AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ

ಮಧ್ಯಪ್ರದೇಶದ ಇಂದೋರ್​ನಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ಣಗೊಳಿಸಿದ ರಾಹುಲ್ ಗಾಂಧಿ ಇಂದು ಉಜ್ಜಯಿನಿಯಲ್ಲಿ ಯಾತ್ರೆ ಆರಂಭಿಸಿದ್ದಾರೆ.

Bharat Jodo Yatra: ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ
ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ
TV9 Web
| Edited By: |

Updated on:Nov 29, 2022 | 7:37 AM

Share

ಭೋಪಾಲ್: ಮಹಾರಾಷ್ಟ್ರದ ಯಾತ್ರೆಯನ್ನು ಮುಕ್ತಾಯಗೊಳಿಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಬುಧವಾರ ಮಧ್ಯಪ್ರದೇಶ (Madhya Pradesh) ಪ್ರವೇಶಿಸಿದೆ. ಆರು ದಿನಗಳ ಯಾತ್ರೆ ನಡೆಸಿದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಸೋಮವಾರ ಇಂದೋರ್‌ನಿಂದ ಉಜ್ಜಯಿನಿಗೆ ತಲುಪಿದೆ. ಭಾನುವಾರ ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಬಾಲಕನೊಬ್ಬ ರಾಹುಲ್ ಗಾಂಧಿಗೆ ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಯಾತ್ರೆಗೆ ಬಳಸುವಂತೆ ಅರ್ಪಿಸಿದ್ದಾನೆ. ಧನ್ಯವಾದ ಪತ್ರದಲ್ಲಿ ವಯನಾಡ್ ಸಂಸದರೂ ಆಗಿರುವ ರಾಹುಲ್ ಗಾಂಧಿ, ತ್ಯಾಗ ಮತ್ತು ನಿಸ್ವಾರ್ಥತೆಯು ಬಾಲ್ಯದಲ್ಲಿ ರೂಢಿಸಿಕೊಂಡ ಮೌಲ್ಯಗಳಾಗಿವೆ ಎಂದು ಬಾಲಕನನ್ನು ಬಣ್ಣಿಸಿದ್ದರು.

ಅಲ್ಲದೆ, ರಾಹುಲ್ ಗಾಂಧಿ ನೇತೃತ್ವದ ಇದೇ ಪಾದಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಲಾಯಿತು ಎಂದು ಬಿಜೆಪಿ ಆರೋಪಿಸಿತ್ತು. ಘಟನೆಯನ್ನು ಗಮನಿಸಿದ ಪೊಲೀಸರು ಮಧ್ಯಪ್ರದೇಶ ಕಾಂಗ್ರೆಸ್ ಐಟಿ ವಿಭಾಗದ ಮುಖ್ಯಸ್ಥ ಅಭಯ್ ತಿವಾರಿ ಮತ್ತು ಪತ್ರಕರ್ತ ಪಿಯೂಷ್ ಬಾಬೆಲೆ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಕಾಂಗ್ರೆಸ್​ನಿಂದ ಪ್ರತಿದೂರು ಕೂಡ ದಾಖಲಿಸಲಾಗಿದೆ.

ಇದನ್ನೂ ಓದಿ: ಮೈನ್‌ಪುರಿ ಲೋಕಸಭಾ ಉಪಚುನಾವಣೆ: ಮುಲಾಯಂ ಸಿಂಗ್​​ ಹೆಸರಲ್ಲಿ ಅಖಿಲೇಶ್​​ ಮತ ಯಾಚನೆ

6ನೇ ದಿನದ ಪಾದಯಾತ್ರೆಯು ಇಂದೋರ್‌ನ ಬಡಾ ಗಣಪತಿ ಚೌಕದಿಂದ ಬೆಳಿಗ್ಗೆ ಪ್ರಾರಂಭವಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಗ್ರ್ಯಾಂಡ್ ಓಲ್ಡ್ ಪಾರ್ಟಿ ಘೋಷಿಸಿದ ವೇಳಾಪಟ್ಟಿಯಂತೆ ಡಿಸೆಂಬರ್ 4 ರಂದು ರಾಜಸ್ಥಾನಕ್ಕೆ ಪ್ರವೇಶಿಸುವ ಮೊದಲು 12 ದಿನಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಮಾಲ್ವಾ ನಿಮಾರ್ ಪ್ರದೇಶದಲ್ಲಿ 380 ಕಿ.ಮೀ ದೂರವನ್ನು ಈ ಯಾತ್ರೆ ಕ್ರಮಿಸಲಿದೆ.

ಕಾಂಗ್ರೆಸ್‌ನ ಸಾಮೂಹಿಕ ಉಪಕ್ರಮದ ಯಾತ್ರೆಯು ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಬೋದರ್ಲಿ ಗ್ರಾಮಕ್ಕೆ ನವೆಂಬರ್ 23 ರಂದು ಪ್ರವೇಶಿಸಿತು. ಕಳೆದ ಆರು ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ತನ್ನ ಅರ್ಧದಷ್ಟು ಪ್ರಯಾಣವನ್ನು ಪೂರ್ಣಗೊಳಿಸಿದೆ. ಈವರೆಗೆ ರಾಹುಲ್ ಗಾಂಧಿಯವರು ಬುರ್ಹಾನ್‌ಪುರ, ಖಾಂಡ್ವಾ, ಖಾರ್ಗೋನ್ ಮತ್ತು ಇಂದೋರ್ ಜಿಲ್ಲೆಗಳಲ್ಲಿ ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 am, Tue, 29 November 22

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ