Priyank Kharge: ಕಾನೂನು ಸುವ್ಯವಸ್ಥೆಗೆ ಭಂಗ, ತೆರಿಗೆ ಸಂಗ್ರಹಕ್ಕೆ ಹೊಡೆತ; ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಯಾರು ಅಸಲಿ ದೇಶಭಕ್ತರು? ಯಾರು ನಕಲಿ ಎನ್ನುವುದನ್ನು ನಂತರ ನಿರ್ಧರಿಸೋಣ. ಆದರೆ ಅದಕ್ಕೆ ಮೊದಲು ಜನರ ಕಷ್ಟಕ್ಕೆ ಸ್ಪಂದಿಸಿ ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

Priyank Kharge: ಕಾನೂನು ಸುವ್ಯವಸ್ಥೆಗೆ ಭಂಗ, ತೆರಿಗೆ ಸಂಗ್ರಹಕ್ಕೆ ಹೊಡೆತ; ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 24, 2022 | 1:56 PM

ಬೆಂಗಳೂರು: ಜನರ ಕಣ್ಣೀರು ಒರೆಸುವುದು ಬಿಟ್ಟು ರಾಜ್ಯ ಸರ್ಕಾರವು ಭಾವನಾತ್ಮಕ ವಿಷಯಗಳಿಗೆ ಒತ್ತು ಕೊಡುತ್ತಿದೆ. ಇವರ ಚರ್ಚೆಗೆ ನಾವು ಖಂಡಿತ ಸಿದ್ಧರಿದ್ದೇವೆ ಎಂದು ಕಾಂಗ್ರೆಸ್​ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದರು. ಯಾರು ಅಸಲಿ ದೇಶಭಕ್ತರು? ಯಾರು ನಕಲಿ ಎನ್ನುವುದನ್ನು ನಂತರ ನಿರ್ಧರಿಸೋಣ. ಆದರೆ ಅದಕ್ಕೆ ಮೊದಲು ಜನರ ಕಷ್ಟಕ್ಕೆ ಸ್ಪಂದಿಸಿ. ಆಡಳಿತ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕೆಪಿಎಸ್​ಸಿ ಪರೀಕ್ಷೆ ಬರೆದಿರುವವರು ಹೈರಾಣಾಗಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಅಪಾಯ ಬಂದಿರುವುದರಿಂದ ವ್ಯಾಪಾರ ವ್ಯಹಾರಗಳು ಕುಸಿಯುತ್ತಿವೆ. ಇದು ಜನರ ದೈನಂದಿನ ಬದುಕಿಗೆ ಧಕ್ಕೆ ತರುತ್ತದೆ. ಅಷ್ಟೇ ಅಲ್ಲ, ರಾಜ್ಯದ ತೆರಿಗೆ ಆದಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ನಡೆಯುತ್ತಿಲ್ಲ, ಸಿಎಂ ಬದಲಾಗುತ್ತಾರೆ ಎಂದು ಅವರ ಪಕ್ಷದವರೇ ಹೇಳುತ್ತಿದ್ದಾರೆ. ತಮ್ಮ ಸಮಸ್ಯೆ, ಗೊಂದಲಗಳನ್ನು ಪರಿಹರಿಸಿಕೊಳ್ಳಲು ವಿಫಲರಾದ ಬಿಜೆಪಿ ನಾಯಕರು ಜನರ ಗಮನ ಬೇರೆಡೆಗೆ ಸೆಳೆಯಲು ಭಾವನಾತ್ಮಕ ಅಂಶಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ಇದು ರಾಜ್ಯದ ಹಿತಕ್ಕೆ ಒಳಿತಲ್ಲ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ಜನೋತ್ಸವ ಮಾಡಲು ಈ ಹಿಂದೆಯೂ ಎರಡು ಮೂರು ಪ್ರಯತ್ನಿಸಿತ್ತು. ಜನರ ಆಕ್ರೋಶ ತೀವ್ರವಾಗಿದ್ದರಿಂದ ಅದನ್ನು ಮುಂದೂಡಲಾಯಿತು. ತಮ್ಮ ಸಾಧನೆ ಶೂನ್ಯ ಎಂದು ಅಂದುಕೊಂಡಿದ್ದರಿಂದ ಜನೋತ್ಸವ ಬಿಟ್ಟು ಸಾರ್ವಕರ್ ಉತ್ಸವ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು. ಸಚಿವರಿಗೆ ನಿಮ್ಮ ಜಿಲ್ಲೆಗಳಿಗೆ ಹೋಗಿ ಎಂದು ಮುಖ್ಯಮಂತ್ರಿ ಕಣ್ಣೀರು ಹಾಕುತ್ತಾ ಹೇಳಿದರೂ ಯಾವೊಬ್ಬ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಸಚಿವರು ಹೊಗದ ಕಾರಣ ಪಾಪ ಸಿಎಂ ಅವರೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹದ ವರದಿಯನ್ನು ಮಂತ್ರಿಗಳಿಗೆ ನೀಡುವ ಪರಿಸ್ಥಿತಿ ‌ನಿರ್ಮಾಣವಾಯಿತು. ಇದು ಇದು ನಮ್ಮ ಬಿಜೆಪಿ ಸರ್ಕಾರದ ಸಾಧನೆ ಎಂದು ವ್ಯಂಗ್ಯವಾಡಿದರು.

ಸಚಿವ ಮುನಿರತ್ನ ವಿರುದ್ಧ ಕೆಂಪಣ್ಣ ಮಾಡಿರುವ ಭ್ರಷ್ಟಾಚಾರದ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಕೆಂಪಣ್ಣನವರೇ ನೇರವಾಗಿ ಮಾಧ್ಯಮಗಳ ಎದುರು ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಸಿಎಂಗೆ. ವಿಶೇಷ ತನಿಖಾ ತಂಡವನ್ನ ಯಾಕೆ ರಚಿಸಿಲ್ಲ? ನ್ಯಾಯಾಂಗ ತನಿಖೆಯನ್ನು ಏಕೆ ಮಾಡಿಸಲಿಲ್ಲ? ನಾವು ಕ್ಲೀನ್ ಇದ್ದೇವೆ ಎಂದು ಹೇಳುವವರು ಈಗೇಕೆ ಸುಮ್ಮನಿದ್ದಾರೆ ಎಂದು ಸರ್ಕಾರದ ವಿರುದ್ಧ ಪ್ರಿಯಾಂಕ್ ಆಕ್ರೋಶ ವ್ಯಕ್ತಪಡಿಸಿದರು.

‘ಪ್ರತ್ಯೇಕ ದೇಶ ಕೇಳಿದ್ದು ಸಾವರ್ಕರ್’

ಬಿಜೆಪಿಯವರದ್ದು ವಾಟ್ಸಾಪ್ ಯೂನಿರ್ಸಿಟಿ. ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ. 1909ರಲ್ಲಿ ಸಾರ್ವಕರ್ ವಿದ್ಯಾಭ್ಯಾಸಕ್ಕಾಗಿ ಲಾ ಓದಲು ಲಂಡನ್​ಗೆ ಹೋಗುವ ಮೊದಲು ಅಭಿನವ ಭಾರತ ಸಂಸ್ಥೆ ಸ್ಥಾಪಿಸಿದ್ದರು ಎಂದು ನೆನಪಿಸಿಕೊಂಡರು. ನಾಸಿಕ್​ ಕಲೆಕ್ಟರ್ ಜಾಕ್ಸನ್ ಕೊಲೆ ಪ್ರಕರಣದಲ್ಲಿ ಈ ಅಭಿನವ ಸಂಸ್ಥೆಯ ಅಧ್ಯಕ್ಷರಾದ ಸಾರ್ವಕರ್ ಅವರನ್ನು ಬ್ರಿಟನ್​ನಲ್ಲಿಯೇ ಸ್ಪಂದಿಸಲಾಗಿತ್ತು. ಭಾರತಕ್ಕೆ ಕರೆತಂದ ನಂತರ ಸಾರ್ವಕರ್ ಪರ ಬ್ಯಾಪಿಸ್ಟ್ ವಾದ ಮಾಡಿದ್ದರು. ಅಂಡಮಾನ್​ನ ಕಾಲಪಾನಿಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸಾವರ್ಕರ್ ಇತರ ರಾಜಕೀಯ ಖೈದಿಗಳಂತೆ ಎಣ್ಣೆ ತೆಗೆಯಲಿಲ್ಲ. ಬ್ರಿಟಿಷರ ಜೊತೆಗೆ ಚೆನ್ನಾಗಿದ್ದ ಕಾರಣ ಅವರಿಗೆ ಕ್ಲರಿಕಲ್ ಕೆಲಸ ಕೊಡಲಾಗಿತ್ತು ಎಂದು ವಿವರಿಸಿದರು.

ಅಂಡಮಾನ್​ಗೆ ಹೋದ ಎರಡೇ ತಿಂಗಳಲ್ಲಿ ಸಾವರ್ಕರ್ ಕ್ಷಮಾಪಣೆ ಪತ್ರ ಬರೆದರು. ಸಾರ್ವಕರ್ ಸಹೋದರ ಕೂಡ ಪತ್ರ ಬರೆದು, ನಾವು ನಿಮ್ಮ ಸರ್ಕಾರದಲ್ಲಿ ಕೆಲಸ ಮಾಡ್ತೇವೆ. ದಾರಿ ತಪ್ಪಿದ ಮಗ ಇನ್ನೆಲ್ಲಿಗೆ ಹೋಗ್ತಾನೆ. ಮತ್ತೆ ಮನೆಗೆ ಬಂದಿದ್ದೇನೆ ಕ್ಷಮಾಪಣೆ ಕೊಡಿ ಎಂದು ಕೋರಿದ್ದರು. ಮುಸ್ಲಿಮರು ಮತ್ತು ಹಿಂದುಗಳಿಗೆ ಪ್ರತ್ಯೇಕ ದೇಶ ಬೇಕು ಎಂದವರು ಸಾವರ್ಕರ್ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ