AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರ ವ್ಯಾಮೋಹ: ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಸಿದ್ದರಾಮಯ್ಯ, ಮಹದೇವಪ್ಪ ನಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್​ಸಿ ಮಹದೇವಪ್ಪ ಅವರ ಪುತ್ರ ವ್ಯಾಮೋಹಕ್ಕೆ ಕಾಂಗ್ರೆಸ್​ನಲ್ಲಿ ಕೆಲ ನಾಯಕರ ಅಸಮಧಾನಕ್ಕೆ ಕಾರಣವಾಗಿದೆ. ಈ ಇಬ್ಬರೂ ನಾಯಕರು ತಮ್ಮ ಪುತ್ರರಿಗೆ ಸದ್ದಿಲ್ಲದೇ ಸಾಂವಿಧಾನಿಕ ಹುದ್ದೆ ನೀಡಿದ್ದರಿಂದ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪುತ್ರ ವ್ಯಾಮೋಹ: ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಸಿದ್ದರಾಮಯ್ಯ, ಮಹದೇವಪ್ಪ ನಡೆ
ಹೆಚ್​ಸಿ ಮಹದೇವಪ್ಪ, ಸಿದ್ದರಾಮಯ್ಯ
TV9 Web
| Edited By: |

Updated on: Sep 05, 2023 | 2:42 PM

Share

ಬೆಂಗಳೂರು, (ಸೆಪ್ಟೆಂಬರ್ 05): ಕರ್ನಾಟಕದಲ್ಲಿ ಕಾಂಗ್ರೆಸ್ (Karnataka Congress) ಅಧಿಕಾರಕ್ಕೆ ಬಂದು ಮೂರು ತಿಂಗಳು ಪೂರೈಸಿದೆ. ಆದ್ರೆ, ಪಕ್ಷದೊಳಗೆ ಒಂದಲ್ಲ ಒಂದು ಗೊಂದಲಗಳು ಹುಟ್ಟಿಕೊಳ್ಳುತ್ತಲೇ ಇವೆ. ವಿಧಾನಪರಿಷತ್​ಗೆ ನಾಮನಿರ್ದೇಶನ ವಿಚಾರಕ್ಕೆ ಸಿದ್ದರಾಮಯ್ಯ (Siddaramaiah) ತೀರ್ಮಾನಕ್ಕೆ ಕಾಂಗ್ರೆಸ್ ಕೆಲ ನಾಯಕರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸಾಂವಿಧಾನಿಕ ಹುದ್ದೆ ನೀಡಿದ್ದರಿಂದ ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರನ್ನು ವರುಣ ಕ್ಷೇತ್ರ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ನಡೆಗೆ ಕಾಂಗ್ರೆಸ್​ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಮಾದರಿಯಲ್ಲೇ ಉಳಿದ ನಾಯಕರಿಗೂ ಅಕವಕಾಶ ನೀಡಿ ಎನ್ನುವ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸಾಂವಿಧಾನಿಕ ಹುದ್ದೆ, ಸದ್ದಿಲ್ಲದೇ ನೇಮಕ ಈಗ ಚರ್ಚೆಗೆ ಗ್ರಾಸ

ಯತೀಂದ್ರಗೆ ನೀಡಿದ ಹಾಗೇ ನಮಗೂ ಅವಕಾಶ ನೀಡಿ. ಯತೀಂದ್ರಗೆ ಇರುವ ಅವಕಾಶ ನಮಗ್ಯಾಕೆ ಇಲ್ಲ. ಪಕ್ಷಕ್ಕೆ ದುಡಿದ ನಾಯಕರಿಗೆ ಸಾಂವಿಧಾನಿಕ ಹುದ್ದೆ ತಕ್ಷಣವೇ ನೀಡಿ ಎನ್ನುವ ಕೂಗು ಕೇಳಿಬಂದಿವೆ. ಅತ್ತ ನಿಗಮ ಮಂಡಳಿಯನ್ನೂ ನೀಡುತ್ತಿಲ್ಲ. ಸಾಂವಿಧಾನಿಕ ಅವಕಾಶ ಕೂಡ ನೀಡುತ್ತಿಲ್ಲ. ಯತೀಂದ್ರಗೆ ಕೊಡಬಹುದಾದ ಅವಕಾಶ ನಮಗೂ ಕೊಡಿ ಎಂದು ಬಹಿರಂಗ ವೇದಿಕೆಗಳಲ್ಲೇ ಡಿಮ್ಯಾಂಡ್ ಇಟ್ಟಿದ್ದಾರೆ.

ಸಚಿವ ಮಹದೇವಪ್ಪ ನಡೆಗೂ ಆಕ್ರೋಶ

ಸಿಎಂ ನಡೆ ಒಂದು ಕಡೆಯಾದರೆ, ಸಚಿವ ಮಹದೇವಪ್ಪ ಪುತ್ರನದ್ದು ಮತ್ತೊಂದು ಕಥೆಯಾಗಿದೆ. ಡಾ ಹೆಚ್​ಸಿ ಮಹಾದೇವಪ್ಪ ಅವರು ತಮ್ಮ ಪುತ್ರನಿಗೆ ಕೆಡಿಪಿ ಸದಸ್ಯ ಸ್ಥಾನ ಕರುಣಿಸಿದ್ದಾರೆ. ಪರಿಶಿಷ್ಟ ಜಾತಿ ಪ್ರವರ್ಗದಡಿ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆ ಕೆಡಿಪಿ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಕೆಡಿಸಿ ಸದಸ್ಯ ಸ್ಥಾನ ನೀಡಲಾಗಿದೆ. ಅಲ್ಲದೇ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಇದಕ್ಕೆ ಮುಖಂಡರು ಹಾಗೂ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿ ಪುತ್ರರ ಪಾರುಪತ್ಯಕ್ಕೆ ನೇರವಾಗಿ ಯಾಕೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ