ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣ: ಜುಲೈ 22ರಂದು ಕಾಂಗ್ರೆಸ್ ಶಾಸಕರಿಂದ ರಾಜಭವನ ಮುತ್ತಿಗೆ

ಜುಲೈ 22ರಂದು ಬೆಳಗ್ಗೆ 10 ಗಂಟೆಯಿಂದ ಕೆಪಿಸಿಸಿ ಕಚೇರಿಯಿಂದ ಱಲಿ ನಡೆಯಲಿದೆ. ಮೆರವಣಿಗೆ ಮೂಲಕ ಹೊರಡಲಿರುವ ಕಾಂಗ್ರೆಸ್ ಶಾಸಕರು ರಾಜಭವನಕ್ಕೆ ತೆರಳಲಿದ್ದಾರೆ. ಪ್ರತಿಭಟನಾ ಱಲಿಯಲ್ಲಿ ನಗರ ಶಾಸಕರು ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣ: ಜುಲೈ 22ರಂದು ಕಾಂಗ್ರೆಸ್ ಶಾಸಕರಿಂದ ರಾಜಭವನ ಮುತ್ತಿಗೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Jul 20, 2021 | 10:42 PM

ಬೆಂಗಳೂರು: ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಬೆಳವಣಿಗೆಗಳು ಚುರುಕುಗೊಂಡಿದೆ. ಪ್ರಕರಣ ವಿರೋಧಿಸಿ ಜುಲೈ 22ರಂದು ಕಾಂಗ್ರೆಸ್​ ಶಾಸಕರಿಂದ ರಾಜಭವನ ಮುತ್ತಿಗೆ ನಡೆಯಲಿದೆ. ಜುಲೈ 22ರಂದು ಬೆಳಗ್ಗೆ 10 ಗಂಟೆಯಿಂದ ಕೆಪಿಸಿಸಿ ಕಚೇರಿಯಿಂದ ಱಲಿ ನಡೆಯಲಿದೆ. ಮೆರವಣಿಗೆ ಮೂಲಕ ಹೊರಡಲಿರುವ ಕಾಂಗ್ರೆಸ್ ಶಾಸಕರು ರಾಜಭವನಕ್ಕೆ ತೆರಳಲಿದ್ದಾರೆ. ಪ್ರತಿಭಟನಾ ಱಲಿಯಲ್ಲಿ ನಗರ ಶಾಸಕರು ಭಾಗಿಯಾಗಲಿದ್ದಾರೆ.

ಇಸ್ರೇಲ್​ನ ಪೆಗಾಸಸ್ ತಂತ್ರಾಂಶದ ಮೂಲಕ ಗೂಡಚರ್ಯೆ (Pegasus Spyware)  ನಡೆಸಿದ ಆರೋಪ ಇದೀಗ ಕರ್ನಾಟಕ ರಾಜಕಾರಣದ ಅಂಗಳಕ್ಕೂ ಬಂದುನಿಂತಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಬಳಿ ಯಾವುದೇ ಮೊಬೈಲ್ ಇಲ್ಲ. ನನ್ನ ಆಪ್ತ ಸಹಾಯಕ ವೆಂಕಟೇಶ್ ಮೊಬೈಲ್ ಬಳಸುತ್ತೇನೆ. ಆತನ ಮೊಬೈಲ್ ಹ್ಯಾಕ್ ಮಾಡುತ್ತಿದ್ದಾರೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಪ್ತ ಸಹಾಯಕನ ಮತ್ತು ದೇವೇಗೌಡರ ಗನ್ ಮ್ಯಾನ್ ಮೊಬೈಲ್ ಹ್ಯಾಕ್ ಮಾಡಲಾಗುತ್ತಿದೆ. ಗೂಡಚರ್ಯೆ ಮೂಲಕ ಸರಕಾರ ಬೀಳಿಸುವ ತಂತ್ರ ಮಾಡಲಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಯಬೇಕು. ಈ ರೀತಿಯ ಕೊಳಕು ರಾಜಕೀಯ ಮಾಡಬಾರದು ಎಂದು ಆರೋಪಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಬಿಜೆಪಿ 104, ಕಾಂಗ್ರೆಸ್​ 86, ಜೆಡಿಎಸ್​ಗೆ 36 ಸ್ಥಾನ ಬಂದಿತ್ತು. ರಾಜ್ಯಪಾಲರು ಸರ್ಕಾರ ರಚಿಸಲು ಯಡಿಯೂರಪ್ಪಗೆ ಆಹ್ವಾನ ನೀಡಲಾಗಿತ್ತು. ಆದರೆ ಯಡಿಯೂರಪ್ಪ ಬಹುಮತ ಸಾಬೀತುಪಡಿಸಲಾಗಲಿಲ್ಲ. ಬಳಿಕ ಕಾಂಗ್ರೆಸ್​, ಜೆಡಿಎಸ್​ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್​ಗೆ ಬೆಂಬಲ ನೀಡಿದ್ದೆವು. ಇದಕ್ಕೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕೈಜೋಡಿಸಿತು. 2019ರ ಜುಲೈನಲ್ಲಿ 17 ಶಾಸಕರು ರಾಜೀನಾಮೆ ನೀಡಿದರು. ಯಾರೂ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿರಲಿಲ್ಲ. ಆ ಶಾಸಕರು ಕುಮಾರಸ್ವಾಮಿ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿದರು. ಇದಕ್ಕೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರಾಜಕಾರಣದಲ್ಲೂ ಪೆಗಾಸಸ್ ನೆರಳು; ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯ, ಡಾ ಪರಮೇಶ್ವರ್ ಫೋನ್ ಕದ್ದಾಲಿಕೆ ಆರೋಪ

ಕಾಂಗ್ರೆಸ್ ಆರೋಪ ನಿರಾಧಾರ, ಸಂಸತ್ ಅಧಿವೇಶನ ಭಂಗಗೊಳಿಸಲು ವಿಪಕ್ಷ ಹುನ್ನಾರ: ಪೆಗಾಸಸ್ ವಿವಾದ ಬಗ್ಗೆ ಬಿಜೆಪಿ ಪ್ರತಿಕ್ರಿಯೆ