ಇಂದು ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.03) ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇಂದು ತುರ್ತು ಸುದ್ದಿಗೋಷ್ಠಿ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: Mar 03, 2023 | 8:03 AM

ಬೆಳಗಾವಿ: ಪ್ರಜಾಧ್ವನಿ ಯಾತ್ರೆ ಕೈಗೊಂಡಿರುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಉತ್ತರ ಕರ್ನಾಟಕದಲ್ಲಿ ಭರ್ಜರಿ ಮತಬೇಟೆ ಮಾಡುತ್ತಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಇಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಇಂದು (ಮಾ.03) ಬೆಳಗ್ಗೆ 11ಕ್ಕೆ ಬೆಳಗಾವಿಯಲ್ಲಿ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ​ ಬಲೆಗೆ ಬಿದ್ದಿರುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಈಗಾಗಲೇ 40 ಪರ್ಸೆಂಟ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್, ಇದಕ್ಕೆ ಸಾಕ್ಷಿ ಎಂಬಂತೆ ಶಾಸಕರ ಪುತ್ರ ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದು, ಇದನ್ನೇ ಕಾಂಗ್ರೆಸ್​ ಮತ್ತೊಂದು ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳವ ಪ್ಲಾನ್ ಮಾಡಿದೆ. ಸಿದ್ದರಾಮಯ್ಯ ಸುದ್ದಿಗೋಷ್ಠಿ ಕರೆದಿದ್ದು ಯಾಕೆ..? ಸುದ್ದಿಗೋಷ್ಠಿಯಲ್ಲಿ ಏನ್​ ಬಾಂಬ್​ ಸಿಡಿಸುತ್ತಾರೆ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಷ್ಟು ದಿನ ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತದವರೇ ಕೊಟ್ಟಿದ್ದಾರೆ. ಈಗ ಯಾರು ರಾಜೀನಾಮೆ ಕೊಡ್ತಾರೆ? ಸಿಎಂ ಕೊಡ್ತಾರಾ? ಸಚಿವರು ಕೊಡ್ತಾರಾ? ನಿಗಮ-ಮಂಡಲಿ ಅಧ್ಯಕ್ಷರು ಕೊಡ್ತಾರಾ? ಎಂದು ಪ್ರಶ್ನಿಸಿದರು.

ನಮ್ಮ ಸಿಎಂ ಬೊಮ್ಮಾಯಿ ಎಲ್ಲದಕ್ಕೂ ಸಾಕ್ಷಿ ಕೇಳುತ್ತಿದ್ದರು. ಕೆಂಪಣ್ಣ 40%, ಮಠಾಧೀಶರು 30%, ವಿಶ್ವನಾಥ್ 20% ಅಂದರು. ಹಿಂದೆ ನಾನು, ಸಿದ್ದರಾಮಯ್ಯ ವಿಧಾನಸೌಧದಲ್ಲಿ ಧರಣಿ ಮಾಡಿದಾಗ ಗೋಡೆ ಬಡಿದೆವು. ಯಾವ ಗೋಡೆ ಕಂಬ ಮುಟ್ಟಿದರೂ ಕಾಸು ಕಾಸು ಅಂತ ಕೇಳಿಸುತ್ತಿತ್ತು. ಎಲ್ಲಿ ನೋಡಿದರೂ ಲಂಚ ಲಂಚ ಎನ್ನುತ್ತಿವೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟರೆ ಆ ಸ್ಥಾನಕ್ಕೆ ಗೌರವ. ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿ ಕೊಟ್ಟಿದ್ದಾರೆ. 10, 20 ಲಕ್ಷಕ್ಕೆಲ್ಲಾ ಇಡಿ, ಐಟಿಯವರು ಬರುತ್ತಾರೆ. ಸಿಎಂ‌ ಕೂಡಲೇ ರಾಜೀನಾಮೆ‌ ಕೊಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್​​ನಿಂದ ಚನ್ನಗಿರಿಯಲ್ಲಿ ಪ್ರತಿಭಟನೆ

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರನ ಮೇಲೆ ಲೋಕಾಯುಕ್ತ ದಾಳಿಯನ್ನೇ ಅಸ್ತ್ರವಾಗಿಸಲು ಕಾಂಗ್ರೆಸ್ ಮುಂದಾಗಿದೆ. ಸಿಎಂ 40 % ಕಮಿಷನ್ ಆರೋಪಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿ ನೀಡಿದ್ದಾರೆ. ಶಾಸಕನ ಪುತ್ರನ ಬಳಿ ಸಿಕ್ಕ ನೋಟಿನ ಕಂತೆಗಳೇ ಸಾಕ್ಷಿ. ಇದಕ್ಕಿಂತ ಸಾಕ್ಷಿ ಬೇಕಾ ಎಂದು ಚನ್ನಗಿರಿ ಕಾಂಗ್ರೆಸ್​ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಕಾಂಗ್ರೆಸ್ ‌ಮುಖಂಡರು ಇಂದು 11 ಗಂಟೆಗೆ ತಾಲ್ಲೂಕು ಕಾಂಗ್ರೆಸ್​‌ನಿಂದ ಪ್ರತಿಭಟನೆ ನಡೆಯಲಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ