ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದವರೆಲ್ಲ ಸಿಟಿ ರವಿ ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ; ಸಿದ್ದರಾಮಯ್ಯ
ನನ್ನ ವಿರುದ್ಧ ಅಂದು ಮೀನು ತಿಂದು ದೇಗುಲಕ್ಕೆ ಹೋದೆ ಎಂದು ಅಪಪ್ರಚಾರ ಮಾಡಿದ್ದವರೆಲ್ಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಂಗಳೂರು: ನನ್ನ ವಿರುದ್ಧ ಅಂದು ಮೀನು ತಿಂದು ದೇಗುಲಕ್ಕೆ ಹೋದೆ ಎಂದು ಅಪಪ್ರಚಾರ ಮಾಡಿದ್ದವರೆಲ್ಲ ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ ಎಂಬ ಸಿಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ. ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಠಾಧೀಶರ ಬಗ್ಗೆಯೂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ @CTRavi_BJP ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ. 1/4
— Siddaramaiah (@siddaramaiah) February 23, 2023
ಇದನ್ನೂ ಓದಿ: Non Veg Food Row: ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದನ್ನು ಅಂಗೀಕರಿಸಿದ ಬಿಜೆಪಿ ಶಾಸಕ ಸಿಟಿ ರವಿ
ಸಿಟಿ ರವಿ ಮಾಂಸ ಸೇವಿಸಿ ದೇಗುಲ ಪ್ರವೇಶಿಸಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ ಸ್ಪಷ್ಟನೆ ನೀಡಿದ್ದ ಅವರು, ನಾನು ಮಾಂಸ ಸೇವಿಸಿದ್ದು ನಿಜ. ಆದರೆ, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ಮಾಂಸ ತಿನ್ನುವ ಜಾತಿಯಲ್ಲಿ ಹುಟ್ಟಿದ್ದೇನೆ. ಮಾಂಸ ಸೇವಿಸುತ್ತೇನೆ. ಆದರೆ ಮಾಂಸ ತಿಂದು ನಾನು ದೇವಸ್ಥಾನಕ್ಕೆ ಹೋಗಿಲ್ಲ. ಹೊಸದಾಗಿ ದೇವಸ್ಥಾನ ಕಟ್ಟಡ ಕಟ್ಟಲಾಗಿತ್ತು, ಬೀಗ ಕೂಡ ಹಾಕಿದ್ದರು ಎಂದು ಸಿಟಿ ರವಿ ಸ್ಪಷ್ಟನೆ ನೀಡಿದ್ದರು.
ಸಿಟಿ ರವಿ ಅವರು ಶಾಸಕ ಸುನೀಲ್ ನಾಯ್ಕ ಅವರ ಮನೆಗೆ ಭೇಟಿ ನೀಡಿ ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇರುವ ಹನುಮ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಅವರು ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ