AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿಯಿಂದ ಕರ್ನಾಟಕಕ್ಕೆ 20 ಸಾವಿರ ಕೋಟಿ ನಷ್ಟ, ಪರಿಹಾರ ಮುಂದುವರಿಸಲು ಸಿದ್ದರಾಮಯ್ಯ ಆಗ್ರಹ

ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಯಲ್ಲಿ 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸರ್ವೆ ಮಾಹಿತಿಯನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.

ಜಿಎಸ್​ಟಿಯಿಂದ ಕರ್ನಾಟಕಕ್ಕೆ 20 ಸಾವಿರ ಕೋಟಿ ನಷ್ಟ, ಪರಿಹಾರ ಮುಂದುವರಿಸಲು ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ
TV9 Web
| Edited By: |

Updated on:Jun 30, 2022 | 12:57 PM

Share

ದೆಹಲಿ: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (Karnataka Vidhanasabha Election) ನಾವು 150 ಸ್ಥಾನಗಳಲ್ಲಿ ಜಯಗಳಿಸಬೇಕು ಎಂದುಕೊಂಡಿದ್ದೇವೆ. ನಮ್ಮ ಪಕ್ಷವು 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸರ್ವೆ ತಿಳಿಸಿದೆ. ಜನರ ಅಭಿಪ್ರಾಯವೂ ನಮ್ಮ ಪರವಾಗಿಯೇ ಇದೆ. ನಾವು ಗೆಲ್ಲುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಇದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramiah Pressmeet) ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಸಿದ್ದರಾಮೋತ್ಸವ ಕುರಿತು ಪ್ರತಿಕ್ರಿಯಿಸಿದ ಅವರು, ಆಗಸ್ಟ್ 12ಕ್ಕೆ ನನಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಈ ಸಮಾರಂಭ ಮಾಡುತ್ತಿದ್ದಾರೆ. ನಾನು ಸಾಮಾಜಿಕ ನ್ಯಾಯದ ಪರ ಇರುವವನು. ಅಹಿಂದದಲ್ಲಿ ಬಲವಾದ ನಂಬಿಕೆ ಇಟ್ಟವನು. ಧ್ವನಿ ಇಲ್ಲದವರ ಪರವಾಗಿ, ಆರ್ಥಿಕ ಮತ್ತು ಸಾಮಾಜಿಕ ಸಮಾನತೆಯ ಪರವಾಗಿ ಇದ್ದೇನೆ. ನನಗೆ ಬಿಜೆಪಿಯವರ ಸರ್ಟಿಫಿಕೆಟ್​ ಬೇಕಿಲ್ಲ. ನನ್ನ ನಂಬಿಕೆಗಳನ್ನೇ ನಾನು ಮುಂದುವರಿಸಿಕೊಂಡು ಹೋಗುತ್ತೇನೆ. ಕಾಂಗ್ರೆಸ್​ನ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸಹ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ ಎಂದು ವಿವರಿಸಿದರು.

ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ನಡೆಯುವುದು ಸಹಜ ಪ್ರಕ್ರಿಯೆ. ಅಲ್ಲಿ ಟಿಕೆಟ್ ಸಿಗದಿದ್ದರೆ ಇಲ್ಲಿಗೆ, ಇಲ್ಲಿ ಟಿಕೆಟ್ ಸಿಗದಿದ್ದರೆ ಅಲ್ಲಿಗೆ ಹಾರುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸ್ವಾಗತಿಸುತ್ತೇವೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ. ಹಾಗೆಂದು ಪಕ್ಷಕ್ಕೆ ಬಂದ ಎಲ್ಲರಿಗೂ ಟಿಕೆಟ್​ ಕೊಡುತ್ತೇವೆಂದು ಭರವಸೆ ಕೊಡಲು ಆಗುವುದಿಲ್ಲ. ಯಾರೆಲ್ಲ ಸಂಪರ್ಕದಲ್ಲಿದ್ದಾರೆ ಎಂದು ಹೇಳಲೂ ಆಗುವುದಿಲ್ಲ. ಟಿಕೆಟ್​ ನೀಡುವುದು ಕಾಂಗ್ರೆಸ್​ ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಜಿಎಸ್​ಟಿ ಮಂಡಳಿ ನಿರ್ಧಾರಕ್ಕೆ ಕರ್ನಾಟಕಕ್ಕೆ ನಷ್ಟ

ಜಿಎಸ್​ಟಿ ಕೌನ್ಸಿಲ್ ಸಭೆ ಕುರಿತು ಪ್ರತಿಕ್ರಿಯಿಸಿದ ಅವರು, ಜಿಎಸ್​ಟಿ ಜಾರಿಯಾದ ನಂತರ ರಾಜ್ಯಗಳು ಅನುಭವಿಸುತ್ತಿರುವ ನಷ್ಟವನ್ನು ತುಂಬಿಕೊಡಲು ಕೇಂದ್ರ ಸರ್ಕಾರವು ಪರಿಹಾರ ಒದಗಿಸುತ್ತಿತ್ತು. ಈ ಪ್ರಕ್ರಿಯೆ ಇಂದಿಗೆ ಅಂತ್ಯವಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ₹ 20 ಸಾವಿರ ಕೋಟಿಯಷ್ಟು ನಷ್ಟವಾಗಲಿದೆ. ರಾಜ್ಯ ಸರ್ಕಾರಕ್ಕೆ ಒಂದು ಆದಾಯದ ಮೂಲವೇ ನಿಲ್ಲಲಿದೆ. ಜಿಎಸ್​ಟಿ ಪರಿಹಾರ ಮುಂದುವರಿಸಲು ರಾಜ್ಯಗಳು ಮನವಿ ಮಾಡಿವೆ. ನನ್ನ ಪ್ರಕಾರ ಇನ್ನೂ ಐದು ವರ್ಷ ಜಿಎಸ್​ಟಿ ಪರಿಹಾರ ನೀಡಬೇಕು ಎಂದು ಕೋರಿದರು.

ಬಿಜೆಪಿ ಆಡಳಿತ ರಾಜ್ಯಗಳು ಕೇಂದ್ರದ ತೀರ್ಮಾನಕ್ಕೆ ಎದುರು ಹೇಳುವ ಸ್ಥಿತಿಯಲ್ಲಿ ಇಲ್ಲ. ಪರಿಹಾರವನ್ನು ಮುಂದುವರಿಸುವ ಬಗ್ಗೆ ಇನ್ನು ತಿರ್ಮಾನ ಆಗಿಲ್ಲ. ಈ ಮೊದಲು ರಾಜ್ಯಗಳಿಗೆ ಪರಿಹಾರ ನೀಡಲೆಂದೇ ಸೆಸ್ ಹಾಕಲಾಗುತ್ತಿತ್ತು. ಆದರೆ ಈಗ ಪರಿಹಾರ ನೀಡದಿದ್ದರೂ ಸೆಸ್ ಹಾಕುವುದು ಮುಂದುವರಿಯಲಿದೆ. ಇದರಿಂದ ರಾಜ್ಯಗಳಿಗೆ ಯಾವುದೇ ಆದಾಯ ಬರಲ್ಲ ಎಂದು ಹೇಳಿದರು.

ಜಿಎಸ್​ಟಿ ಜಾರಿಗೊಳಿಸುವ ಮೊದಲು ರಾಜ್ಯದ ಬೆಳವಣಿಗೆ ದರವು ಶೇ 14 ಇತ್ತು. ಆದರೆ ಈಗ ಇದು ಶೇ 6ಕ್ಕೆ ಕುಸಿದಿದೆ. ಈ ನಷ್ಟವನ್ನು ಭರಿಸವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಸಿಎಂ ಬೊಮ್ಮಾಯಿ ಯಾವುದೇ ಡಿಮ್ಯಾಂಡ್ ಮಾಡದೇ ವಾಪಸ್ ಬಂದಿದ್ದಾರೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಅವರು ಧ್ವನಿ ಎತ್ತಿಲ್ಲ. ಕೆಲವು ವಸ್ತುಗಳ ಮೇಲೆ ಜಿಎಸ್​ಟಿ ಮೊತ್ತ ಹೆಚ್ಚಿಸಲಾಗಿದೆ. ಕೃಷಿ ಉಪಯೋಗಿ ಪೈಪು, ಹಾಲು ಕರೆಯುವ ಮಷಿನ್​ಗಳ ಮೇಲೆ ಶೇ 12ರಿಂದ ಶೇ 18ಕ್ಕೆ, ಸೋಲಾರ್ ಉಪಕರಣಗಳ ಮೇಲೆ ಶೇ 5ರಿಂದ 12ಕ್ಕೆ ಜಿಎಸ್​ಟಿ ಹೆಚ್ಚಿಸಲಾಗಿದೆ. ಮೊದಲೇ ಅವೈಜ್ಞಾನಿಕವಾಗಿದ್ದ ತೆರಿಗೆ ಪದ್ಧತಿಯಿಂದ ಜನರಿಗೆ ನಷ್ಟವಾಗುತ್ತಿತ್ತು. ಆದರೆ ಈಗ ಹೆಚ್ಚುವರಿ ತೆರಿಗೆಗಳ ಮೂಲಕ ಮತ್ತಷ್ಟು ಬರೆ ಎಳೆಯಲಾಗುತ್ತಿದೆ ಎಂದು ಟೀಕಿಸಿದರು.

ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಡುಕರಿಗೆ ಮರಣದಂಡನೆ ಆಗಬೇಕು. ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಸಲಹೆ ಮಾಡಿದರು.

Published On - 12:57 pm, Thu, 30 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ