ಅಮಿತ್ ಶಾ ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಬೇಕು: ರಣದೀಪ್ ಸಿಂಗ್ ಸುರ್ಜೆವಾಲಾ ಸವಾಲು
ಕರ್ನಾಟಕ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ನಿನ್ನೆ (ಡಿಸೆಂಬರ್ 29) ಕರ್ನಾಟಕಕ್ಕೆ ಬಂದಿದ್ದು, ಎರಡು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇನ್ನೊಂದೆಡೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅಮಿತ್ ಶಾಗೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೃಷ್ಣಾ ಮೇಲ್ದಂಡೆ ಯೋಜನೆ(krishna upper project) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ 3 ಪ್ರಶ್ನೆ ಕೇಳಿದ್ದಾರೆ.
2/2 Sh. Amit Shah must answer today?
1. Why no National Project status for Krishna?
2. Why did u not even start, much less complete Krishna Project promised in last assembly election?
3. Why did u not allocate a single penny of the ₹1.50 Lakh CR promised for Krishna Project? https://t.co/ccvq9qrJXZ
— Randeep Singh Surjewala (@rssurjewala) December 30, 2022
ಉತ್ತರ ಕರ್ನಾಟಕ ಭಾಗದ ನೀರಾವರಿಗಾಗಿ 6 ಲಕ್ಷ ಹೆಕ್ಟೇರ್‌ಗಳಿಗೆ 130 ಟಿಎಂಸಿ ಕೃಷ್ಣಾ ನದಿ ನೀರು ಹರಿಸಲು ಬಿಜಾಪುರದ ಇಂದಿನ “ಕೃಷ್ಣಾ ಜನಾಂದೋಲನ” ಸಮಾವೇಶದಲ್ಲಿ ನಿರ್ಣಯ ಕೈಗೊಂಡು ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿಯ ನವ ಶಕೆಯನ್ನು ಆರಂಭಿಸಲಿದ್ದೇವೆ. ಬಿಜೆಪಿ ದ್ರೋಹ ಮಾಡುವ ಕೆಲಸ ಮಾಡಿದರೆ, ಕಾಂಗ್ರೆಸ್ ನಾಡನ್ನು ಕಟ್ಟುವ ಕೆಲಸ ಮಾಡುತ್ತದೆ. ಅಮಿತ್ ಶಾ ಅವರು ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಬೇಕು ಎಂದು ಟ್ವೀಟ್ ಮಾಡಿದ್ದಾರೆ.
A new era dawns today in “Krishna Jana Andolan” at Bijapur for the 130 TMC of Krishna Waters to flow for 6 lakh hectares for irrigation in North Karnataka.
BJP betrayed, Congress will build. 1/2 pic.twitter.com/P95NG9FPH7
— Randeep Singh Surjewala (@rssurjewala) December 30, 2022
1. ಕೃಷ್ಣಾಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ಏಕೆ ನೀಡಲಿಲ್ಲ?
2. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ನೀವು ಏಕೆ ಪ್ರಾರಂಭಿಸಲಿಲ್ಲ?
3. ಕೃಷ್ಣಾ ಮೇಲ್ದಂಡೆ ಯೋಜನೆಗೆ ಭರವಸೆ ನೀಡಿದ ₹ 1.50 ಲಕ್ಷ ಕೋಟಿಯಲ್ಲಿ ಒಂದೇ ಒಂದು ನಯಾ ಪೈಸೆಯನ್ನು ಸಹ ಏಕೆ ವಿನಿಯೋಗಿಸಲಿಲ್ಲ?
ಈ ಮೂರು ಪ್ರಶ್ನೆಗಳಿಗೆ ಉತ್ತರಿಸುವಂತೆ ಅಮಿತ್ ಶಾಗೆ ರಣದೀಪ್ ಸಿಂಗ್ ಸುರ್ಜೆವಾಲಾ ಸವಾಲು ಹಾಕಿದ್ದಾರೆ.
ಇನ್ನೊಂದು ಕಡೆ ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ಪೂರ್ಣಗೊಳಿಸುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಬೃಹತ್ ಸಮಾವೇಶ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಎಸ್.ಆರ್ ಪಾಟೀಲ್, ಎಚ್.ಕೆ ಪಾಟೀಲ್ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 5:18 pm, Fri, 30 December 22