AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಸೇನೆ, ಆರ್​ಎಸ್​ಎಸ್ ಮೇಲೆ ಬುಲ್ಡೋಜರ್ ನುಗ್ಗಿಸುವ ವಿಚಾರ; ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ

ಕೊಲೆ ವಿಚಾರದಲ್ಲಿ ಜಾತಿ, ಧರ್ಮವನ್ನು ಲೆಕ್ಕಿಸದೇ, ಪೊಲೀಸರು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಶ್ರೀರಾಮಸೇನೆ, ಆರ್​ಎಸ್​ಎಸ್ ಮೇಲೆ ಬುಲ್ಡೋಜರ್ ನುಗ್ಗಿಸುವ ವಿಚಾರ; ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on:Jul 27, 2022 | 2:46 PM

Share

ಬೆಂಗಳೂರು: ಶ್ರೀರಾಮಸೇನೆ, ಬಜರಂಗದಳ, ಆರ್​ಎಸ್​ಎಸ್ (RSS) ಮೇಲೆ ಬುಲ್ಡೋಜರ್ (Bulldozer) ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್​ಬುಕ್​ ಪೋಸ್ಟ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆ ಮೇಲೆ ಬುಲ್​ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು. ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು ಎಂದಷ್ಟೇ ನಾನು ಹೇಳಿದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Karnataka Congress Press Meet: ರಾಜ್ಯ ಸರ್ಕಾರದ್ದು ಒಂದು ವರ್ಷ ಸಾಧನಾ ಜನೋತ್ಸವವಲ್ಲ, ಬಿಜೆಪಿಯ ಭ್ರಷ್ಟೋತ್ಸವ -ಡಿಕೆ ಶಿವಕುಮಾರ್ ಕಟು ಟೀಕೆ

ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜ ವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡನೀಯ: 

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಬಜರಂಗದಳದ ನಾಯಕ ಪ್ರವೀಣ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಜಾತಿ, ಧರ್ಮವನ್ನು ಲೆಕ್ಕಿಸದೇ, ಪೊಲೀಸರು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

Published On - 2:45 pm, Wed, 27 July 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ