ಕರ್ನಾಟಕದ ಮುಖಂಡರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ, ಸಿದ್ದರಾಮಯ್ಯ ಭಾಗಿ

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸುಮಾರು 20 ನಾಯಕರು ಪಾಲ್ಗೊಂಡಿದ್ದರು. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಹ ಭಾಗವಹಿಸಿದ್ದರು.

ಕರ್ನಾಟಕದ ಮುಖಂಡರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ, ಸಿದ್ದರಾಮಯ್ಯ ಭಾಗಿ
ರಾಹುಲ್ ಗಾಂಧಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 24, 2022 | 6:07 PM

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕಾಂಗ್ರೆಸ್​ ಪಕ್ಷದ ಕರ್ನಾಟಕ ರಾಜ್ಯದ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸುಮಾರು 20 ನಾಯಕರು ಪಾಲ್ಗೊಂಡಿದ್ದರು. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಹ ಭಾಗವಹಿಸಿದ್ದ ಸಭೆಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಈ ವೇಳೆ ಉಳಿದ ನಾಯಕರು ರಾಹುಲ್‌ ನಿವಾಸದ ಲಾಂಜ್​ನಲ್ಲಿ ಕುಳಿತು ಪರಸ್ಪರ ಮಾತುಕತೆ ನಡೆಸಿದರು. ಮಾತುಕತೆಯ ವಿವರಗಳು ಬಹಿರಂಗಗೊಂಡಿಲ್ಲ.

ರಾಹುಲ್ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒಳ ಜಗಳಗಳು ಇಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು. ಮೇಕೆದಾಟು 2ನೇ ಹಂತದ ಪಾದಯಾತ್ರೆಗೆ ಸುರ್ಜೇವಾಲ ಚಾಲನೆ ನೀಡಲಿದ್ದಾರೆ ಎಂದರು.

ಸುಮಾರು ಎರಡು ತಾಸು ನಡೆದ ಸಭೆಯಲ್ಲಿ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಕಾಂಗ್ರೆಸ್​ನಲ್ಲಿ ಯಾವುದೇ ಒಳಜಗಳ ಇಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಬೊಮ್ಮಾಯಿ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಸರ್ಕಾರ ಶೇ 40 ಕಮಿಷನ್ ಸರ್ಕಾರ. ಬಿಟ್​ಕಾಯಿನ್ ಹಗರಣ ಬೊಮ್ಮಾಯಿ ಮನೆಬಾಗಿಲಿಗೆ ಬಂದು ನಿಂತಿದೆ. ಈ ಎಲ್ಲಾ ವಿಚಾರವನ್ನ ರಾಜ್ಯದ ಜನರ ಗಮನಕ್ಕೆ ತರುವ ಕೆಲಸ‌ ಕಾಂಗ್ರೆಸ್ ಮಾಡಲಿದೆ. ಒಗ್ಗಟ್ಟಿನಿಂದ ಬಿಜೆಪಿ ವಿರುದ್ದ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ

ಕಾಂಗ್ರೆಸ್ ಚುನಾವಣೆ ತಯಾರಿ

ಕಾಂಗ್ರೆಸ್ ಪಕ್ಷದ ಕರ್ನಾಟಕ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕರ್ನಾಟಕದಲ್ಲಿ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರವೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ಗೆ ಪೂರಕ ವಾತಾವರಣವಿರುವ ದೇಶದ ಕೆಲವೇ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ಮೇಕೆದಾಟು ಮತ್ತು ಸದನದ ಕಲಾಪದಲ್ಲಿ ಪ್ರತಿಭಟನೆ ಮಾಡುವ ಮೂಲಕ ಜನರ ಗಮನ ಸೆಳೆಯಲು ಯತ್ನಿಸಿತು.

ಕಾಂಗ್ರೆಸ್ ಪಕ್ಷದ ಕರ್ನಾಟಕ ಘಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನಿಸಿಕೆ ಹಲವರಲ್ಲಿ ವ್ಯಕ್ತವಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯನ್ನೇ ಗೌಣವಾಗಿಸಿ, ಸಾಮೂಹಿಕ ನಾಯಕತ್ವಕ್ಕೆ ಆದ್ಯತೆ ನೀಡಬೇಕು ಎನ್ನುವ ಆಶಯ ಕೇಂದ್ರ ನಾಯಕತ್ವಕ್ಕೆ ಇದೆ.

ಇದನ್ನೂ ಓದಿ: ಬಿಜೆಪಿಯ ಭಾರತದ ದೃಷ್ಟಿಯಲ್ಲಿ ಒಂದು ಸಿದ್ಧಾಂತ, ಭಾಷೆ ಇತರರಿಗಿಂತ ಶ್ರೇಷ್ಠ ಎಂದು ಭಾವಿಸುತ್ತದೆ: ರಾಹುಲ್ ಗಾಂಧಿ

ಇದನ್ನೂ ಓದಿ: 200 ಶಾಸಕರಿಗೆ ಐಫೋನ್​ ಗಿಫ್ಟ್ ನೀಡಿದ ರಾಜಸ್ಥಾನ ಕಾಂಗ್ರೆಸ್ ಸರ್ಕಾರ; ವಾಪಸ್​ ಕೊಡಲು ನಿರ್ಧರಿಸಿದ ಬಿಜೆಪಿ ಶಾಸಕರು

Published On - 5:24 pm, Thu, 24 February 22