ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ; ಸರಣಿ ಟ್ವೀಟ್ ಮೂಲಕ ಪ್ರಶ್ನೆಗಳ ಸುರಿಮಳೆ!

| Updated By: ganapathi bhat

Updated on: Oct 25, 2021 | 9:45 PM

Siddaramaiah: ಜಾತಿ ಸಮಾವೇಶದಲ್ಲಿ‌ ಭಾಗವಹಿಸಲ್ಲ ಎಂದು ಆಣೆ ಮಾಡಿ. ಬಿಜೆಪಿ ನಾಯಕರು ಪ್ರಮಾಣ ಮಾಡಿದ್ರೆ ನಿವೃತ್ತಿ ಪಡೀತೇನಿ. ನಾನು ರಾಜಕೀಯದಿಂದಲೇ ನಿವೃತ್ತಿಯನ್ನ ಪಡೆಯುತ್ತೇನೆ ಎಂದು ಟ್ವೀಟ್​ ಮೂಲಕ ಬಿಜೆಪಿಯವರಿಗೆ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ; ಸರಣಿ ಟ್ವೀಟ್ ಮೂಲಕ ಪ್ರಶ್ನೆಗಳ ಸುರಿಮಳೆ!
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬೆಂಗಳೂರು: ಕುರಿಗಾಹಿಗಳ ಮತಗಳ ಬೇಟೆಗಾಗಿ‌ ಕಂಬಳಿ ಹೊದ್ದು ಪ್ರಚಾರ ಮಾಡುತ್ತಿದ್ದಾರೆ. ಕಂಬಳಿ ಹೊದ್ದು ಪ್ರಚಾರ ನಡೆಸಿದ ಸಿಎಂರೇ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಹಣ ಒದಗಿಸಿ. ನಾವು ಜಾರಿಗೊಳಿಸಿದ್ದ ‘ಅನುಗ್ರಹ’ ಯೋಜನೆಗೆ ಹಣ ನೀಡಿ. ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರವನ್ನು ನೀಡಿ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಕಂಬಳಿ ಹೊದ್ದು ಪ್ರಚಾರ ಮಾಡಿದ್ದ ಸಿಎಂಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.

ಜಾತಿ ನಾಶವಾಗುವವರೆಗೆ ಮೀಸಲಾತಿ ಇರಬೇಕು. ನನ್ನ ಈ ಮಾತಿಗೆ ನಾನು ಈಗಲೂ ಬದ್ಧನಿದ್ದೇನೆ. ಮಂಡಲ್ ವರದಿ ವಿರೋಧಿಸಿ ಬೆಂಕಿ ಹಚ್ಚಿಕೊಂಡಿದ್ರು. ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ತಾಕತ್ ಇದ್ಯಾ? ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದ್ಯಾ? ಬಿಜೆಪಿ ಜಾತಿ ಹಿಪಾಕ್ರಸಿ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರೇ ನಿಮ್ಮ ಮಾತೃ ಸಂಸ್ಥೆಯಾದ ಆರ್​ಎಸ್​ಎಸ್​ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲಾ ಒಂದೇ ಜಾತಿ. ಪದಾಧಿಕಾರಿಗಳೆಲ್ಲ ಒಂದು ಜಾತಿಯವರಿರುವುದು ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲಾ ಜಾತಿಗಳಿಗೆ ಸೇರಿದವರು ಇರುವುದು ಯಾಕೆ? ಎಂದು ಟ್ವೀಟ್​ ಮೂಲಕ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಟಿಪ್ಪು ಜಯಂತಿಯಲ್ಲಿ ನಾನು ಭಾಗಿ ಆದ್ರೆ ಹಿಂದೂ ವಿರೋಧಿ. ಆದರೆ, ಟಿಪ್ಪು ಬಗ್ಗೆ ಸರ್ಕಾರದಿಂದ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​​. ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿಎಸ್​ವೈ, ಅಶೋಕ್​​ ಹಿಂದೂಕುಲ ತಿಲಕರೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಕುರುಬ ಸಮಾವೇಶ ನಡೆಸಿದ್ದ ಸಚಿವ ಕೆ.ಎಸ್​.ಈಶ್ವರಪ್ಪ. ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್. ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಕಾಗೇರಿ, ಸುರೇಶ್. ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಅಶೋಕ್. ಇವರೆಲ್ಲಾ ಜಾತಿವಾದಿಗಳಾ ಜಾತ್ಯತೀತರಾ ಎಂದು ಪ್ರಶ್ನೆ ಮಾಡಿದ್ದಾರೆ.

ಶೋಷಿತ ಜಾತಿಗಳ ಸಮಾವೇಶದಲ್ಲಿ ಭಾಗಿ ಆದ್ರೆ ಜಾತಿವಾದಿ. ನಾನು ಭಾಗವಹಿಸಿದ್ರೆ ಜಾತಿವಾದಿ, ನೀವು ಜಾತ್ಯತೀತರಾ? ಜಾತಿ ಸಮಾವೇಶದಲ್ಲಿ‌ ಭಾಗವಹಿಸಲ್ಲ ಎಂದು ಆಣೆ ಮಾಡಿ. ಬಿಜೆಪಿ ನಾಯಕರು ಪ್ರಮಾಣ ಮಾಡಿದ್ರೆ ನಿವೃತ್ತಿ ಪಡೀತೇನಿ. ನಾನು ರಾಜಕೀಯದಿಂದಲೇ ನಿವೃತ್ತಿಯನ್ನ ಪಡೆಯುತ್ತೇನೆ ಎಂದು ಟ್ವೀಟ್​ ಮೂಲಕ ಬಿಜೆಪಿಯವರಿಗೆ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕವಾಗಿ ರಾಜಕೀಯ ಮಾಡಿ ಎಂದು ಹೇಳಿದ್ದಾರೆ.

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸ್ವಾಮೀಜಿಗಳಿಗೆ ಹಣ ಹಂಚಿಕೆ ಮಾಡಿದ್ದೀರಿ. ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ಹಣ ಹಂಚಿಕೆ ಮಾಡಿದ್ದೀರಿ. ಹಣ ಹಂಚಿದ್ದ ಬಿ.ಎಸ್. ಯಡಿಯೂರಪ್ಪ ಜಾತಿವಾದಿಯೇ?, ಜಾತ್ಯತೀತವಾದಿಯೇ? ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು ಎಂಬ ಮಂತ್ರ. ಆದರೆ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿ ಬಿಚ್ಚಿಟ್ಟರೆ ಧಾರಾವಾಹಿ ಆದೀತು. ಬಿಜೆಪಿ ಜಾತಿ ಹಿಪಾಕ್ರಸಿ ಕೊನೆ ಇಲ್ಲದ ಧಾರಾವಾಹಿ ಆದೀತು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: Siddaramaiah Dance: ಲಂಬಾಣಿ ಮಹಿಳೆಯರ ಜೊತೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ

ಇದನ್ನೂ ಓದಿ: ಬಿಜೆಪಿ, ಜೆಡಿಎಸ್​ಗೆ ನಾನೇ ಟಾರ್ಗೆಟ್; ಇಬ್ಬರಿಗೂ ನನ್ನನ್ನು ಕಂಡರೆ ಭಯ: ಸಿದ್ದರಾಮಯ್ಯ ಹೇಳಿಕೆ

Published On - 9:40 pm, Mon, 25 October 21