ಸ್ನೇಹಿತರೇ ಎಂದು ಮಾಜಿ ಶಾಸಕ ಅಶೋಕ್ ಪಟ್ಟಣ್ ಹೇಳಿಕೆ ನೀಡಿದ್ದಾರೆ. ನಾನು ಸಿದ್ದರಾಮಯ್ಯ ಬಳಿ ಅವತ್ತು ಪುಲಿಕೇಶಿ ನಗರದಿಂದ ಜನ ಬಂದಿರುವ ಬಗ್ಗೆ ಮಾತಾಡಿದ್ದಷ್ಟೇ. ಅದರ ಹೊರತಾಗಿ ನಾನು ಬೇರೆನೂ ಮಾತಾಡಿಲ್ಲ. ನಾನು ಎಲ್ಲದಕ್ಕೂ ಉತ್ತರ ಕೊಡ್ತೇನೆ. ನನಗೆ ನೋಟೀಸ್ ಇನ್ನೂ ಬಂದಿಲ್ಲ ಎಂದು ಹೇಳಿದ್ದಾರೆ.

ನಾನೇನು ಅಂತ ತಪ್ಪೇನು ಮಾಡಿಲ್ಲ. ಅಖಂಡ ಶ್ರೀನಿವಾಸ್ ಮೂರ್ತಿ ಹಾಗೂ ಅವರ ಹಿಂಬಾಲಕರು ಬಂದಿದ್ದರು. ಅವರು ಮಾತಾಡಿದ್ದನ್ನು ನಾನು ಹೇಳಿದೆ ಅಷ್ಟೆ. ಅದಕ್ಕೂ ನಾನಗೂ ಸಂಬಂಧ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಮಾಡುವ ಕೆಲಸ ಮಾಡಿಲ್ಲ. ನಾನು ಈ ಪಾರ್ಟಿಯಲ್ಲಿ 40 ವರ್ಷ ಇದ್ದೀನಿ. ನೋಟೀಸ್ ಕೊಡುವ ಮುನ್ನ ನನ್ನನ್ನು ಕೇಳಿ ಕೊಡಬಹುದಿತ್ತು. ಎರಡ್ಮೂರು ದಿನದಲ್ಲೇ ಉತ್ತರ ನೀಡ್ತೀನಿ. ನೋಟೀಸ್ ನನ್ನ ಕೈಗೆ ಬಂದ ತಕ್ಷಣ ಈ ಬಗ್ಗೆ ಉತ್ತರ ಕೊಡ್ತೀನಿ ಎಂದು ಹೇಳಿದ್ದಾರೆ.

ಮಾಧ್ಯಮಗಳೇ ಬೇಧ ಬಾವ ಮಾಡ್ತಾ ಇದಾವೆ. ಅವರಿಗೊಂದು ನನಗೊಂದು ಅಂತ ಏನಿಲ್ಲ. ನನಗಷ್ಟೆ ನೋಟೀಸ್ ಕೊಟ್ಟಿದಾರೆ ಅನ್ನೋದು ಏನಿಲ್ಲ. ಎಲ್ಲರೂ ನಮಗೆ ಒಂದೇ. ಅದರಲ್ಲಿ ಬೇದ ಭಾವ ಏನಿದೆ. ತಪ್ಪು ಗ್ರಹಿಕೆಯಿಂದ ನೋಟೀಸ್ ಕೊಟ್ಟಿರಬೇಕು ಅಷ್ಟೆ. ನಾನು ದೊಡ್ಡ ಲೀಡರ್ ಅಲ್ಲವೇ ಅಲ್ಲ. ನನ್ನದು ಬೆಳಗಾವಿ ಜಿಲ್ಲೆ ರಾಮದುರ್ಗಾ ತಾಲೂಕಿಗೆ ಮಾತ್ರ ಸೀಮಿತ ಅಷ್ಟೇ. ನಾನು ಬೆಳಗಾವಿಯ ದೊಡ್ಡ ಲೀಡರ್ರೂ ಅಲ್ಲ ಎಂದು ಹೇಳಿಕೊಂಡಿದ್ದಾರೆ.

ಅಶೋಕ್ ಪಟ್ಟಣಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ಜಾರಿ

ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ದ ಮಾತನಾಡಿರುವ ವಿಡಿಯೋ ವಿಚಾರಕ್ಕೆ ಸಂಬಂಧಿಸಿ ಅಶೋಕ್ ಪಟ್ಟಣಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ನೀಡಲಾಗಿತ್ತು. ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದ ಅಕ್ಷೇಪಾರ್ಹ ಮಾತುಗಳಾಡಿದ್ದೀರಿ. ಅಧ್ಯಕ್ಷರ ಘನತೆಗೆ ಕುಂದುಂಟು ಮಾಡಿದ್ದೀರಿ. ಕಾಂಗ್ರೆಸ್ ಪಕ್ಷಕ್ಕೆ ಮಾತಿನಿಂದ ಹಾನಿಯಾಗಿದೆ ಎಂದು ಕಾಂಗ್ರೆಸ್ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿತ್ತು.

ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಂದ ನೋಟಿಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ 7 ದಿನಗಳ ಒಳಗೆ ಉತ್ತರ ನೀಡುವಂತೆ ಸೂಚನೆ ಕೊಡಲಾಗಿತ್ತು. ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದರು. ಸುದ್ದಿಗೋಷ್ಠಿ ವೇಳೆ ಪುಲಿಕೇಶಿನಗರ ಘಟನೆ ಬಗ್ಗೆ ಚರ್ಚೆ ಮಾಡಲಾಗಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್ ವಿರುದ್ಧ ಅಶೋಕ್ ಮಾತನಾಡಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ಮಾತನಾಡಿರುವ ವಿಡಿಯೋ ವಿಚಾರ; ಅಶೋಕ್ ಪಟ್ಟಣಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ಜಾರಿ

ಇದನ್ನೂ ಓದಿ: ಕರ್ನಾಟಕಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ; ಕೇಂದ್ರ ಬಜೆಟ್​ಗೆ ಡಿಕೆ ಶಿವಕುಮಾರ್ ಲೇವಡಿ

Published On - 5:16 pm, Tue, 1 February 22

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್