Congress Allegation: ಸರ್ಕಾರದಿಂದ ಟೆಂಡರ್ ಗೋಲ್ಮಾಲ್: ಡಿಕೆಶಿ ನಿವಾಸದಲ್ಲಿ ಬಾಂಬ್ ಸಿಡಿಸಿದ ಕೈ ನಾಯಕರು

Tender Golmal Allegation Against Bommai Government: ಸರ್ಕಾರದ ಅವಧಿ ಒಂದು ತಿಂಗಳು ಮಾತ್ರವೇ ಇರುವುದಿರಂದ ತರಾತುರಿಯಲ್ಲಿ ಟೆಂಡರ್​ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾ ಗೋಲ್ಮಾಲ್ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ್ದಾರೆ.

Congress Allegation: ಸರ್ಕಾರದಿಂದ ಟೆಂಡರ್ ಗೋಲ್ಮಾಲ್: ಡಿಕೆಶಿ ನಿವಾಸದಲ್ಲಿ ಬಾಂಬ್ ಸಿಡಿಸಿದ ಕೈ ನಾಯಕರು
ಡಿಕೆ ಶಿವಕುಮಾರ್
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 15, 2023 | 9:27 AM

ಬೆಂಗಳೂರು: ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ.

ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತದೆ. ಬಜೆಟ್ ಸೆಷನ್ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ, ಇಂಧನ, ಆರೋಗ್ಯ ಸೇರಿ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಎರಡು ಪಟ್ಟು ಹೆಚ್ಚು ಮೊತ್ತಕ್ಕೆ ಎಸ್ಟಿಮೇಟ್ ಮಾಡುತ್ತಿದ್ದಾರೆ. ಏಳು ದಿನ ಮಾತ್ರ ಟೈಂ ಕೊಟ್ಟು, ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿಬಿಟ್ಟಿದ್ದಾರೆ. ಬೀದಿಯಲ್ಲಿ ನಿಂತು ಅವರು ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಮಂತ್ರಿ ಮಾಡದೇ ಇರುವವರಿಗೆ 2-3 ಸಾವಿರ ಕೋಟಿ ಕೆಲಸ ಅಂತ ಟೆಂಡರ್ ಹಂಚಿಕೆ ಮಾಡುತ್ತಾ ಇದ್ದಾರೆ. ನಮಗೆ ಅದೇ ಶಾಸಕರು ಮಾಹಿತಿ ಕೊಡುತ್ತಿದ್ದಾರೆ. ಸಾವಿರಾರು ಕೋಟಿ ರೂ ಮೊತ್ತದ ಹಳೆಯ ಕೆಲಸದ ಬಿಲ್ ಬಾಕಿ ಉಳಿದುಕೊಂಡಿದ್ದರೂ ಹೊಸ ಟೆಂಡರ್​ಗಳನ್ನು ಹಂಚಲಾಗುತ್ತಿದೆ. ಯಾರು ಮುಂಚಿತವಾಗಿ ಹಣ ತಲುಪಿಸುತ್ತಾರೋ ಅವರಿಗೆ ಕೆಲಸದ ಹಂಚಿಕೆ ಮಾಡುತ್ತಿದ್ದಾರೆ. ಯಾವುದೂ ಪಾರದರ್ಶಕವಾಗಿ ನಡೆಯುತ್ತಿಲ್ಲ.

ಬಿಡಿಎ ಕಾರಂತ ಬಡಾವಣೆ ಇನ್ನೂ ಹಂಚಿಕೆ ಆಗಿಲ್ಲ. ಆದರೂ ಅಲ್ಲಿ 3 ಸಾವಿರ ಕೋಟಿ ರೂ ಟೆಂಡರ್ ಕರೆದಿದ್ದಾರೆ. ಬರೀ ವಸೂಲಿ ಬಾಜಿ ನಡೆಯುತ್ತಿದೆ. ಬೆಂಗಳೂರಿಗೆ ಕರಪ್ಷನ್ ಕ್ಯಾಟಿಟಲ್ ಅನ್ನೋ ಹೆಸರು ಬಂದಿದೆ. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ. ಆಗ ಎಲ್ಲವನ್ನೂ ರದ್ದು ಮಾಡುತ್ತೇವೆ. ಅಧಿಕಾರಿಗಳು, ಗುತ್ತಿಗೆದಾರರು, ರಾಜಕಾರಣಿಗಳನ್ನು ಬಿಡುವುದಿಲ್ಲಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಕಾರಣ ಎಂದ ಸಿದ್ದರಾಮಯ್ಯ

ಸರ್ಕಾರದಿಂದ ಟೆಂಡರ್ ಗೋಲ್ಮಾಲ್ ನಡೆದಿದೆ ಎನ್ನುವ ಆರೋಪವನ್ನು ಸಿದ್ದರಾಮಯ್ಯ ಕೂಡ ಮಾಡಿದ್ದು, ಇದಕ್ಕೆ ಸಿಎಂ ಬೊಮ್ಮಾಯಿ ಕಾರಣ ಎಂದು ದೂಷಿಸಿದ್ದಾರೆ. ಡಿಕೆ ಶಿವಕುಮಾರ್ ನಿವಾಸದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಈ ಹಗರಣವನ್ನು ಇಲ್ಲಿಗೇ ಬಿಡದೇ ಕೋರ್ಟ್ ಮೊರೆ ಹೋಗುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಟೆಂಡರ್ ರದ್ದು ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದನ್ನು ಸಿದ್ದರಾಮಯ್ಯ ಕೂಡ ಪುನರುಚ್ಚರಿಸಿದ್ದಾರೆ. ಸರ್ಕಾರದಿಂದ ಒಂದೇ ದಿನ 18 ಸಾವಿರ ಕೋಟಿ ರೂ ಟೆಂಡರ್ ಆಗಿದೆ. ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ತನಿಖಾ ಸಮಿತಿ ರಚನೆ ಮಾಡಿ ಹಗರಣ ಬಯಲಿಗೆಳೆಯುತ್ತೇವೆ. ಯಾರ ಮೇಲಾದರೂ ಆರೋಪ ಇದ್ದರೂ ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೆಲ್ಲವೂ ಎಲೆಕ್ಷನ್ ಫಂಡ್ ರೇಸ್ ಆಗಿದೆ. ಚುನಾವಣೆಗೆ 6 ಸಾವಿರ ಕೋಟಿ ರೂ ಕೊಡುತ್ತೇವೆ ಎಂದು ಹೇಳ್ತಾರೆ. ಇಷ್ಟರಮಟ್ಟಿಗೆ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ ಎಂದು ಖೇದ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಬೋರ್ಡ್ ಮೀಟಿಂಗ್​ಗಳೆಲ್ಲಾ ಸಿಎಂ ಬೊಮ್ಮಾಯ ನೇತೃತ್ವದಲ್ಲೇ ನಡೆಯೋದು. ಟೆಂಡರ್ ಮೊತ್ತ ಎಷ್ಟು ಹೆಚ್ಚಿಸಬೇಕು ಎಂದು ಅವರೇ ಹೇಳಿರುತ್ತಾರೆ. ಇದಕ್ಕೆಲ್ಲಾ ಬೊಮ್ಮಾಯಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಡಿಕೆ ಶಿವಕುಮಾರ್ ನಿವಾಸದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಹಲವು ಸಿದ್ದರಾಮಯ್ಯ, ರಣದೀಪ್ ಸುರ್ಜೆವಾಲ, ಪ್ರಿಯಾಂಕ್ ಖರ್ಗೆ ಅವರೂ ಇದ್ದರು.

Published On - 9:05 am, Wed, 15 February 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ