ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಮುಂದುವರಿದ ಕಾಂಗ್ರೆಸ್ ನಾಯಕರ ಧರಣಿ
ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಈಶ್ವರಪ್ಪ ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಿರಂತರವಾಗಿ ಸದನದಲ್ಲಿ ಹೋರಾಟ ಮಾಡುತ್ತಿದ್ದಾರೆ. ಜೊತೆಗೆ ನಾಳೆ ಅಧಿವೇಶನ ಮತ್ತೆ ಆರಂಭವಾಗುತ್ತದೆ.
ಬೆಂಗಳೂರು: ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ (Congress) ನಾಯಕರ ಧರಣಿ ಮುಂದುವರಿದಿದೆ. ಈ ಮೂಲಕ ಕಾಂಗ್ರೆಸ್ ನಾಯಕರ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ, ವಿಧಾನಪರಿಷತ್ನಲ್ಲಿ ಮುಂದುವರಿದ ಧರಣಿಯನ್ನು ನಾಳೆ ಅಧಿವೇಶನದಲ್ಲೂ ಮುಂದುವರಿಸಲು ನಿರ್ಧಾರ ಮಾಡಲಾಗಿದೆ. ಅಲ್ಲದೆ ಸೋಮವಾರದ ಬಳಿಕ ರಾಜ್ಯಾದ್ಯಂತ ಹೋರಾಟಕ್ಕೆ ಸೂಚನೆ ನೀಡುವ ಸಾಧ್ಯತೆಯಿದೆ. ಸದ್ಯ ಸರ್ಕಾರದ ನಿರ್ಧಾರ ನೋಡಿಕೊಂಡು ಹೋರಾಟಕ್ಕೆ ಸೂಚನೆ ನೀಡಬಹುದು.
ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಈಶ್ವರಪ್ಪ ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಿರಂತರವಾಗಿ ಸದನದಲ್ಲಿ ಹೋರಾಟ ಮಾಡುತ್ತಿದ್ದಾರೆ. ಜೊತೆಗೆ ನಾಳೆ ಅಧಿವೇಶನ ಮತ್ತೆ ಆರಂಭವಾಗುತ್ತದೆ. ಅಧಿವೇಶನ ಆರಂಭವಾದ ಕೂಡಲೇ ಮತ್ತೆ ನಾಯಕರು ಈಶ್ವರಪ್ಪ ವಿರುದ್ಧ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಾರೆ.
ಜಿಲ್ಲಾ, ತಾಲೂಕು ಮಟ್ಟದಲ್ಲೂ ಹೋರಾಟ ಮಾಡಲು ಚಿಂತನೆ ನಡೆಸಿರುವ ಕಾಂಗ್ರೆಸ್, ಸರ್ಕಾರದ ತೀರ್ಮಾನ ನೋಡಿಕೊಂಡು ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವವರೆಗೂ ಹೋರಾಟ ನಡೆಸಲು ಎಲ್ಲ ರೂಪುರೇಷೆ ಸಿದ್ಧ ಮಾಡಿಕೊಳ್ಳುತ್ತಿದೆ.
ವಿಧಾನಸೌಧದ ಮುಂದೆ ಸ್ವಚ್ಛತೆ ಪರಿಶೀಲಿಸಿದ ಸಿದ್ದರಾಮಯ್ಯ: ವಿಧಾನಸೌಧದ ಮುಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಚ್ಛತೆ ಪರಿಶೀಲಿಸಿದರು. ಸ್ವಚ್ಛತೆ ಹಾಗೂ ಸಣ್ಣಪುಟ್ಟ ಡ್ಯಾಮೇಜ್ ಕುರಿತು ಪರಿಶೀಲನೆ ಮಾಡಿದರು. ಪರಿಶೀಲನೆ ಬಳಿಕ ಹೇಳಿಕೆ ನೀಡಿದ ಸಿದ್ದರಾಮಯ್ಯ, ವಿಧಾನಸೌಧದಲ್ಲಿ ಎಲ್ಲೆಂದರಲ್ಲಿ ಕಸವನ್ನು ಎಸೆಯಲಾಗುತ್ತಿದೆ. ವಾಹನ ಗುದ್ದಿ ಮುಖ್ಯದ್ವಾರದಲ್ಲಿ ಸಣ್ಣ ಡ್ಯಾಮೇಜ್ ಆಗಿದೆ. ವಿಧಾನಸೌಧದ ಸ್ವಚ್ಛತೆ ಕುರಿತು ಸಿಎಸ್ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.
ನಮ್ಮ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಾ ಇಲ್ವಾ ಅಂತ ನೋಡಲು ಧರಣಿ ಮಾಡುತ್ತಿಲ್ಲ. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅದನ್ನು ಖಂಡಿಸಿ ನಮ್ಮ ನೋವನ್ನು ವ್ಯಕ್ತಪಡಿಸಿ ಧರಣಿ ಮಾಡುತ್ತಿದ್ದೇವೆ. ಎಲ್ಲಿತನಕ ಆಗುತ್ತೋ ನೋಡೋಣ, ಈ ವಿಚಾರದಲ್ಲಿ ನಾವು ತಾರ್ಕಿಕ ಅಂತ್ಯ ಕಾಣುತ್ತೇವೆ. ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ರಾಜ್ಯಾದ್ಯಂತ ಹೋರಾಟ ಮಾಡಲು ನಮ್ಮ ನಾಯಕರು ತೀರ್ಮಾನ ಮಾಡಿದ್ದಾರೆ ಅಂತ ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್ ತಿಳಿಸಿದರು.
ಇದನ್ನೂ ಓದಿ
ನಾಳೆಯಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ; ಹಿಜಾಬ್ ವಿವಾದದಿಂದ ಗೈರಾದರೆ ಮತ್ತೆ ಅವಕಾಶ ಇಲ್ಲ
ಆಮ್ ಆದ್ಮಿ ಪಕ್ಷದ ಕೌನ್ಸಿಲ್ಲರ್ ಗೀತಾ ರಾವತ್ ರೂ. 20,000 ಲಂಚಕ್ಕೆ ಬೇಡಿಕೆಯಿಟ್ಟು ರೆಡ್-ಹ್ಯಾಂಡಾಗಿ ಸಿಕ್ಕಿಬಿದ್ದರು!
Published On - 8:47 am, Sun, 20 February 22