ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ

ಬಿಜೆಪಿ ಎಂಬದು ನರೇಂದ್ರ ಮೋದಿ ಕೃಪಾಪೋಷಿತ ನಾಟಕ ಮಂಡಳಿ. ಬಿಜೆಪಿಯವರಿಗೆ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ, ಹೋರಾಟ, ಬಲಿದಾನದ ರುಚಿ ಗೊತ್ತಿಲ್ಲ. ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ತುರ್ತುಪರಿಸ್ಥಿತಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಜನರಿಗೆ ಕರೆ ನೀಡಿದರು.

ಮತ್ತೊಂದು ವಿವಾದಿತ ಹೇಳಿಕೆ; ಪ್ರಧಾನಿ ಮೋದಿಯನ್ನು ಮೊಹಮ್ಮದ್ ಅಲಿ ಜಿನ್ನಾ ಜತೆ ಹೋಲಿಸಿದ ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ & ಪ್ರಧಾನಿ ಮೋದಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Ganapathi Sharma

Updated on:Sep 07, 2023 | 8:24 PM

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 7: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯ ನಂತರ ದೇಶದಾದ್ಯಂತ ವಿವಾದಿತ ಹೇಳಿಕೆಗಳನ್ನು ನೀಡುವುದು ಹೆಚ್ಚಾಗಿದೆ. ಈ ಮಧ್ಯೆ, ದೇಶದ ಹೆಸರನ್ನು ‘ಭಾರತ್’ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂಬ ವರದಿಗಳ ವಿಚಾರವಾಗಿಯೂ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ನೇರ ವೈಯಕ್ತಿಕ ವಾಗ್ದಾಳಿ ಮಟ್ಟಕ್ಕೆ ಪ್ರತಿಪಕ್ಷಗಳ ವಿರೋಧ ಮುಂದುವರಿದಿದೆ. ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಅವರು ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊಹಮ್ಮದ್ ಅಲಿ ಜಿನ್ನಾ (Muhammad Ali Jinnah) ಜತೆ ಹೋಲಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ, ಇಂಡಿಯಾ ಪದಕ್ಕೆ ಮೊಹಮ್ಮದ್ ಅಲಿ ಜಿನ್ನಾ ವಿರೋಧ ವ್ಯಕ್ತಪಡಿಸಿದ್ದರು. ಪಾಕಿಸ್ತಾನದ ಮೊಹಮ್ಮದ್ ಅಲಿ ಜಿನ್ನಾ ಪಾತ್ರವನ್ನು ಈಗ ನರೇಂದ್ರ ಮೋದಿ ನಿರ್ವಹಿಸುತ್ತಿದ್ದಾರೆ. ಇಂಡಿಯಾ ಎಂದರೆ ಅದಕ್ಕೆ ಪಾಕಿಸ್ತಾನವೂ ಸೇರುತ್ತದೆ ಎಂದು ಜಿನ್ನಾ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ.

ಬಿಜೆಪಿ ಎಂಬದು ನರೇಂದ್ರ ಮೋದಿ ಕೃಪಾಪೋಷಿತ ನಾಟಕ ಮಂಡಳಿ. ಬಿಜೆಪಿಯವರಿಗೆ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ, ಹೋರಾಟ, ಬಲಿದಾನದ ರುಚಿ ಗೊತ್ತಿಲ್ಲ. ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಜಮ್ಮು ಕಾಶ್ಮಿರದಿಂದ ಕನ್ಯಾಕುಮಾರಿ ವರೆಗೂ ಅಘೋಷಿತ ತುರ್ತುಪರಿಸ್ಥಿತಿ ಇದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಅದನ್ನು ಕಿತ್ತು ಹಾಕಬೇಕು ಎಂದು ಮೊಯ್ಲಿ ಜನರಿಗೆ ಕರೆ ನೀಡಿದರು.

ಇದನ್ನೂ ಓದಿ: ಜೆಡಿಎಸ್ ವರಿಷ್ಠ ದೇವೇಗೌಡರದು ಮಂಗನ್ಯಾಯ; ವೀರಪ್ಪ ಮೊಯ್ಲಿ ಟೀಕೆ

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಮೊಯ್ಲಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮಚಂದ್ರನಿಗೆ ಮೊಯ್ಲಿ ಹೋಲಿಸಿದರು. ಶ್ರೀರಾಮಚಂದ್ರ ಅಯೋದ್ಯೆಯಿಂದ ಶ್ರೀಲಂಕಾ ವರೆಗೂ ಪಾದಯಾತ್ರೆ ಮಾಡಿದ್ದರು. ರಾಹುಲ್ ಗಾಂಧಿ ದೇಶದಲ್ಲಿ ಪ್ರಥಮ ಭಾರಿಗೆ ಜಮ್ಮುಕಾಶ್ಮೀರದಿಂದ ಕನ್ಯಕುಮಾರಿವರೆಗೂ ಪಾದಯಾತ್ರೆ ಮಾಡಿದ್ದಾರೆ ಎಂದು ಮೊಯ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ಡಿಎಂಕೆ ನಾಯಕ ಎ ರಾಜಾ

ನರೇಂದ್ರ ಮೋದಿ ಅವರು ದೇಶವನ್ನು ಒಡೆದು ಹಾಕುತ್ತಿದ್ದಾರೆ. ಜಾತಿ ಮತ ಪಂಥಗಳ ಆಧಾರದಲ್ಲಿ ಒಡೆಯುತ್ತಿದ್ದಾರೆ. ಪ್ರದಾನಿ ನರೇಂದ್ರ ಮೋದಿ ಅವರನ್ನು ಕಟ್ಟಿ ಹಾಕಲು ಇಂಡಿಯಾ ಒಕ್ಕೂಟ ರಚನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಂಧೂ, ಹಿಂದೂ ಅರೇಬಿಕ್ ಪದಗಳು; ಮೊಯ್ಲಿ

ಸಿಂಧೂ, ಹಿಂದೂ ಅರೇಬಿಕ್ ಪದಗಳು. ಇಂಡಿಯಾ ಒಕ್ಕೂಟವನ್ನು ಸಹಿಸಿಕೊಳ್ಳದ ಮೋದಿ ಇಂಡಿಯಾ ಪದವನ್ನೆ ಕಿತ್ತು ಹಾಕುತ್ತಿದ್ದಾರೆ. ಇಂಡಿಯಾ ಒಕ್ಕೂಟ ಕಂಡು ನರೇಂದ್ರ ಮೋದಿಗೆ ನಡುಕ ಬಂದಿದೆ. ಬಿಜೆಪಿಗೆ ಇತಿಹಾಸ ಗೊತ್ತಿಲ್ಲ ಹೋರಾಟ ಗೊತ್ತಿಲ್ಲ, ಬಿಜೆಪಿ ದೇಶದ ಚರೀತ್ರೆ ಗೊತ್ತಿಲ್ಲ. ಭಾರತ ಪದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಆದ್ರೆ ಭರತ ಮಹಾರಾಜ ಇಡೀ ದೇಶವನ್ನು ಆಳಿಲ್ಲ ಎಂದು ಅವರು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Thu, 7 September 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ