ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಸಲೀಂ ಉಚ್ಚಾಟನೆ; ಶಿಸ್ತು ಸಮಿತಿಯಿಂದ ಕ್ರಮ
Karnataka Congress: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಮಾತಾಡಿದ್ದ ಸಲೀಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಜೊತೆ ಮಾತಾಡಿದ್ದ ಸಲೀಂ ವಿರುದ್ಧ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿಯಿಂದ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾತನಾಡಿದ್ದ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಮಾತಾಡಿದ್ದ ಸಲೀಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಜೊತೆ ಮಾತಾಡಿದ್ದ ಸಲೀಂ ವಿರುದ್ಧ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಶಿಸ್ತು ಸಮಿತಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ವಿ.ಎಸ್. ಉಗ್ರಪ್ಪಗೆ ನೋಟಿಸ್ ನೀಡಲಾಗಿದೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿ ಆಗಿದೆ. ವಿ.ಎಸ್. ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಡಿ.ಕೆ. ಶಿವಕುಮಾರ್ ಬಗ್ಗೆ ಉಗ್ರಪ್ಪ, ಸಲೀಂ ಮಾತುಕತೆ ವಿಚಾರವಾಗಿ ದೆಹಲಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಉಗ್ರಪ್ಪ, ಸಲೀಂ ಮಾತುಕತೆ ಬಗ್ಗೆ ವಿವರವಾದ ಮಾಹಿತಿ ಇಲ್ಲ. ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ. ಮಾಧ್ಯಮ ವಿಭಾಗದಿಂದ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದಷ್ಟೇ ತಿಳಿಸಿದ್ದಾರೆ.
ಇದನ್ನೂ ಓದಿ: ಭ್ರಷ್ಟ ಡಿಕೆಶಿ ಎಂಬ ಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ನಾಯಕರೇ ಮುಹೂರ್ತ ಮಾಡಿದ್ದಾರೆ: ಬಿಜೆಪಿ ಟ್ವೀಟ್
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ರಾಜಕೀಯದಿಂದ ಹಣ ಸಂಪಾದನೆ ಮಾಡಿಲ್ಲ: ವಿ.ಎಸ್.ಉಗ್ರಪ್ಪ ಸ್ಪಷ್ಟನೆ
Published On - 3:41 pm, Wed, 13 October 21