ತವರು ಕ್ಷೇತ್ರದಲ್ಲೇ AICC ಅಧ್ಯಕ್ಷರಿಗೆ ಶಾಖ್: ಮಲ್ಲಿಕಾರ್ಜುನ್ ಖರ್ಗೆ ಆಪ್ತ ಬಿಜೆಪಿ ಸೇರ್ಪಡೆ
ಲೋಕಸಭಾ ಚುನಾವಣೆಗೆ 3-4 ತಿಂಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಯಾರಿ ಜೋರಾಗಿಯೇ ನಡೆಸಿವೆ. ಬಿಜೆಪಿಯನ್ನು ಈ ಬಾರಿ ಸೋಲಿಸಲು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸಂಚು ರೂಪಿಸುತ್ತಿವೆ. ಆದರೆ ಈ ಮಧ್ಯೆ ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರ ಅತ್ಯಾಪ್ತ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು, ಜನವರಿ 24: ಲೋಕಸಭೆ ಚುನಾವಣೆಗೆ (Lok Sabha Election) ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು (BJP) ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಆಯ್ಕೆ ಮಾಡಲಾಗಿದೆ. ಆದರೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ತವರು ಕ್ಷೇತ್ರದಲ್ಲೇ ಬಿಗ್ ಶಾಕ್ ನೀಡಲಾಗಿದೆ. ಅದು ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ (Congress) ತೊರದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಹೌದು ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು ಕೇಸರಿ ಮನೆಯನ್ನು ಪ್ರವೇಶಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಂಸದ ಎಸ್. ಮುನಿಸ್ವಾಮಿ, ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಇದನ್ನೂ ಓದಿ: Lok Sabha Election: ಕೇಂದ್ರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು 40 ಸಾವಿರ ಕಾರ್ಯಕರ್ತರನ್ನು ನಿಯೋಜಿಸಲಿದೆ ಬಿಜೆಪಿ
ಯಾರು ಈ ರುದ್ರಯ್ಯ
ದಲಿತ ಸಮುದಾಯದ ನಾಯಕರಾಗಿರುವ ರುದ್ರಯ್ಯ ಅವರು ನೀರಾವರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಲಿಂಗಸೂಗೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರಣ ಪಕ್ಷೇತರರಾಗಿ ಸ್ಫರ್ದಿಸಿದ್ದರು. ಇನ್ನು ತಮಗೆ ಟಿಕೆಟ್ ತಪ್ಪಲು ಮಲ್ಲಿಕಾರ್ಜುನ್ ಖರ್ಗೆ ಅವರೇ ಕಾರಣ ಎಂದು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ ಮಾತುಗಳು ಕೇಳಿಬಂದಿದ್ದವು. ಆದರೆ ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುವುದು ಖಚಿತಪಡಿಸಿರಲಿಲ್ಲ. ಇದೀಗ ಕಮಲಪಾಳಯ ಸೇರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:00 pm, Wed, 24 January 24