ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ

ಕಾಂಗ್ರೆಸ್​ ನಾಯಕರೊಬ್ಬರು ಮುಂದಿನ ವಿಧಾನಸಭೆ ಚುನಾಚವಣೆ ಟಿಕೇಟ್​ಗಾಗಿ ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಬ್ಯಾಂಡು, ಜಾನಪದ ಕಲಾ ತಂಡ. ತಮಟೆ ವಾದ್ಯಗಳೊಂದಿಗೆ ಬಂದು ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ ಕೈ ನಾಯಕ
ಟಿಕೇಟ್​ಗಾಗಿ ಶಕ್ತಿ ಪ್ರದರ್ಶನ ಮಾಡಿದ ಕೈ ನಾಯಕ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 20, 2022 | 3:04 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ  (Karnataka Assembly Election 2023) ಇನ್ನೂ ಐದಾರು ತಿಂಗಳು ಇರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಟಿಕೇಟ್​​ ಫೈಟ್ (Congress Ticket Fight)  ಜೋರಾಗಿದೆ. ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನಾಳೆ(ನ.21) ಕೊನೆ ದಿನವಾಗಿದ್ದರಿಂದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮುಗಿಬಿದ್ದಿದ್ದಾರೆ. ಇನ್ನು ಇಲ್ಲೋರ್ವ ಟಿಕೇಟ್ ಆಕಾಂಕ್ಷಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಅರ್ಜಿ ಸಲ್ಲಿಸಿ ಗಮನಸೆಳೆದಿದ್ದಾರೆ.

ಮೂರು ಸರ್ವೆಗಳಲ್ಲಿ ಕಾಂಗ್ರೆಸ್ ಮುಂದೆ: ಬಿಜೆಪಿಗೆ ಎಷ್ಟು ಸ್ಥಾನ? ಮಾಹಿತಿ ಬಿಚ್ಚಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ

ಹೌದು….ಧನಂಜಯ್. ಜಿ ಅವರು ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಬಂದು ದಾಸರಹಳ್ಳಿ ಕ್ಷೇತ್ರದ ಟಿಕೇಟ್​ಗಾಗಿ ಇಂದು(ನ.20) ಅರ್ಜಿ ಸಲ್ಲಿಸಿದರು. ಬ್ಯಾಂಡು, ಜಾನಪದ ಕಲಾ ತಂಡಗಳು, ತಮಟೆ ವಾದ್ಯಗಳೊಂದಿಗೆ ಬಂದು ಅರ್ಜಿ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಕೆಪಿಸಿಸಿಗೆ ಬಂದು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿರುವ ರೀತಿ ಕಂಡು ಕಾಂಗ್ರೆಸ್ ನಾಯಕರು ದಂಗಾದರು.

ಅಲ್ಲದೇ ಸುಮಾರು 300 ಬಸ್ ಗಳಲ್ಲಿ ಬೆಂಬಲಿಗರನ್ನು ಕೆಪಿಸಿಸಿ ಕಚೇರಿಗೆ ಕರೆತಂದಿರುವುದರಿಂದ ಕೆಪಿಸಿಸಿ ಕಂಟೋನ್ಮೆಂಟ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಧನಂಜಯ್ ಬೆಂಬಲಿಗರನ್ನು ಕಂಟ್ರೋಲ್​ ಜೊತೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸುಸ್ತಾದರು.

ದಾಸರಹಳ್ಳಿಯಿಂದ ಟಿಕೇಟ್ ಭರವಸೆ ಸಿಕ್ಕಿರುವ ಹಿನ್ನೆಲೆಯಲ್ಲಿ ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಗನ್‌ ಮ್ಯಾನ್‌ ಆಗಿದ್ದ ಮಂಜುನಾಥ್‌ 2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಈ ಹಿಂದೆ 2 ಬಾರಿ ಬಿಜೆಪಿಯಿಂದ ಗೆದ್ದಿದ್ದ ಮುನಿರಾಜು ಅವರ ಹ್ಯಾಟ್ರಿಕ್ ಗೆಲುವಿನ ಕನಸನ್ನು ಭಗ್ನಗೊಳಿಸಿದ್ದರು. ಈ ಬಾರಿ ಮಂಜುನಾಥ್ ವಿರುದ್ಧ ಕಾಂಗ್ರೆಸ್​ನಿಂದ ಕಣಕ್ಕಳಿಯಲು ಧನಂಜಯ್ ಅವರು ಭರ್ಜರಿ ಶಕ್ತಿ ಪ್ರದರ್ಶನದೊಂದಿಗೆ ಟಿಕೇಟ್​ಗಾಗಿ ಅರ್ಜಿ ಸಲ್ಲಿಸಿದ್ದು, ಹೈಕಮಾಂಡ್​ ಮಣೆ ಹಾಕುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು